ಹಾಸನದ ಜೆಡಿಎಸ್ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆ ನೀಡಿದೆ.
ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠವು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಅಲ್ಲದೇ ಸಂಸತ್ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿದೆ. ಆದರೆ ಸಂಸತ್‌ನಿಂದ ಬರುವ ಭತ್ಯೆ ಬಳಕೆ ಮಾಡದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.





