ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದು, ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾನೂನಾಗಿ ಜಾರಿಯಾಗಲಿದೆ.
Government of India issues a gazette notification for the Women's Reservation Bill after it received the assent of President Droupadi Murmu. pic.twitter.com/GvDI2lGF1C
— ANI (@ANI) September 29, 2023
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆದ ನಂತರ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಮಸೂದೆಗೆ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.
ನಾರಿ ಶಕ್ತಿ ವಂದನಾ ಅಧಿನಿಯಮದ ಮೂಲಕ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರು ಶೇ.33ರಷ್ಟು ಮೀಸಲಾತಿ ಪಡೆಯಲಿದ್ದಾರೆ. ಆದರೆ ಇದು ಹೊಸ ಜನಗಣತಿಯ ನಂತರವಷ್ಟೇ ಮೀಸಲಾತಿ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ತಿಳಿಸಿತ್ತು.





