ಪ್ರಜ್ವಲ್-ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ | ಸಂತ್ರಸ್ತೆಯಿಂದ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ: ಸಚಿವ ಪರಮೇಶ್ವರ್‌

Date:

ಸಂಸದ‌ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ‌, “ನಿನ್ನೆಯೊಬ್ಬರು ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಎಸ್ಐಟಿಯವರು ಒತ್ತಾಯಪೂರ್ವಕವಾಗಿ ಆಕೆಯಿಂದ ಸ್ಟೇಟ್ಮೆಂಟ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಯಾರಿಂದಲೂ ಬಾರದು. ಹೀಗಾಗಿ ಮ್ಯಾಜಿಸ್ಟ್ರೇಟ್ ಮುಂದೆಯೇ 164 ಅಡಿ ಹೇಳಿಕೆ ಕೊಡಿಸಲಾಗಿದೆ” ಎಂದರು.

“ಪ್ರಜ್ವಲ್ ರೇವಣ್ಣಗೆ 41A ಅಡಿಯಲ್ಲಿ ನೋಟಿಸ್ ಕೂಡಲಾಗಿದೆ. ಪ್ರಜ್ವಲ್ ಪರ ವಕೀಲ ಕಾಲಾವಕಾಶ ಕೇಳಿದ್ದಾರೆ. ಇದಕ್ಕೆ ಅವಕಾಶವಿಲ್ಲ ಎಂಬುದನ್ನು ತಿಳಿಸಿದ್ದೇವೆ. ರೇವಣ್ಣಗೂ ಕೂಡ 41A ಅಡಿ ನೀಟಿಸ್ ನೀಡಲಾಗಿದೆ. ರೇವಣ್ಣ ಸಹ 24 ಗಂಟೆ ಕಾಲಾವಕಾಶ ಕೇಳಿದ್ದಾರೆ. ಕಾನೂನು ಪ್ರಕಾರ ಮತ್ತೊಂದು ನೋಟಿಸ್ ನೀಡಿದ್ದೇವೆ. ಇದಕ್ಕೆ ಸ್ಪಂದಿಸದಿದ್ದರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜ್ವಲ್ ರೇವಣ್ಣ ಕುರಿತು ಲುಕ್ ಔಟ್ ನೊಡೀಸ್ ಹೊರಡಿಸಲಾಗಿದೆ.‌ ಎಲ್ಲ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣಗಳಿಗೆ ಫೋಟೋ ಸಮೇತ ನೋಟಿಸ್ ಕಳುಹಿಸಲಾಗಿದೆ‌‌.‌ ನಿಯಮಾನುಸಾರದ ಪ್ರಕಾರವೇ ಲುಕ್ ಔಟ್ ನೊಟೀಸ್ ನೀಡಿದ್ದೇವೆ. ರೇವಣ್ಣ ಅವರ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿರುವುದು ಗೊತ್ತಿಲ್ಲ. ಪ್ರಜ್ವಲ್ ರೇವಣ್ಣ ದುಬೈಗೆ ಹೋಗಿರುವುದು ಗೊತ್ತಿಲ್ಲ. ಜರ್ಮನಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದೆ” ಎಂದರು.

ರಾಜಕೀಯ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ನನಗೆ ಒಂದಷ್ಟು ಜವಾಬ್ಧಾರಿಗಳಿವೆ. ಹಾಗಾಗಿ, ರಾಜಕೀಯ ಪ್ರತಿಕ್ರಿಯೆ ನೀಡುವುದಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅವರು ಯಾವ ಅಧಾರದ ಮೇಲೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ‌. ಇದಕ್ಕೆಲ್ಲ ಮುಖ್ಯಮಂತ್ರಿಯವರು, ಪಕ್ಷದ ಅಧ್ಯಕ್ಷರು ಉತ್ತರಿಸುತ್ತಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...