ಲೈಂಗಿಕ ದೌರ್ಜನ್ಯ ಪ್ರಕರಣ | ಎಸ್‌ಐಟಿ ಮುಂದೆ ಹಾಜರಾಗಲು ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Date:

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ದೇಶಾದ್ಯಂತ ಸುದ್ದಿಯಲ್ಲಿದೆ. ಈ ನಡುವೆ ಮೊದಲ ಬಾರಿಗೆ ಸಾರ್ವಜನಿಕ ಹೇಳಿಕೆ ನೀಡಿರುವ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ,”ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಟ್ವೀಟ್ ಮಾಡಿದ್ದಲ್ಲದೇ, ಎಸ್‌ಐಟಿ ಮುಂದೆ ಹಾಜರಾಗಲು ಏಳುದಿನಗಳ ಕಾಲಾವಕಾಶ ಕೋರಿದ್ದಾರೆ.

ಇಂದು(ಮೇ 1) ಸಂಜೆ 04:02ಕ್ಕೆ ವಿದೇಶದಿಂದಲೇ ಟ್ವೀಟ್ ಮಾಡಿರುವ ಪ್ರಜ್ವಲ್ ರೇವಣ್ಣ, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಸಿಐಡಿ ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಟ್ವೀಟ್‌ ಮಾಡಿದ್ದಾರೆ. ತನ್ನ ವಕೀಲರು ವಿಶೇಷ ತನಿಖಾ ತಂಡಕ್ಕೆ ಬರೆದಿರುವ ಮನವಿ ಪತ್ರವನ್ನೂ ಕೂಡ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮನವಿ ಪತ್ರವನ್ನು ಪ್ರಜ್ವಲ್ ರೇವಣ್ಣ ಅವರ ವಕೀಲ ಅರುಣ್ ಜಿ ಅವರ ಮೂಲಕ ವಿಶೇಷ ತನಿಖಾ ತಂಡಕ್ಕೆ ಬರೆದಿದ್ದಾರೆ. ಈ ಮನವಿ ಪತ್ರದಲ್ಲಿ, ಕಲಂ 41 (ಎ) ಸಿ.ಆರ್.ಪಿ.ಸಿ ಅಡಿಯಲ್ಲಿ ನೀಡಿರುವ ನೋಟಿಸ್‌ಗೆ ಖುದ್ದಾಗಿ ಹಾಜರಾಗಲು ಏಳುದಿನಗಳ ಕಾಲಾವಕಾಶ ಕೋರಲಾಗಿದೆ.

“ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಿದ್ದು, ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಸುಮಾರು ಏಳು ದಿನಗಳ ಕಾಲಾವಕಾಶ ಕೊಟ್ಟು ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು” ಪ್ರಜ್ವಲ್ ರೇವಣ್ಣ ಪರ ವಕೀಲರು ಎಸ್‌ಐಟಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಹಾಸನದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಮೇ 1ರಂದು ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಹಾಗೂ ಹೆಚ್ ಡಿ ರೇವಣ್ಣನವರಿಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಮನ್ಸ್ ಕಳುಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...