ಪ್ರಜ್ವಲ್-ರೇವಣ್ಣ ಲೈಂಗಿಕ ಹಗರಣ | ರೇವಣ್ಣಗೆ ಒಂದು ದಿನದ ಮಟ್ಟಿಗೆ ಜಾಮೀನು

Date:

ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ದಿನ ಜೈಲಿನಲ್ಲಿದ್ದು, ಇತ್ತೀಚೆಗೆ ಬಿಡುಗಡೆಯಾಗಿದ್ದ ಎಚ್‌.ಡಿ ರೇವಣ್ಣ ಅವರಿಗೆ ಮತ್ತೊಂದು ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ರೇವಣ್ಣ ಅವರಿಗೆ ಒಂದು ದಿನದ ಮಧ್ಯಂತರ ಜಾಮೀನು ನೀಡಿ ​ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ರೇವಣ್ಣ ಅವರು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಮೇ 17ರ ಮಧ್ಯಾಹ್ನದವರೆಗೂ ಮಾತ್ರ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ವಿಚಾರಣೆ ವೇಳೆ, ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇಬ್ಬರ ಶ್ಯೂರಿಟಿ, ₹5 ಲಕ್ಷ ಬಾಂಡ್ ಒದಗಿಸುವಂತೆ ಷರತ್ತು ವಿಧಿಸಿದೆ. ಮತ್ತೆ ಈ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 17ರಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದಲ್ಲಿ ಜಾಮೀನು ನೀಡಬೇಕೆಂದು ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಪರ ವಕೀಲ ಅರುಣ್ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಸಿಇಟಿ ಪರೀಕ್ಷೆ ಎಡವಟ್ಟು | ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲೂ ಮೊದಲನೇ ಆರೋಪಿ ಆಗಿರುವ ರೇವಣ್ಣ, ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ಗೆ ಹಾಜರಾಗಿದ್ದರು. ನ್ಯಾಯಾಧೀಶರ ಮುಂದೆಯೇ ಹಾಜರಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಇನ್ನು ಮೈಸೂರಿನ ಕೆ.ಆರ್‌ ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಂತ್ರಸ್ತೆಯ ಅಪಹರಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿರುವ ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್‌ಐಟಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...