ಕೊಡಗಿನಲ್ಲಿ ಪ್ರತಾಪ್ ಸಿಂಹಗಿದೆ ಬೇನಾಮಿ ಆಸ್ತಿ: ಕೆಪಿಸಿಸಿ ವಕ್ತಾರ

Date:

ಸಂಸದ ಪ್ರತಾಪ್‌ ಸಿಂಹ ಅವರು ಕೆಲವರಿಂದ ಹಣ ವಸೂಲಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ ಕಾಮಗಾರಿಯಲ್ಲಿ ಕಮಿಷನ್‌ ಪಡೆದಿದ್ದಾರೆ. ಆ ಹಣವನ್ನ ಕೊಡಗು ನ್ಯೂಟ್ರಿಷಿಯನ್ ಎಂಬ ಕಂಪನಿಯಲ್ಲಿ ಬೇನಾಮಿ ಹೆಸರಿನಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮೈಸೂರು ವಿಶ್ವವಿದ್ಯಾನಿಲಯದ ಒಬ್ಬರು ಸಿಂಡಿಕೇಟ್‌ ಸದಸ್ಯರಿಂದ ಪ್ರತಾಪ್ ಸಿಂಹ ಹಣ ವಸೂಲಿ ಮಾಡಿದ್ದಾರೆ. ಅಲ್ಲದೆ, ಎಕ್ಸ್‌ಪ್ರೆಸ್‌-ವೇ ಕಾಮಕಾರಿಯಲ್ಲೂ ಕಮಿಷನ್ ಪಡೆದಿದ್ದಾರೆ. ಆ ಹಣದಲ್ಲಿ ಸುಮಾರು 50– 60 ಕೋಟಿ ರೂ. ಹಣವನ್ನು ಕೊಡಗು ನ್ಯೂಟ್ರಿಷಿಯನ್‌ನಲ್ಲಿ ಹೂಡಿಕೆ ಮಾಡಿದ್ದಾರೆ” ಎಂದು ದೂರಿದ್ದಾರೆ.

“ಜೊತೆಗೆ, ಕಂಪನಿಗೆ ಹೂಡಿಕೆ ಮಾಡಿರುವ ಹಣದಲ್ಲಿ ಕೆಲವು ಅಧಿಕಾರಿಗಳೂ ಪಾಲು ಹೊಂದಿದ್ದಾರೆ. ಈ ಬಗ್ಗೆ ಐಟಿ ಹಾಗೂ ಇಡಿಗೆ ದೂರು ನೀಡುತ್ತೇನೆ. ತನಿಖೆಗೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪತ್ರ ಬರೆಯುತ್ತೇನೆ’’ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...