ಜನ ಬಳಕೆ ವಸ್ತು ಮತ್ತು ಸೇವೆಗಳ ದರ ಇಂದಿನಿಂದ ಮತ್ತಷ್ಟು ತುಟ್ಟಿ

Date:

ಹಾಲು, ಮೊಸರು, ವಿದ್ಯುತ್ ದರ, ಟೋಲ್ ಶುಲ್ಕ, ಕಸ ಸಂಗ್ರಹ ಮೇಲಿನ ಸೆಸ್ ಸೇರಿದಂತೆ ಜನ ಬಳಕೆಯ ವಸ್ತುಗಳು ಹಾಗೂ ಸೇವೆಗಳ ದರ ಇಂದಿನಿಂದ ಮತ್ತಷ್ಟು ತುಟ್ಟಿಯಾಗಲಿದೆ.

ದರ ಏರಿಕೆ ಬಿಸಿ ಸರಣಿ ಇಲ್ಲಿಗೆ ನಿಂತಿಲ್ಲ, ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾದಂತೆ ಇತರ ವಸ್ತುಗಳ ಬೆಲೆಯೂ ದುಬಾರಿಯಾಗುತ್ತಿವೆ. ಇಂದಿನಿಂದ ಜನ ಬಳಕೆಯ ಹಾಲು, ಮೊಸರು ದರ ಒಂದು ಲೀಟರ್​​ಗೆ 4 ರೂಪಾಯಿ ಏರಿಕೆಯಾಗಲಿದೆ. ಕೆಎಂಎಫ್ ಮನವಿಯಂತೆ ರಾಜ್ಯ ಸರ್ಕಾರ ಹಾಲಿನ ದರ ಏರಿಕೆಗೆ ಸಹಮತ ನೀಡಿದೆ. ಅದರಂತೆ ಹಾಲು, ಮೊಸರು ದರ ಹೆಚ್ಚಳ ಇಂದಿನಿಂದ ಗ್ರಾಹಕರ ಜೇಬು ಸುಡಲಿದೆ.

ಸಾರಿಗೆ ಕ್ಷೇತ್ರದಲ್ಲಿ ವಾಹನಗಳ ಟೋಲ್ ದರವೂ ಇಂದಿನಿಂದ ಹೆಚ್ಚಾಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅನುಮತಿಯಂತೆ ಟೋಲ್ ಶುಲ್ಕ ದರ ಶೇ. 3 ರಿಂದ 5 ರಷ್ಟು ಏರಿಕೆಯಾಗಲಿದೆ. ರಾಜ್ಯದಲ್ಲಿ ಒಟ್ಟು 60ಕ್ಕೂ ಹೆಚ್ಚು ಟೋಲ್ ಗಳಿದ್ದು ದರ ಏರಿಕೆ ಬಿಸಿ ವಾಹನ ಸವಾರರಿಗೆ ಹೊರೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯುತ್ ದರ ಹೆಚ್ಚಳವೂ ಸಹ ಇಂದಿನಿಂದ ಜಾರಿಗೆ ಬರಲಿದ್ದು, ಏಪ್ರಿಲ್ ತಿಂಗಳ ಬಿಲ್ ಪಾವತಿಸುವ ಸಂದರ್ಭದಲ್ಲಿ ವಿದ್ಯುತ್ ಬಿಲ್ ಶಾಕ್ ನೀಡಲಿದೆ. ಗೃಹ ಜ್ಯೋತಿ ಯೋಜನೆ ಹೊರತುಪಡಿಸಿದ ಗ್ರಾಹಕರಿಗೆ ಒಂದು ಯುನಿಟ್​​ಗೆ ವಿದ್ಯುತ್ ದರ 36 ಪೈಸೆಯಷ್ಟು ಹೆಚ್ಚಳವಾಗಲಿದೆ. ಕೆಪಿಟಿಸಿಎಲ್ ಮತ್ತು ಎಸ್ಕಾಮ್​​ಗಳ ಮನವಿ ಮೇರೆಗೆ ಕೆಇಆರ್​ಸಿ ವಿದ್ಯುತ್ ಏರಿಕೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆ ಪ್ರಕಾರ ಇಂದಿನಿಂದ ಒಂದು ಯುನಿಟ್​​ಗೆ 36 ಪೈಸೆ ಕರೆಂಟ್ ದರ ತುಟ್ಟಿಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಸ ಸಂಗ್ರಹದ ಮೇಲಿನ ಸೆಸ್ ಸಹ ಇಂದಿನಿಂದ ಜಾರಿಗೆ ಬರಲಿದೆ. ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ಕಸ ಸಂಗ್ರಹದ ಮೇಲೆ ಮಾಸಿಕ ಸೆಸ್ ಅನ್ನು ವಸೂಲು ಮಾಡಲಿದೆ. ಕಸದ ಸೆಸ್ ಅನ್ನು ಎರಡು ವಿಭಾಗಗಳನ್ನಾಗಿ ಮಾಡಲಾಗಿದ್ದು, ಮನೆಗಳ ಕಸ ಮತ್ತು ವಾಣಿಜ್ಯ ಸಂಸ್ಥೆಗಳ ಕಸ ಸಂಗ್ರಹಕ್ಕೆ ಪ್ರತ್ಯೇಕ ಪ್ರಮಾಣದ ಸೆಸ್ ವಿಧಿಸಲಾಗುತ್ತದೆ.

ಗೃಹ ಬಳಕೆಯ 600 ಚದರ್​ ಅಡಿವರೆಗಿನ ಕಟ್ಟಡಗಳಿಗೆ ತಿಂಗಳಿಗೆ 10 ರೂ., 600 ಚದರದಿಂದ 1000 ಚದರವರೆಗಿನ ಕಟ್ಟಡಗಳಿಗೆ ತಿಂಗಳಿಗೆ 50 ರೂ., 1 ಸಾವಿರದಿಂದ 2 ಸಾವಿರ ಚದರ್​ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 100 ರೂ., 2 ಸಾವಿರದಿಂದ 3 ಸಾವಿರ ಚದರ್​ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 150 ರೂ., 3 ಸಾವಿರದಿಂದ 4 ಸಾವಿರ ಚದರ್ ಅಡಿಗಳ ಕಟ್ಟಡಗಳಿಗೆ ತಿಂಗಳಿಗೆ 200 ರೂ., 4 ಸಾವಿರ ಚದರ್ ಅಡಿಗಳ ಮೇಲ್ಪಟ್ಟ ಕಟ್ಟಡಗಳಿಗೆ ತಿಂಗಳಿಗೆ 400 ರೂ. ಕಸ ಸಂಗ್ರಹದ ಸೆಸ್ ಇರಲಿದೆ.

ನೀರಿನ ದರ ಏರಿಕೆ ಶೀಘ್ರ

ಬೆಂಗಳೂರಿನಲ್ಲಿ ಜಲಮಂಡಳಿಯು ಯಾವುದೇ ಕ್ಷಣದಲ್ಲಿ ಕುಡಿಯುವ ನೀರಿನ ದರವನ್ನು ಹೆಚ್ಚಳ ಮಾಡಲು ಸಿದ್ಧತೆ ನಡೆಸಿದೆ. ರಾಜ್ಯ ಸರ್ಕಾರಕ್ಕೆ ಈಗಾಗಲೇ ದರ ಏರಿಕೆ ಕುರಿತು ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರವು ಒಂದು ಲೀಟರ್ ಕುಡಿಯುವ ನೀರಿಗೆ ಒಂದು ಪೈಸೆಯಷ್ಟು ದರ ಏರಿಕೆ ಮಾಡುವ ಚಿಂತನೆಯಲ್ಲಿದೆ.

ಕುಡಿಯುವ ನೀರಿನ ಜೊತೆಗೆ ರಾಜಧಾನಿಯಲ್ಲಿ ಆಟೋ ಪ್ರಯಾಣ ದರ ಏರಿಕೆ ಬಗ್ಗೆಯೂ ಸಾರಿಗೆ ಇಲಾಖೆ ಮತ್ತು ಆಟೋ ಸಂಘಗಳ ನಡುವೆ ಹಲವು ಸುತ್ತಿನ ಸಭೆ ನಡೆದಿದೆ. ಆಟೋ ಮೀಟರ್ ದರ ಸಹ ಹೆಚ್ಚಳವಾಗುವ ಕಾಲ ಸನ್ನಿಹಿತವಾಗಲಿದೆ. ಆಟೋಮೀಟರ್ ಕನಿಷ್ಠ ದರವು ಈಗಿರುವ 30 ರೂಪಾಯಿಯಿಂದ 40 ರೂಪಾಯಿ ತನಕ ಏರಿಕೆಯಾಗುವ ಸಾಧ್ಯತೆಗಳಿವೆ. ಒಂದು ಕಿಲೋಮೀಟರ್​​ಗೆ 5 ರೂಪಾಯಿ ಹೆಚ್ಚಿಸುವಂತೆ ಆಟೋ ಚಾಲಕರ ಮತ್ತು ಮಾಲೀಕರ ಸಂಘಗಳು ಸರ್ಕಾರದ ಮೇಲೆ ಒತ್ತಡ ಹೇರಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...