ಜರ್ಮನಿಯಿಂದ ಬೆಂಗಳೂರಿನತ್ತ ಹೊರಟ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

Date:

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಹೊರಟಿರುವುದಾಗಿ ತಿಳಿದುಬಂದಿದೆ.

ಭಾರತೀಯ ಕಾಲಮಾನ ಸಂಜೆ 4.09ಕ್ಕೆ ಮ್ಯೂನಿಕ್‌ನಿಂದ ಟೇಕಾಫ್ ಆಗಿರುವ ಲುಫ್ತಾನ್ಸಾ ಏರ್‌ಲೈನ್ಸ್‌ನ ಎಲ್‌ಎಚ್ 764 ವಿಮಾನದಲ್ಲಿ ಹತ್ತಿರುವುದಾಗಿ ತಿಳಿದುಬಂದಿದ್ದು, ಗುರುವಾರ ತಡರಾತ್ರಿ 12.40ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ ಎಂದು ವರದಿಯಾಗಿದೆ.

ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಇರುವ ಮಾಹಿತಿ ಎಸ್‌ಐಟಿಗೆ ಲಭ್ಯವಾಗಿರುವ ಹಿನ್ನೆಲೆಯಲ್ಲಿ, ರಾತ್ರಿ ಪ್ರಜ್ವಲ್‌ ರೇವಣ್ಣ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಅಧಿಕಾರಿಗಳು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮ್ಯೂನಿಕ್ ವಿಮಾನ ನಿಲ್ದಾಣದಿಂದ ಹೊರಟಿರುವ ವಿಮಾನವು, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ಕ್ಕೆ ಬಂದಿಳಿಯಲಿದೆ. ಹೀಗಾಗಿ, ನಿಲ್ದಾಣದಲ್ಲಿಯೇ ಅಧಿಕಾರಿಗಳ ತಂಡ ಬೀಡು ಬಿಟ್ಟಿದೆ. ನಿಲ್ದಾಣದ ಅಧಿಕಾರಿಗಳ ಸಹಾಯದಿಂದ ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಾಗುವುದು ಎಂದು ತಿಳಿದುಬಂದಿದೆ. ಪ್ರಜ್ವಲ್ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿಕೊಂಡೇ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ.

ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯಲಿರುವ ಬಳ್ಳಾರಿ ರಸ್ತೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಅವರು ಸೂಕ್ತ ಬಂದೋಬಸ್ತ್ ಒದಗಿಸುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನ‌ರ್ ಬಿ. ದಯಾನಂದ್‌ ಅವರಲ್ಲಿ ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಸಿಎಂ, ಡಿಸಿಎಂ ಸಭೆ

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಎಲ್ಲ ವಿವರಗಳನ್ನು ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ. ಅಲ್ಲದೇ, ಪ್ರಕರಣದ ಬಗ್ಗೆ ಮುಂದಿನ ಕಾನೂನು ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿರುವುದಾಗಿ ವರದಿಯಾಗಿದೆ.

ಮೇ 31ರಂದು ಎಸ್‌ಐಟಿ ಮುಂದೆ ಹಾಜರು

ವಿದೇಶದಲ್ಲಿದ್ದುಕೊಂಡೇ ಇತ್ತೀಚೆಗೆ ವಿಡಿಯೋವನ್ನು ಬಿಡುಗಡೆಗೊಳಿಸಿದ್ದ ಪ್ರಜ್ವಲ್ ರೇವಣ್ಣ, “ಮೇ 31 ರಂದು ಎಸ್‌ಐಟಿ ಪೊಲೀಸರೆದುರು ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ” ಎಂದು ತಿಳಿಸಿದ್ದ.

ಇದನ್ನು ಓದಿದ್ದೀರಾ? ಸಿಎಂ, ನನ್ನ ವಿರುದ್ಧ ಕೇರಳದ ದೇವಸ್ಥಾನದಲ್ಲಿ ಶತ್ರು ಸಂಹಾರ ಯಾಗ ನಡೀತಿದೆ: ಡಿ ಕೆ ಶಿವಕುಮಾರ್ ಆರೋಪ

ವಿಡಿಯೋದಲ್ಲಿ, “ನನ್ನನ್ನು ತಪ್ಪು ತಿಳಿಯಬೇಡಿ. ಮೇ 31 ರಂದು 10 ಗಂಟೆಗೆ ನಾನು ಎಸ್‌ಐಟಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ. ನಾನು ನ್ಯಾಯಾಂಗವನ್ನು ನಂಬಲಿದ್ದು, ಇವೆಲ್ಲವು ನನ್ನ ವಿರುದ್ಧ ವಿರುವ ಸುಳ್ಳು ಪ್ರಕರಣಗಳಾಗಿವೆ. ನಾನು ಕಾನೂನನ್ನು ನಂಬುತ್ತೇನೆ” ಎಂದು ಪ್ರಜ್ವಲ್ ರೇವಣ್ಣ ತಿಳಿಸಿದ್ದ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...