ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಆರೋಪ: ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಸಹಿತ ಇಬ್ಬರ ಬಂಧನ

Date:

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಸಹಿತ ಇಬ್ಬರನ್ನು ಇಂದು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದ ಮೇಲೆ ನವೀನ್ ಗೌಡ ಸಹಿತ ಚೇತನ್ ಎಂಬವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಇಬ್ಬರೂ ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‌ಡ್ರೈವ್ ಹಂಚಿಕೆ ಆರೋಪ ಹೊತ್ತುಕೊಂಡಿರುವ ಈ ಇಬ್ಬರು ಆರೋಪಿಗಳು ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್ ಕಡೆ ಬಂದಿದ್ದ ವೇಳೆಯೇ ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸಲು ಸಿಐಡಿ ಕಚೇರಿಗೆ ಕರೆದೊಯ್ಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೆನ್‌ಡ್ರೈವ್‌ ಹಂಚಿಕೆ ಆರೋಪದಲ್ಲಿ ಏ.23ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ 6 ಮತ್ತು 7ನೇ ಆರೋಪಿಗಳಾಗಿ ಇತ್ತೀಚೆಗೆ ಚೇತನ್ ಹಾಗೂ ಲಿಖಿತ್ ಬಂಧನವಾಗಿತ್ತು. ಇದೀಗ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣ ದಾಖಲಾದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಾದ ನವೀನ್ ಗೌಡ, ಚೇತನ್ ಹಾಗೂ ಪುಟ್ಟಿ ಆಲಿಯಾಸ್ ಪುಟ್ಟರಾಜ್ ತಲೆಮರೆಸಿಕೊಂಡಿದ್ದರಿಂದ ಎಸ್‌ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರಾದರೂ, ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ. ಇದೀಗ ಅವರೇ ವಿಚಾರಣೆಗಾಗಿ ಕೋರ್ಟ್‌ ಬಳಿ ಬಂದಾಗ ಸಿಕ್ಕಿಬಿದ್ದಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಹಾಸನ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರು ಪಡಿಸಲು ಎಸ್ಐಟಿ ತಂಡ ಕರೆದೊಯ್ದಿದೆ. ನವೀನ್ ಗೌಡ ಹಾಗೂ ಚೇತನ್ ವಿರುದ್ಧ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಹಂಚಿಕೆ ಆರೋಪವಿತ್ತು. ಪ್ರಜ್ವಲ್ ರೇವಣ್ಣ ಆಪ್ತ ಪೂರ್ಣಚಂದ್ರ ತೇಜಸ್ವಿ ಎಂಬಾತ ಇವರ ವಿರುದ್ಧ ಏ.23ರಂದು ದೂರು‌ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...