‘ದೇವಮಾನವ’ನಿಂದ ಮರಳಿ ‘ಮಾನವ’ನಾದ ಪ್ರಧಾನಿ ಮೋದಿ

Date:

ಈ ಹಿಂದೆ, ‘ನಾನು ಜೈವಿಕವಾಗಿ ಹುಟ್ಟಿಲ್ಲ. ದೇವರ ಕೃಪೆಯಿಂದ ಜನಿಸಿದ್ದೇನೆ’ ಎಂದು ತಮ್ಮನ್ನು ತಾವು ದೇವಮಾನವನೆಂದು ಕರೆದುಕೊಂಡಿದ್ದ ಪ್ರಧಾನಿ ಮೋದಿ, ಈಗ ತಮ್ಮ ಮಾತು ಬದಲಿಸಿದ್ದಾರೆ. ತಾವೂ ಜೈವಿಕವಾಗಿಯೇ ಹುಟ್ಟಿರುವುದಾಗಿಯೂ, ತಮ್ಮಿಂದಲೂ ತಪ್ಪುಗಳಾಗುತ್ತವೆ ಎಂದೂ ಹೇಳಿದ್ದಾರೆ.

‘ಪೀಪಲ್ ಬೈ ಡಬ್ಲ್ಯೂಟಿಎಫ್‌’ ಚಾನೆಲ್‌ನ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರ ಜೊತೆ ಪಾಡ್‌ಕ್ಯಾಸ್ಟ್‌ನಲ್ಲಿ ಮೋದಿ ಮಾತನಾಡಿದ್ದಾರೆ.

ಸಂಭಾಷಣೆಯ ಸಮಯದಲ್ಲಿ, ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಹಿಂದಿನ ಭಾಷಣವನ್ನು ನೆನಪಿಸಿಕೊಂಡರು, “ನಾನು ಮುಖ್ಯಮಂತ್ರಿ (ಗುಜರಾತ್) ಆಗಿದ್ದಾಗ, ನನ್ನ ಒಂದು ಭಾಷಣದಲ್ಲಿ ಹೇಳಿದ್ದೆ; ಮೊದಲನೆಯದಾಗಿ, ನನ್ನ ಪ್ರಯತ್ನಗಳಲ್ಲಿ ಯಾವುದೇ ಒಂದು ಸಣ್ಣ ಕಲ್ಲನ್ನು ಬಿಡುವುದಿಲ್ಲ. ಎರಡನೆಯದಾಗಿ, ನಾನು ನನಗಾಗಿ ಏನನ್ನೂ ಮಾಡಿಕೊಳ್ಳುವುದಿಲ್ಲ. ಮೂರನೆಯದಾಗಿ, ನಾನು ಮನುಷ್ಯ, ನಾನು ತಪ್ಪುಗಳನ್ನು ಮಾಡಬಹುದು. ಆದರೆ, ನಾನು ಕೆಟ್ಟ ಉದ್ದೇಶದಿಂದ ತಪ್ಪುಗಳನ್ನು ಮಾಡುವುದಿಲ್ಲ. ಇವುಗಳನ್ನು ನನ್ನ ಜೀವನದ ಮಂತ್ರಗಳನ್ನಾಗಿ ಮಾಡಿಕೊಂಡಿದ್ದೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಅಸಂವೇದನಾಶೀಲವಾಗಿ ಏನೋ ಹೇಳಿದೆ. ತಪ್ಪುಗಳು ಸಂಭವಿಸುತ್ತವೆ. ನಾನು ಮನುಷ್ಯ, ದೇವರಲ್ಲ” ಎಂದು ಮೋದಿ ಹೇಳಿದ್ದಾರೆ.

ಇದೇ ಮೋದಿ ಅವರು ಲೋಕಸಭಾ ಚುನಾವಣೆಯ ಸಮಯದಲ್ಲಿ ನಡೆದಿದ್ದ ಸಂದರ್ಶನವೊಂದರಲ್ಲಿ, ತಾವು ಜೈವಿಕವಲ್ಲ, ದೇವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾನೆಂದು ಭಾವಿಸಿದ್ದೇನೆ ಎಂದು ಹೇಳಿದ್ದರು. ಈಗ, ತಾವು ಜೈವಿಕವಾಗಿ ಹುಟ್ಟಿರುವುದಾಗಿಯೂ, ದೇವರಲ್ಲವೆಂದೂ, ತಾವವೂ ತಪ್ಪುಗಳನ್ನು ಮಾಡುವುದಾಗಿಯೂ ಹೇಳಿಕೊಂಡಿದ್ದಾರೆ.

ಮೋದಿ ಅವರ ಎರಡು ರೀತಿಯ ಹೇಳಿಕೆಗಳ ಬಗ್ಗೆ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಮೋದಿ ಅವರ ಹಳೆಯ ವಿಡಿಯೋ ಮತ್ತು ಈಗಿನ ವಿಡಿಯೋವನ್ನು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, “ಇದು ಕೇವಲ ಎಂಟು ತಿಂಗಳ ಹಿಂದೆ ತಮ್ಮ ಜೈವಿಕವಲ್ಲದ ಸ್ಥಿತಿಯನ್ನು ಘೋಷಿಸಿದ್ದ ವ್ಯಕ್ತಿಯ ವಿಡಿಯೋ. ಈಗ ಅವರು ತಾವು ಜೈವಿಕವಾಗಿ ಜನಿಸಿದ್ದಾಗಿ ಹೇಳುತ್ತಿದ್ದಾರೆ. ಅವರು ‘ಡ್ಯಾಮೆಜ್ ಕಂಟ್ರೋಲ್‌’ಗೆ ಯತ್ನಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...