ಕೇಂದ್ರದ ದ್ರೋಹ ಸಮರ್ಥಿಸಿದ ಪ್ರಲ್ಹಾದ್‌ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿದ್ದರಾಮಯ್ಯ ಕರೆ

Date:

ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಲ್ಹಾದ್‌ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಹುಬ್ಬಳ್ಳಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಹಸೂಟಿ ಪರವಾಗಿ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

“ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಲ್ಹಾದ್‌ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯವನ್ನು ಪ್ರತಿನಿಧಿಸಿದ್ದರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಇವರನ್ನು ಸೋಲಿಸಿ ಮನೆಗೆ ಕಳುಹಿಸಿದರೆ ಮಾತ್ರ ನಿಮ್ಮ ಮತಕ್ಕೆ ಗೌರವ ಬರುತ್ತದೆ” ಎಂದರು.

“ಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಹಸೂಟಿಯವರು ಈ ಬಾರಿ ಗೆದ್ದೇ ಗೆಲ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಕರೆ ನೀಡಿದರು.

ಪ್ರಲ್ಹಾದ್ ಜೋಶಿ ಸೋಲಿಸಲು ಶಪಥ

ಸಚಿವರಾದ ಸಂತೋಷ್ ಲಾಡ್, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜತೆಗೆ ಶಾಸಕರಾದ ಕೋನರೆಡ್ಡಿ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ನಾಯಕರಾದ ಯಾಸಿರ್ ಖಾನ್ ಪಠಾಣ್, ಸೋಮಣ್ಣ ಬೇವಿನಮರದ, ಅಜೀಂ ಪೀರ್ ಖಾದ್ರಿ ಸೇರಿ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರುಗಳು ಒಟ್ಟಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಶಪಥ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...