ಶಕ್ತಿ ಯೋಜನೆ | ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಒತ್ತಾಯ

Date:

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಅನುಷ್ಠಾನಗೊಂಡಿದೆ. ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿದೆ. ಇದರಿಂದಾಗಿ, ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಷ್ಟವಾಗುತ್ತಿದೆ ಎಂದು ಖಾಸಗಿ ಬಸ್‌ಗಳ ಮಾಲೀಕರು ಹೇಳುತ್ತಿದ್ದಾರೆ. ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ರಾಜ್ಯದಲ್ಲಿ ಶಕ್ತಿ ಯೋಜನೆ ಪ್ರಾರಂಭವಾದ ಒಂದು ದಿನದಲ್ಲಿ ಖಾಸಗಿ ಬಸ್‌ಗಳಿಗೆ ಪ್ರಯಾಣಿಕರ ಸಂಖ್ಯೆಯಲ್ಲಿ 50% ಕುಸಿತ ಕಂಡಿದೆ ಎಂದು ಖಾಸಗಿ ಬಸ್ ನಿರ್ವಾಹಕರು ಸೋಮವಾರ ಹೇಳಿದ್ದಾರೆ.

“ನಮ್ಮ ಬಸ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ವೇತನ ನೀಡಲು ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ. ಅವರು ತಮ್ಮ ಕುಟುಂಬಗಳನ್ನು ಪೋಷಿಸಲು ಹೇಗೆ ಸಾಧ್ಯ? ನಮ್ಮ ಬಸ್‌ಗಳಿಗೆ ಡೀಸೆಲ್‌ ಹಾಕಿಸಲೂ ಹಣವಿಲ್ಲ” ಎಂದು ಬೆಂಗಳೂರಿನ ಕೆಕೆ ಟ್ರಾವೆಲ್ಸ್ ಮಾಲೀಕ ನಿಸಾರ್ ಅಹಮದ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರು ಈಗ ಸರ್ಕಾರಿ ಬಸ್‌ಗಳನ್ನು ಹತ್ತಲು ಕಾಯುತ್ತಾರೆ. ನಾವು ಬಹುತೇಕ ಖಾಲಿ ಬಸ್‌ಗಳಲ್ಲಿ ಸಂಚಾರ ಮಾಡಬೇಕಾಗಿದೆ. ರಾಜ್ಯದಲ್ಲಿ 10,000 ಖಾಸಗಿ ಬಸ್‌ಗಳಿವೆ. ಈ ಬಸ್‌ಗಳಲ್ಲಿನ ದುಡಿಯನ್ನೇ ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವಿಸುತ್ತಿವೆ. ಉಚಿತ ಬಸ್ ಪ್ರಯಾಣವನ್ನು ವಿಸ್ತರಿಸಬೇಕು ಅಥವಾ ನಷ್ಟವನ್ನು ಸರಿದೂಗಿಸಲು ನಮಗೆ ತೆರಿಗೆ ವಿನಾಯಿತಿ ನೀಡಬೇಕು” ಎಂದು ಮತ್ತೊಬ್ಬ ಬಸ್‌ ಮಾಲೀಕ ವಿ ಗೀತೇಶ್‌ ಹೇಳಿರುವುದಾಗಿ ‘ಟಿಓಐ’ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ?: ಶಕ್ತಿ ಯೋಜನೆ | ಮತ್ತಷ್ಟು ‘ಸ್ವಾತಂತ್ರ್ಯ’ದತ್ತ ಮಹಿಳೆಯರ ಸವಾರಿ

“ಖಾಸಗಿ ಬಸ್‌ಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ವಾಹನ ವಿಮೆ ಕಂತುಗಳನ್ನು ಮತ್ತು ತ್ರೈಮಾಸಿಕ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಒಂದು ಟೈರ್ ಬದಲಾವಣೆಗೆ ರೂ 24,000 ವೆಚ್ಚವಾಗುತ್ತದೆ ಮತ್ತು ರಸ್ತೆಗಳ ಕೆಟ್ಟ ಸ್ಥಿತಿಯಿಂದಾಗಿ, ಬಸ್‌ಗಳು ಪದೇ ಪದೇ ಕೆಟ್ಟು ನಿಲ್ಲುತ್ತವೆ” ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...