ಶ್ರೀನಿವಾಸಪ್ರಸಾದ್ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

Date:

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

“ಹಿರಿಯ ನಾಯಕ ಹಾಗೂ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತಾಪ ಸೂಚಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ” ಎಂದಿದ್ದಾರೆ.

“ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ” ಎಂದು ಬಣ್ಣಿಸಿದ್ದಾರೆ.

“ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆ ಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ” ಎಂದಿದ್ದಾರೆ.

“ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಸಂತಾಪ ಸೂಚಿಸಿದ್ದಾರೆ.

ಮೈಸೂರಿಗೆ ಸಿಎಂ ಪ್ರಯಾಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಶ್ರೀನಿವಾಸ ಪ್ರಸಾದ್ ಅವರಿಗೆ ಅಂತಿಮ‌ ನಮನ ಸಲ್ಲಿಸಲಿದ್ದಾರೆ.

ಅಪರೂಪದ ಜನನಾಯಕ: ಕುಮಾರಸ್ವಾಮಿ

“ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.

ಬೊಮ್ಮಾಯಿ ಟ್ವೀಟ್‌ ಮೂಲಕ ಸಂತಾಪ

ಕೇಂದ್ರದ ಮಾಜಿ ಸಚಿವರು, ಸಂಸದರು ಆಗಿದ್ದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ದುಖವಾಯಿತು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

“ಶ್ರೀನಿವಾಸ ಪ್ರಸಾದ ಅವರು, ಶಾಸಕರಾಗಿ, ಸಂಸದರಾಗಿ ಸುಮಾರು ಐವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಾನುರಾಗಿಯಾಗಿದ್ದರು. ಶ್ರೀನಿವಾಸ ಪ್ರಸಾದ ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಹಿರಿಯ ನಾಯಕ ಹಾಗೂ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ. ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ” ಎಂದು ಬೊಮ್ಮಾಯಿ ಸಂತಾಪದಲ್ಲಿ ತಿಳಿಸಿದ್ದಾರೆ.

ಸಚಿವ ಎಂ ಬಿ ಪಾಟೀಲ ಕಂಬನಿ

ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಸಚಿವ ಎಂ ಬಿ ಪಾಟೀಲ ಕಂಬನಿ ಮಿಡಿದಿದ್ದು, “ತೀರಾ ಸಾಮಾನ್ಯ ಹಿನ್ನೆಲೆಯಿಂದ ಬಂದವರಾಗಿದ್ದ ಪ್ರಸಾದ್ ಅವರು ಕೇಂದ್ರ ಸಚಿವರಾಗುವ ಹಂತಕ್ಕೆ ಬೆಳೆದಿದ್ದು ಒಂದು ದೊಡ್ಡ ಯಶೋಗಾಥೆಯಾಗಿದೆ. ಅವರು ದಲಿತರ ಸಬಲೀಕರಣಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ನಿಧನದಿಂದ ನಾಡು ಓರ್ವ ನೈಜ ನಾಯಕನನ್ನು ಕಳೆದುಕೊಂಡಿದೆ” ಎಂದಿದ್ದಾರೆ.

“ಸಂಸದರಾಗಿ, ಶಾಸಕರಾಗಿ, ಸಚಿವರಾಗಿ ಜನಾಭಿಪ್ರಾಯ ರೂಪಿಸಲು ಶಕ್ತರಾಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡುವ ಅವಕಾಶ ತಮಗೆ ಸಿಕ್ಕಿದ್ದು ಸುಕೃತವಾಗಿತ್ತು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ನಡುವೆಯೂ ಅವರು ಸ್ನೇಹ-ವಿಶ್ವಾಸಗಳಿಗೆ ಬೆಲೆ ಕೊಡುತ್ತಿದ್ದ ಸಹೃದಯಿಯಾಗಿದ್ದರು” ಎಂದು ಎಂ ಬಿ ಪಾಟೀಲ್‌ ಸ್ಮರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...