ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್: ಮೋದಿ ಪ್ರವಾಸದ ಆಹ್ವಾನ ಪತ್ರ ಹಂಚಿಕೊಂಡ ಬಿಜೆಪಿ ವಕ್ತಾರ

Date:

ಪ್ರಧಾನಿ ನರೇಂದ್ರ ಮೋದಿ ಅವರು 20 ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂಡೋನೇಷ್ಯಾಗೆ ಭೇಟಿ ನೀಡುತ್ತಿದ್ದು, ‘ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್’ ಎಂಬ ಅಧಿಕೃತ ಆಹ್ವಾನ ಪತ್ರವನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಮಾಹಿತಿಯಲ್ಲಿ ನರೇಂದ್ರ ಮೋದಿ ಅವರನ್ನು “ಭಾರತದ ಪ್ರಧಾನಿ” ಎಂದು ಉಲ್ಲೇಖಿಸಲಾಗಿದೆ.

ಇದಲ್ಲದೆ, ಆಗಸ್ಟ್ 22-25 ರಂದು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ತೆರಳಿದ್ದ ಅವರ ಇತ್ತೀಚಿನ ಭೇಟಿಯ ಸಂದರ್ಭದಲ್ಲಿ ಸಮಾರಂಭದ ಪತ್ರಗಳಲ್ಲಿ ಮೋದಿ ಅವರನ್ನು ‘ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್’ ಎಂದು ಉಲ್ಲೇಖಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಭಾರತ, ಟರ್ಕಿಯಲ್ಲಿ ನಕಲಿ ಯಕೃತ್ತಿನ ಔಷಧಿ ಮಾರಾಟ: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

20ನೇ ಆಸಿಯಾನ್‌ – ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು(ಆಗಸ್ಟ್ 6) ರಾತ್ರಿ ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ. ಪ್ರಧಾನಿ ಮೋದಿಯವರನ್ನು ‘ದಿ ಪ್ರೈಮ್‌ ಮಿನಿಸ್ಟರ್‌ ಆಫ್‌ ಭಾರತ್’ ಎಂದು ಹೇಳುವ ಮೊದಲು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜಿ20 ಔತಣಕೂಟಕ್ಕೆ ಕಳುಹಿಸಿದ ಆಮಂತ್ರಣ ಪತ್ರದಲ್ಲಿ ‘ದಿ ಪ್ರೆಸಿಡೆಂಟ್ ಆಫ್‌ ಭಾರತ್’ ಎಂದು ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 18ರಂದು ಬಿಜೆಪಿ ಸರ್ಕಾರ 5 ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನವನ್ನೂ ಕರೆದಿದೆ. ಮುಂಬರುವ ವಿಶೇಷ ಅಧಿವೇಶನದಲ್ಲಿ ಇಂಡಿಯಾ ಹೆಸರನ್ನು ಭಾರತ ಎಂದು ಬದಲಾಯಿಸಲಾಗುವುದಕ್ಕೆ ಈ ಆಹ್ವಾನ ಪತ್ರಗಳು ಮತ್ತಷ್ಟು ಪುಷ್ಟಿ ನೀಡಿವೆ.

ಇಂಡೋನೇಷ್ಯಾ ಆತಿಥ್ಯ ವಹಿಸುತ್ತಿರುವ 20 ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 18 ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿ ಅವರು ಸೆಪ್ಟೆಂಬರ್ 6-7 ರಂದು ಎರಡು ದಿನಗಳ ಭೇಟಿಗಾಗಿ ಜಕಾರ್ತಾಕ್ಕೆ ಭೇಟಿ ನೀಡುತ್ತಿದ್ದಾರೆ.

ಜಿ-20 ಶೃಂಗಸಭೆ ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದ್ದು, ಆಸಿಯಾನ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಭಾರತಕ್ಕೆ ಮರಳಲಿದ್ದಾರೆ. ಇಂಡೋನೇಷ್ಯಾ G20 ‘ತ್ರಿಲೋಕ’ದ ಭಾಗವಾಗಿದೆ ಮತ್ತು ಕಳೆದ ವರ್ಷ ಜಿ20 ಗುಂಪಿನ ಅಧ್ಯಕ್ಷತೆ ವಹಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...