ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಪ್ರಕರಣ ಕೈಬಿಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Date:

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ತನಿಖೆ ನಡೆಯುತ್ತಿದೆ. ಈ ನಡುವೆ, ತನ್ನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಹಲವಾರು ಮಹಿಳೆಯರನ್ನು ಪ್ರಜ್ವಲ್‌ ರೇವಣ್ಣ ಬೆದರಿಸಿ, ಆಮಿಷವೊಡ್ಡಿ, ಬ್ಲಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ತಾನು ಎಸಗಿದ್ದ ಕೃತ್ಯಗಳನ್ನು ತಾನೇ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳಿದ್ದ ಪೆನ್‌ಡ್ರೈವ್‌ಗಳು ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಹಾಸನ ನಗರದಾದ್ಯಂತ ಪತ್ತೆಯಾಗಿದ್ದವು.

ಪೆನ್‌ಡ್ರೈವ್‌ನಿಂದಾಗಿ ಪ್ರಜ್ವಲ್‌ ರೇವಣ್ಣನ ಲೈಂಗಿಕ ದೌರ್ಜನ್ಯದ ಕೃತ್ಯಗಳು ಬೆಳಕಿಗೆ ಬಂದಿದ್ದವು. ಬಳಿಕ, ಪ್ರಜ್ವಲ್‌ ರೇವಣ್ಣನನ್ನು ಪೊಲೀಸರು ಬಂಧಿಸಿದ್ದರು. ಪ್ರಸ್ತುತ, ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿಯೇ ಇದ್ದಾರೆ. ಆತ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ಹಲವು ಬಾರಿ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಕೆ.ಆರ್‌ ನಗರದ ಸಂತ್ರಸ್ತ ಮಹಿಳೆಯೊಬ್ಬರು ಆತನ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಆತನ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ನಿಗದಿ ಪಡಿಸಿದೆ.

ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿರುವ ಓರ್ವ ಮಹಿಳೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಇಬ್ಬರೂ ಜಾಮೀನು ಪಡೆದು ಹೊರಬಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...