ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ: ವಿಪಕ್ಷ ನಾಯಕ ಆರ್. ಅಶೋಕ್

Date:

“ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ. ಇದನ್ನು ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಮಾಡುತ್ತಿದ್ದಾರೆ” ಎಂದು  ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಜಿ ಸಚಿವ ರೇವಣ್ಣ ಅವರನ್ನು ಕೂಡಲೇ ಬಂಧಿಸಿದ್ದರೂ, ಚಾಲಕನನ್ನು ಮಾತ್ರ ಬಂಧಿಸಿಲ್ಲ. ಎಸ್ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದಂತೆ ಇಲ್ಲಿ ತಿಮಿಂಗಿಲವೇ ಇದೆ.‌ ಅದನ್ನು ಬಡಿದು ತಿನ್ನಬೇಕಾ ಬೇಡವಾ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ” ಎಂದು ಹೇಳಿದರು.

“ಮಾಜಿ ಪ್ರಧಾನಿ ದೇವೇಗೌಡರ ಮೂಲಕ ಇಡೀ ಒಕ್ಕಲಿಗ ಸಮುದಾಯವನ್ನು ಅಪಮಾನಿಸಬೇಕಿತ್ತೇ ಎಂದು ಜನರು ಮಾತನಾಡುತ್ತಿದ್ದಾರೆ. ಆದ್ದರಿಂದ ಬಿಜೆಪಿಯ ಮೇಲೆ ಆರೋಪ ತರುವ ಪ್ರಯತ್ನ ನಡೆದಿದೆ” ಎಂದು ಅಶೋಕ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತನಿಖೆಯ ಪ್ರತಿ ಮಾಹಿತಿ ಮೊದಲು ಕಾಂಗ್ರೆಸ್ ‌ನಾಯಕರಿಗೆ ತಲುಪುತ್ತಿದೆ.‌ ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಆ‌ ನಂತರ ಯಾರೆಲ್ಲ ಬಂಧನಕ್ಕೊಳಗಾಗುತ್ತಾರೆ ಎಂದು‌ ನೋಡಲಿ ” ಎಂದರು.

“ಕಾರು ಚಾಲಕ ಎಲ್ಲೋ ನಿಂತು ಸಂದೇಶ ಕಳುಹಿಸುತ್ತಿದ್ದಾನೆ. ಶಾಸಕ ಮಂಜು ಸೇರಿದಂತೆ ಹಲವರ ಮೇಲೆ ಆರೋಪ ಮಾಡಲಾಗಿದೆ. ಕಾಂಗ್ರೆಸ್‌ನವರೇ ಚಾಲಕನನ್ನು ಎಲ್ಲೋ ಇರಿಸಿದ್ದಾರೆ. ಹಾಸನದಲ್ಲಿ ಎಲ್ಲ ಕಡೆ ಪೆನ್‌ಡ್ರೈವ್ ಹಂಚಲಾಗಿದೆ ಎಂದ ಮೇಲೆ ಅದು ಬಿಜೆಪಿ ಕಾರ್ಯಕರ್ತರಿಗೆ ತಲುಪಿರಬಹುದು. ಆದರೆ ಕಾಂಗ್ರೆಸ್ ಕಾರ್ಯಕರ್ತರ ಬಳಿಯೂ ವಿಡಿಯೋ ಇದೆ. ಆ ರೀತಿಯಲ್ಲಿ ನೋಡುವುದಾದರೆ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡ ಬಂಧಿಸಬೇಕಿತ್ತು” ಎಂದರು.

“ಮಾಜಿ ಸಚಿವ ರೇವಣ್ಣ ಜೈಲಿಗೆ ಹೋದಾಗ ಕಾಂಗ್ರೆಸ್ ‌ನಾಯಕರು ಹೆಚ್ಚು ಖುಷಿ ಪಟ್ಟಿದ್ದಾರೆ. ಇದು ವ್ಯವಸ್ಥಿತ ಸಂಚಾಗಿದ್ದು, ಎಲ್ಲರೂ ಟೀಮ್ ಮಾಡಿಕೊಂಡಿದ್ದಾರೆ. ಚುನಾವಣೆಯ ದೃಷ್ಟಿಯಿಂದ ಈ ಕೆಲಸ ಮಾಡಿದ್ದಾರೆ. ತಿಮಿಂಗಿಲ ಆಮ್ಲಜನಕಕ್ಕಾಗಿ ಹೊರಗೆ ಬರಲೇಬೇಕು. ಮುಂದೆ ಇದು ತಿಳಿದುಬರಲಿದೆ” ಎಂದರು.

ಇದನ್ನು ಓದಿದ್ದೀರಾ? ವಿಧಾನ ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರ; ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು!

“ಕಳೆದ ಬಾರಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದಾಗ ಕಾಂಗ್ರೆಸ್ ‌ನಾಯಕರು ಏನೂ ಮಾಡಲಿಲ್ಲ. ಆಗ ಬಂದಂತೆ ಮುಂದೆಯೂ ಬಿಟ್ಟು ಬರುತ್ತಾರೆ. ಫಲಿತಾಂಶ ಬಂದ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಭ್ರಷ್ಟ ಸರ್ಕಾರದ ಪಾಪದ ಕರ್ಮ, ರೈತರ ಆತ್ಮಹತ್ಯೆ, ಮಕ್ಕಳ ಮಾರಾಟ, ಬರಗಾಲದ ಬವಣೆ, ಮೊದಲಾದ ಕಾರಣಗಳಿಂದ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಬೀಳಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಗಲುಗನಸು ಕಾಣುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ 90ಕ್ಕೂ ಅಧಿಕ‌ ಶಾಸಕರು ಪಕ್ಷ ಬಿಟ್ಟು ಹೋಗಿದ್ದರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದ ನಂತರ ‌ಕಾಂಗ್ರೆಸ್‌ಗೆ ಗಂಟೆ ಮೂಟೆ ಕಟ್ಟುವುದೇ ಗತಿ” ಎಂದು ಆರ್ ಅಶೋಕ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...