ಬಿಹಾರ, ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರಾಗಿ ಪ್ರಶಾಂತ್ ಕಿಶೋರ್ ನೋಂದಣಿ; ವಿವಾದ

Date:

ಚುನಾವಣಾ ತಂತ್ರಜ್ಞ, ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನೇತಾರ ಪ್ರಶಾಂತ್ ಕಿಶೋರ್ ಅವರು ಪಶ್ಚಿಮ ಬಂಗಾಳ ಮತ್ತು ಬಿಹಾರ ಎರಡೂ ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ನಡೆಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರ ಮತದಾರ ನೋಂದಣಿಯು ವಿವಾದಕ್ಕೆ ಕಾರಣವಾಗಿದೆ. ಆಕ್ಷೇಪಗಳಿಗೆ ಗುರಿಯಾಗಿದೆ.

ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಜೆಎಸ್‌ಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಜ್ಯಾದ್ಯಂತ ಜೆಎಸ್‌ಪಿ ಪ್ರಚಾರ ಮತ್ತು ಅಭ್ಯರ್ಥಿಗಳನ್ನು ಗೆಲ್ಲಿಸುವ ಉದ್ದೇಶದಿಂದ ತಾವು ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದಿರುವ ಕಿಶೋರ್, ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಆದಾಗ್ಯೂ, ಅವರ ಮತದಾರ ನೋಂದಣಿಯು ವಿವಾದ ಸೃಷ್ಟಿಸಿದೆ.

ವರದಿಗಳ ಪ್ರಕಾರ, ಬಿಹಾರದ ರೋಹ್ತಾಸ್ ಜಿಲ್ಲೆಯ ಕಾರ್ಗಹರ್ ವಿಧಾನಸಭಾ ಕ್ಷೇತ್ರದಲ್ಲಿ ಕಿಶೋರ್ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಕ್ಷೇತ್ರದ ಕೋನಾರ್‌ನಲ್ಲಿರುವ ‘ಮಧ್ಯ ವಿದ್ಯಾಲಯ’ವು ಅವರ ಪೂರ್ವಜನರ ಗ್ರಾಮವಾಗಿದ್ದು, ಅವರು ಆ ಮತಗಟ್ಟೆಯಲ್ಲಿ ಮತಚಲಾಯಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಅವರು ಪಶ್ಚಿಮ ಬಂಗಾಳದಲ್ಲಿಯೂ ಮತದಾರರಾಗಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಧಾನಸಭಾ ಕ್ಷೇತ್ರದ ಭಬಾನಿಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಅವರು ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಬಂಗಾಳದಲ್ಲಿ ಅವರ ವಿಳಾಸವು 121 ಕಾಲಿಘಾಟ್ ರಸ್ತೆಯಾಗಿದೆ. ಇದೇ ರಸ್ತೆಯಲ್ಲಿ ಟಿಎಂಸಿ ಪ್ರಧಾನ ಕಚೇರಿಯೂ ಇದೆ. ಅಲ್ಲಿ, ಕಿಶೋರ್ ಮತದಾನ ಮಾಡುವ ಮತಗಟ್ಟೆಯು ಬಿ ರಾಣಿಶಂಕರಿ ಲೇನ್‌ನಲ್ಲಿರುವ ಸೇಂಟ್ ಹೆಲೆನ್ ಶಾಲೆ ಎಂದು ಪಟ್ಟಿ ಮಾಡಲಾಗಿದೆ. 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಿಶೋರ್ ಅವರು ಟಿಎಂಸಿಗೆ ರಾಜಕೀಯ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಬಂಗಾಳದಲ್ಲಿ ಮತದಾನವನ್ನೂ ಮಾಡಿದ್ದರು.

ಈ ಲೇಖನ ಓದಿದ್ದೀರಾ?: ಸಂಘಿಗಳು ತುಂಬಿರುವ ಕಾಂಗ್ರೆಸ್ಸಿನಲ್ಲಿ ಸಿದ್ದು- ಖರ್ಗೆ-ಹರಿಪ್ರಸಾದ್-ಜಾರಕಿಹೊಳಿ ಸೈದ್ಧಾಂತಿಕ ಬದ್ಧತೆ

ಎರಡು ರಾಜ್ಯಗಳಲ್ಲಿ ಮತದಾನದ ಹಕ್ಕು ಹೊಂದಿರುವ ಬಗ್ಗೆ ಕಿಶೋರ್ ಪ್ರತಿಕ್ರಿಯೆ ನೀಡಿಲ್ಲ. ಅವರ ಸಂಪರ್ಕಕ್ಕೆ ಯತ್ನಿಸಿದವರ ಸಂಪರ್ಕಕ್ಕೂ ದೊರೆತಿಲ್ಲ ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

“ಪಶ್ಚಿಮ ಬಂಗಾಳ ಚುನಾವಣೆಯ ನಂತರ ಕಿಶೋರ್ ಅವರು ಬಿಹಾರದ ಕಾರ್ಗಹರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ಅಳಿಸಲು ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯ ಸ್ಥಿತಿ ಯಾವ ಹಂತದಲ್ಲಿದೆ ಎಂಬುದು ನಮಗೆ ತಿಳಿದಿಲ್ಲ” ಎಂದು ಜೆಎಸ್‌ಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಕಿಶೋರ್ ಅವರ ಜೆಎಸ್‌ಪಿ ಬಿಹಾರದ ಎಲ್ಲ 243 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಕಿಶೋರ್ ಅವರು ಕಾರ್ಗಹರ್ ವಿಧಾನಸಭಾ ಕ್ಷೇತ್ರದಲ್ಲಿ ಆರ್‌ಜೆಡಿ ನಾಯಕ, ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಪ್ರಸಾದ್ ಯಾದವ್ ವಿರುದ್ಧ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆಯುತ್ತಿದ್ದವು. ಆದರೆ, ಅವರು ಇದ್ದಕ್ಕಿದ್ದಂತೆ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...