ಪ್ರಜ್ವಲ್ ಲೈಂಗಿಕ ಹಗರಣ | ಅಶ್ಲೀಲಕ್ಕೂ ಮಿತಿ ಇರಬೇಕು – ಇದು ಎಲ್ಲವನ್ನು ಮೀರಿದೆ: ಹೈಕೋರ್ಟ್‌ ಕಿಡಿ

Date:

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್‌, ವಿಕೃತ ಕಾಮುಕ, ಆರೋಪಿ ಪ್ರಜ್ವಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ‘ಅಶ್ಲೀಲಕ್ಕೂ ಮಿತಿ ಇರಬೇಕು – ಈ ಪ್ರಕರಣವನ್ನು ಎಲ್ಲವನ್ನು ಮೀರಿದೆ’ ಎಂದು ಹೇಳಿದೆ.

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಳ್ಳಲಾಗಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ವಿಚಾರಣೆ ನಡೆಸಿದೆ. ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜ್ವಲ್ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಗದೀಶ್, “ಈಗಾಗಲೇ ಎಲ್ಲ ಫೋಟೋ, ವಿಡಿಯೋಗಳನ್ನು ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ವಿಳಂಬಗೊಳಿಸಲು ಇಂತಹ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಜಿಯನ್ನು ವಜಾಗೊಳಿಸಬೇಕು” ಎಂದು ವಾದಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ವಾದ ಆಲಿಸಿದ ಹೈಕೋರ್ಟ್, “ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗುವುದಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳೆಲ್ಲವೂ ಅಶ್ಲೀಲವಾಗಿವೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನು ಮೀರಿದೆ. ಇಷ್ಟೊಂದು ವಿಕೃತವಾಗಿ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ವಲ್ ರೇವಣ್ಣನ ಅಶ್ಲೀಲ ಹಗರಣ ಹೊರಬಂದಿತು. ಆತನ ವಿಕೃತಿಯ ವಿಡಿಯೋಗಳು, ಫೋಟೋಗಳುಳ್ಳ ಪೆನ್‌ಡ್ರೈವ್‌ಗಳು ಹಾಸನದ ಸಾರ್ವಜನಿಕ ಪ್ರದೇಶಗಳಲ್ಲಿ ಸಿಕ್ಕಿದ್ದವು. ಆ ವಿಡಿಯೋಗಳನ್ನು ಸ್ವತಃ ಪ್ರಜ್ವಲ್‌ ರೇವಣ್ಣನೇ ಮಾಡಿದ್ದಾರೆ. ಆ ವಿಡಿಯೋ ಮತ್ತು ಫೋಟೋಗಳಲ್ಲಿ ವಯಸ್ಕ ಯುವತಿಯರು, ವಯಸ್ಸಾದ ಮಹಿಳೆಯರು, ವಿವಾಹಿತರು ಮತ್ತು ಅವಿವಾಹಿತ ಮಹಿಳೆಯರು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಮಹಿಳೆಯರ ಮೇಲೆ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪ್ರಜ್ವಲ್ ತನ್ನ ಕಾಮತೃಷೆ ತೀರಿಸಿಕೊಳ್ಳಲು ನೂರಾರು ಹೆಣ್ಣುಮಕ್ಕಳಿಗೆ ಬೆದರಿಕೆ, ಬ್ಲಾಕ್‌ಮೇಲ್, ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆತನನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...