ಕದನ ವಿರಾಮ | ವಿಶ್ವಾಸ ದ್ರೋಹ ಎಸಗಿದ ಪ್ರಧಾನಿ ಮೋದಿ: ಮುತಾಲಿಕ್ ಆಕ್ರೋಶ

Date:

ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳುವ ಮೂಲಕ ಪ್ರಧಾನಿ ಮೋದಿ ವಿಶ್ವಾಸ ದ್ರೋಹ ಎಸಗಿದ್ದಾರೆ ಎಂದು ಮುತಾಲಿಕ್ ಆರೋಪಿಸಿದ್ದಾರೆ.

ಭಾರತ ಪಾಕಿಸ್ತಾನ ಕದನ ವಿರಾಮದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ಪಾಕಿಸ್ತಾನ 78 ವರ್ಷಗಳಿಂದ ಹಿಂದೂಗಳ ರಕ್ತ ಹರಿಸಿದೆ. ಪಾಕ್‌ ಅನ್ನು ನಾಶಗೊಳಿಸುವವರೆಗೂ ಭಾರತ ಕದನ ವಿರಾಮ ಘೋಸಿಬಾರದಿತ್ತು. ಪ್ರಧಾನಿ ಮೋದಿ ತಪ್ಪು ನಿರ್ಧಾರ ಮಾಡಿ ನೂರು ಕೋಟಿ ಹಿಂದೂಗಳ ವಿಶ್ವಾಸಕ್ಕೆ ದ್ರೋಹ ಎಸಗಿದ್ದಾರೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? BREAKING NEWS | ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಶ್ರೀನಗರದ ಮೇಲೆ ಶೆಲ್ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟು ವರ್ಷ ಕ್ರೌರ್ಯ , ಭಯೋತ್ಪಾದನೆ ನಡೆಸಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲೇಬೇಕಿತ್ತು. ಭಾರತದ ಕದನ ವಿರಾಮ ನಿರ್ಧಾರವನ್ನು ನಾವಂತೂ ಒಪ್ಪಲ್ಲ. ಪ್ರಧಾನಿ ಮೋದಿ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾರೆ” ಎಂದು ದೂರಿದರು.

“ಈ ಹಿಂದೆಯೂ ಪಾಕಿಸ್ತಾನ ಕದನ ವಿರಾಮ ಒಪ್ಪಂದ ಮಾಡಿಕೊಂಡಿದೆ. ಆದರೆ ಅದೆಷ್ಟೋ ಭಾರತೀಯರನ್ನು ಕೊಂದಿದೆ. ಈಗ ಮೋದಿ ಎಷ್ಟು ಭಾರತೀಯರನ್ನು ಸಾಯಿಸುವ ನಿರ್ಧಾರ ಮಾಡಿದ್ದಾರೆ. ಅಷ್ಟಕ್ಕೂ ದೇಶದ ಆಂತರಿಕ ವಿಷಯದಲ್ಲಿ ತಲೆ ಹಾಕಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಾರು” ಎಂದು ಮುತಾಲಿಕ್ ಪ್ರಶ್ನಿಸಿದರು.

“ಅಂತಾರಾಷ್ಟ್ರೀಯ ಮಟ್ಟದಲ್ಲಿ, ಆಂತರಿಕವಾಗಿ ಸಾಕಷ್ಟು ಒತ್ತಡ ಇರಬಹುದು. ಆದರೆ ದೇಶದ ಸುರಕ್ಷತೆಯ ದೃಷ್ಟಿಯಿಂದ ಮೋದಿ ಕದನ ವಿರಾಮವನ್ನು ಈ ಕೂಡಲೇ ವಾಪಸ್ ಪಡೆಯಬೇಕು. ನಾವು ನಿಮ್ಮನ್ನು ಒಬ್ಬನೇ ಒಬ್ಬ ಹಿಂದೂ ಸಾಯಬಾರದು ಎಂದು ಪ್ರಧಾನಿ ಸ್ಥಾನ ನೀಡಿ ಕೂರಿಸಿರುವುದು. ನಿಮ್ಮ ಕದನ ವಿರಾಮ ನಿರ್ಧಾರದ ವಿರುದ್ಧ ನಾವು ಹೋರಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...