ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಆಪ್ತರಿಬ್ಬರಿಗೆ ಜಾಮೀನು

Date:

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಆಪ್ತರಿಬ್ಬರಿಗೆ ಜಾಮೀನು ಲಭಿಸಿದೆ.

ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡ ಎಂಬುವವರಿಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಆರು ಮತ್ತು ಏಳನೇ ಆರೋಪಿಗಳಾಗಿದ್ದ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾದ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡರನ್ನು ಮೇ 12ರಂದು ಎಸ್‌ಐಟಿ ತಂಡ ಬಂಧಿಸಿ ವಿಚಾರಣೆ ನಡೆಸಿದ ನಂತರ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಹದಿನೆಂಟು ದಿನಗಳ ಬಳಿಕ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಹಾಸನದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಚೇತನ್ ಹಾಗೂ ಲಿಖಿತ್‌ಗೌಡ ಇದ್ದು, ಇಂದು ಸಂಜೆ ಅಥವಾ ನಾಳೆ (ಶುಕ್ರವಾರ) ಇಬ್ಬರೂ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಬ್ಬರು ಆರೋಪಿಗಳ ಪರ ವಕೀಲ ಹರೀಶ್ ಬಾಬು ವಾದ ಮಂಡಿಸಿದ್ದರು.

ಬಂಧಿತ ಕಾಂಗ್ರೆಸ್ ಕಾರ್ಯಕರ್ತರು ಮೂರು ದಿನ ಎಸ್‌ಐಟಿ ಕಸ್ಟಡಿಗೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೊ ವೈರಲ್‌ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರು ಕಾಂಗ್ರೆಸ್ ಕಾರ್ಯಕರ್ತರಾದ ನವೀನ್ ಗೌಡ ಹಾಗೂ ಚೇತನ್‌ನನ್ನು ಮೂರು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್: ವಿದೇಶದಿಂದ ಬಂದ ಕೂಡಲೇ ಬಂಧನ?

ಜೂನ್ 1 ರಂದು ಶನಿವಾರ ಸಂಜೆ 4.30ಕ್ಕೆ ಆರೋಪಿಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲು ಸೂಚಿಸಲಾಗಿದೆ. ಜೂನ್ 1ರವರೆಗೆ ನವೀನ್ ಹಾಗೂ ಚೇತನ್ ಎಸ್ಐಟಿ ಕಸ್ಟಡಿಗೆ ನೀಡಿ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್, ನವೀನ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇದ್ದ ಕಾರಣ ಹೈಕೋರ್ಟ್‌ಗೆ ಬಂದಿದ್ದರು. ಈ ವೇಳೆ ಇಬ್ಬರನ್ನೂ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...