ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿರುವ ಕಾವೇರಿ ಮನವಿ, ಇನ್ನಾದರೂ ಪ್ರಧಾನಿ ಮಧ್ಯ ಪ್ರವೇಶಿಸಲಿ: ಸಿದ್ದರಾಮಯ್ಯ

Date:

  • ನಮ್ಮ ನ್ಯಾಯಯುತ ಪಾಲನ್ನು ಪಡೆಯಲು ರಾಜ್ಯಕ್ಕೆ ಸಹಾಯ ಮಾಡಿ
  • ನಮ್ಮ ರೈತರ ಭವಿಷ್ಯ ರಕ್ಷಿಸಿ; ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ

ನ್ಯಾಯಕ್ಕಾಗಿ ಕಾವೇರಿಯ ಮನವಿ ರಾಜ್ಯಾದ್ಯಂತ ಪ್ರತಿಧ್ವನಿಸುತ್ತದೆ. ರಾಜ್ಯದ ಜನತೆ ಪ್ರತಿ ಹನಿ ನೀರನ್ನು ಕೂಡ ಲೆಕ್ಕ ಇಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ ಮನವಿ ಸರಳವಾಗಿದೆ; ಕೂಡಲೇ ಮಧ್ಯಪ್ರವೇಶಿಸಿ, ಕಾವೇರಿ ನೀರಿನಲ್ಲಿ ನಮ್ಮ ನ್ಯಾಯಯುತ ಪಾಲನ್ನು ಪಡೆಯಲು ರಾಜ್ಯಕ್ಕೆ ಸಹಾಯ ಮಾಡಿ ಹಾಗೂ ನಮ್ಮ ರೈತರ ಭವಿಷ್ಯವನ್ನು ರಕ್ಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ದ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಕಾವೇರಿ ವಿಷಯದ ವಾದ ಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ. ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆಯನ್ನು ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಜನತಾ ದಳದ ವರಿಷ್ಠರಾದ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡಬೇಕಿದೆ. ರಾಜ್ಯ ಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾವೇರಿ ನೀರು ನಿಯಂತ್ರಣಾ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟ ಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು. ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ, ಮೇಕೆದಾಟು ಯೋಜನೆ ಅನುಷ್ಠಾನ. ಈ ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು” ಎಂದು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...