ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕೆನ್ನುವವರು ಮಿತ್ರ ಪಕ್ಷಗಳ ಸಭೆಯಲ್ಲಿ ಭಾಗಿ: ಈಶ್ವರ ಖಂಡ್ರೆ

Date:

ಯಾರು ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕು ಎಂದು ಬಯಸುತ್ತಾರೋ ಅವರೆಲ್ಲರೂ ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಭಾಗಿಯಾಗುತ್ತಾರೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ನಡೆಯುವ ಕಾಂಗ್ರೆಸ್ ಮಿತ್ರ ಪಕ್ಷಗಳ ಸಭೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

“ದೇಶದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಆ ಒಂದು ದೃಷ್ಟಿಯಿಂದ ಎಲ್ಲ ಮಿತ್ರ ಪಕ್ಷಗಳು ಒಗ್ಗೂಡಿ ದೇಶದಲ್ಲಿ ನಡೆಯುತ್ತಿರುವ ದುರಾಡಳಿತ ವಿರುದ್ಧ ಒಂದು ತೀರ್ಮಾನ ಮಾಡುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಗ್ಗಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆ ತಯಾರಿ ನಡೆಯುತ್ತದೆ. ಎಲ್ಲ ರೀತಿಯ ಪೂರ್ವಸಿದ್ಧತೆಗಳು ಆಗಿವೆ. ದೇಶದಲ್ಲಿರುವ ಎಲ್ಲ ಪ್ರತಿಪಕ್ಷಗಳು ಸಭೆಯಲ್ಲಿ ಭಾಗಿಯಾಗುತ್ತವೆ” ಎಂದು ತಿಳಿಸಿದರು.

ಮೈಸೂರು ದಸರಾ ಸಿದ್ಧತೆ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, “ಅಧಿಕಾರಿಗಳ ಸಭೆ ಕರೆದಿದ್ದೇನೆ. ದಸರಾ ಜಂಬೂ ಸವಾರಿಗೆ ಆನೆಗಳು ಇನ್ನಿತರ ತಯಾರಿ ಬಗ್ಗೆ ಸವಿಸ್ತಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.

ಸಿಂಹದ ಮರಿಗಳಿಗೆ ನಾಮಕರಣ

“ಸಚಿವ ಆದ ಬಳಿಕ ಮೊದಲ ಬಾರಿಗೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದೇನೆ. ವಿಶೇಷವಾಗಿ ಈ ಮೃಗಾಲಯದಲ್ಲಿ ಐದು ಸಿಂಹಗಳಿವೆ, ರಾಜು ಮತ್ತು ನಿರ್ಭಯ ಸಿಂಹಗಳಿಗೆ ಜನಿಸಿದ ಮೂರು ಮರಿಗಳಿಗೆ ಸೂರ್ಯ, ಚಂದ್ರ, ಕಬಿನಿ ಎಂದು ನಾಮಕರಣ ಮಾಡಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಅವಕಾಶವಾದಿ ಜೆಡಿಎಸ್ ಪಕ್ಷ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ; ದಿನೇಶ್‌ ಗುಂಡೂರಾವ್‌ ಟೀಕೆ

“ಮೃಗಾಲಯದ ಅಧಿಕಾರಿಗಳು ಮೃಗಾಲಯವನ್ನು ತುಂಬಾ ಚೆನ್ನಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಲಕ್ಷಾಂತರ ಜನ ಮೃಗಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ನಮ್ಮ ಮುಂದಿನ ಪೀಳಿಗೆಗೆ ಪ್ರಾಣಿಗಳ ಕುರಿತು ತಿಳುವಳಿಕೆ ನೀಡುವಲ್ಲಿ ಮೃಗಾಲಯ ಪ್ರಮುಖವಾಗುತ್ತಿದೆ. ಅರಣ್ಯ ಇಲಾಖೆಯ ವತಿಯಿಂದ ಮೃಗಾಲಯದ ಅಭಿವೃದ್ಧಿಯ ಕುರಿತು ಸಭೆಯನ್ನೂ ನಡೆಸುತ್ತೇನೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...