ಪ್ರಜ್ವಲ್‌ನನ್ನು ಕುಮಾರಸ್ವಾಮಿ ಮಗ ಎಂದಿದ್ದಾರೆ, ನೂಲಿನಂತೆ ಸೀರೆ ಇರುತ್ತೆ: ಡಿ ಕೆ ಶಿವಕುಮಾರ್‌ ತಿರುಗೇಟು

Date:

ಕುಮಾರಸ್ವಾಮಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಪೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಅದರಲ್ಲಿ “ಪ್ರಜ್ವಲ್ ನನ್ನ ಮಗ” ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ, ಪ್ರಜ್ವಲ್ ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದರು.

ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಪ್ರಕರಣದಲ್ಲಿ ಮಹಾನ್ ನಾಯಕರ ಕೈವಾಡ ಇದೆ ಎಂದು ಹೇಳಿದ್ದರು. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಡಿಕೆಶಿ ಮಾತನಾಡಿದರು.

“ನಾನು ಇಂತಹ ಚಿಲ್ಲರೆ ಕೆಲಸವನ್ನು ಮಾಡುವುದಿಲ್ಲ. ಬೆಳಿಗ್ಗೆ ಡ್ರೈವರ್ ಅಂತೆ, ಬಿಜೆಪಿಯವರು ಮಾಡಿದ್ದಾರೆ ಎಂದು ಹೇಳಿದ್ದಾರೆ. ನಾನಂತ ಇಂತಹ ಚಿಲ್ಲರೆ ಕೆಲಸ ಮಾಡಲ್ಲ. ಬದಲಾಗಿ ಚುನಾವಣೆಯಲ್ಲಿ ಎದುರಿಸುತ್ತೇನೆ. ನನ್ನ ಬಳಿ ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ಬದಲಾಗಿ ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ”‌ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ವಜಾ ಮಾಡಲಿ ಅಥವಾ ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ರಾಜಕಾರಣದಲ್ಲಿ ನನಗೂ ಗೊತ್ತಿದೆ ಅಮಾನತ್ತು ಅಂದ್ರೇನು ಎಂಬುದು?” ಎಂದು ವಾಗ್ದಾಳಿ ನಡೆಸಿದರು.

“ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಕೊಡಬೇಕಿದೆ. ರಾಜ್ಯದ ಮರ್ಯಾದೆ ಹೋಗುತ್ತಿದೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಂಡಿದ್ದಾರೆ. ಭಗವಂತ ಇದನ್ನೆಲ್ಲಾ ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜೊತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದ್ರು ಕೇಳಿ ಅವರಿಗೆ” ಎಂದು ಡಿಕೆಶಿ ಸವಾಲು ಹಾಕಿದರು.

“ಪ್ರಜ್ವಲ್‌ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಏನು ಎಂಬುವುದನ್ನು ಹೇಳಬೇಕು. ಪ್ರಹ್ಲಾದ್ ಜೋಶಿ, ಸುನೀಲ್ ಕುಮಾರ್, ಯತ್ನಾಳ್, ಬೊಮ್ಮಾಯಿ, ಶೋಭಕ್ಕ ಯಾಕೆ ಇದರ ಬಗ್ಗೆ ಮಾತಾಡುತ್ತಿಲ್ಲ. ಹಳೆ ವಿಡಿಯೋ ಎಂದು ಸ್ವತಃ ಎಚ್‌ ಡಿ ರೇವಣ್ಣ ಒಪ್ಪಿಕೊಂಡಿದ್ದಾರೆ. ವಿಡಿಯೋ ವಿಚಾರವಾಗಿ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದ ಸಂಗತಿ ಏನಾಯ್ತು?” ಎಂದ ಪ್ರಶ್ನಿಸಿದರು.

“ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುತ್ತಾರೆ. ಉಡುಪಿಯ ಶಾಲೆಯಲ್ಲಿ ನಡೆದ ಪ್ರಕರಣವೊಂದರಲ್ಲಿ ರಾಷ್ಟ್ರೀಯ ಮಹಿಳಾ ಆಯೋಗವನ್ನು ಕಳಿಸಲಾಗಿತ್ತು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಮಾತಾಡುತ್ತಿಲ್ಲ? ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...