ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಜೆಡಿಎಸ್‌ನಿಂದ ರಾಜ್ಯಪಾಲರ ಭೇಟಿ: ಸಾಥ್ ನೀಡದ ಬಿಜೆಪಿ!

Date:

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಪಟ್ಟಂತೆ ಪೆನ್‌ಡ್ರೈವ್ ಹಂಚಿಕೆ ಮತ್ತು ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ನಿಯೋಗವು ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು.

ರಾಜಭವನಕ್ಕೆ ತೆರಳಿ ಜೆಡಿಎಸ್ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯನವರ ಕಚೇರಿ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನೂ ಕೂಡ ಥಳುಕು ಹಾಕಿದ್ದಾರೆ. ಅವರ ಹುದ್ದೆಯ ಘನತೆಯನ್ನು ಹಾಳುಗೆಡವಲು ಯತ್ನಿಸಿದ್ದಾರೆ. ಹಾಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳಿ” ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ, ಮನವಿಯಲ್ಲಿ, “ರಾಜ್ಯ ಸರ್ಕಾರವು ಈ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ದಳದ ತನಿಖೆಯು ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿಲ್ಲ. ರಾಜ್ಯ ಸರ್ಕಾರದ ಹಸ್ತಕ್ಷೇಪಗಳು ಕೂಡ ಇರುವ ಬಗ್ಗೆ ತಿಳಿದುಬಂದಿದೆ. ಹಾಗಾಗಿ, ಪೆನ್‌ಡ್ರೈವ್ ಹಂಚಿಕೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಸಿಬಿಐಗೆ ವಹಿಸಬೇಕು. ಸಿಬಿಐಗೆ ವಹಿಸುವಂತೆ ತಮ್ಮಿಂದಾದ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಆಗ್ರಹಿಸಿದೆ.

“ಈ ಪ್ರಕರಣದ ಹಿಂದಿನ ಮಾಸ್ಟರ್‍‌ಮೈಂಡ್ ಡಿಸಿಎಂ ಡಿ ಕೆ ಶಿವಕುಮಾರ್. ಅವರನ್ನು ಸಂಪುಟದಿಂದ ಕೈಬಿಡಬೇಕು. ಪೆನ್‌ಡ್ರೈವ್ ಹಂಚಿರುವುದರಲ್ಲಿ ನೇರ ಆರೋಪ ಹೊತ್ತಿರುವ ಹಾಸನದ ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಅವರನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿದೆ. ಹಾಗಾಗಿ, ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸುತ್ತಿದ್ದೇವೆ” ಎಂದು ಮನವಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದಲ್ಲಿ ನಡೆದಿರುವ ಎಲ್ಲ ಬೆಳವಣಿಗೆಗಳನ್ನು ಉಲ್ಲೇಖಿಸಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಿದೆ.

ಜೆಡಿಎಸ್‌ನ ಈ ನಿಯೋಗದಲ್ಲಿ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಸೇರಿದಂತೆ ಬಹುತೇಕ ಎಲ್ಲ ಜೆಡಿಎಸ್ ಶಾಸಕರು ಉಪಸ್ಥಿತರಿದ್ದರು.

ಜೆಡಿಎಸ್‌ಗೆ ಸಾಥ್ ನೀಡದ ಮೈತ್ರಿ ಪಕ್ಷ ಬಿಜೆಪಿ!

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮುಖಂಡರು, ರಾಜ್ಯಪಾಲರನ್ನು ಭೇಟಿಯ ವೇಳೆ ಜೆಡಿಎಸ್‌ಗೆ ಸಾಥ್ ನೀಡಿಲ್ಲ. ಚುನಾವಣೆ ಮುಗಿಯುವವರೆಗೂ ಒಟ್ಟಾಗಿ ಓಡಾಡಿದ್ದ ಬಿಜೆಪಿ ನಾಯಕರು, ಪ್ರಜ್ವಲ್ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದಾರೆ.

ರಾಜ್ಯಪಾಲರ ಇಂದಿನ ಭೇಟಿಯ ವೇಳೆ ತೆರಳಿದ ನಿಯೋಗದಲ್ಲಿ ಒಬ್ಬನೇ ಒಬ್ಬ ಬಿಜೆಪಿ ಮುಖಂಡ ಇರಲಿಲ್ಲ. ಲೋಕಸಭಾ ಚುನಾವಣೆಯ ಫಲಿತಾಂಶ ಬರುವುದಕ್ಕೂ ಮುನ್ನವೇ ಮೈತ್ರಿ ಮುರಿದು ಹೋಗಿದೆಯಾ ಎಂಬ ಅನುಮಾನ ಕಾಡತೊಡಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...