‘ಜೈ ಶ್ರೀರಾಮ್’ ಎಂದಮಾತ್ರಕ್ಕೆ ಬಿಜೆಪಿಯವರು ಪಾಪ ಮು‌ಕ್ತರಾಗುವುದಿಲ್ಲ: ಅಶೋಕ್‌ಗೆ ಪ್ರಿಯಾಂಕ್‌ ಖರ್ಗೆ ತಿರುಗೇಟು

Date:

ಹಿಂದೂ ಧಾರ್ಮಿಕತೆ ವಿಚಾರವಾಗಿ ವಿಪಕ್ಷ ನಾಯಕ ಆರ್‌ ಅಶೋಕ್‌ ಮತ್ತು ಆರ್‌ಡಿಪಿಆರ್‌ ಸಚಿವ ಪ್ರಿಯಾಂಕ್‌ ಖರ್ಗೆ ನಡುವಿನ ವಾಕ್ಸಮರ ಮುಂದುವರಿದಿದೆ. ಈ ಇಬ್ಬರು ನಾಯಕರಿಂದ ನಾಲ್ಕು ದಿನದಿಂದ ಎಕ್ಸ್‌ ತಾಣದಲ್ಲಿ ಪರಸ್ಪರ ಮಾತಿನ ಏಟು ತಿರುಗೇಟು ನಡೆಯುತ್ತಿದೆ.

ಇಂದು (ಡಿ.30) ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ ಅಶೋಕ್‌ ಅವರು ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿ, “ಆರ್‌ ಅಶೋಕ್‌ ಅವರೇ ನನ್ನ ಹೇಳಿಕೆ ಸ್ಪಷ್ಟವಾಗಿದೆ. ನೀವು ಜೈ ಶ್ರೀ ರಾಮ್ ಎಂದು ಹೇಳುವುದರಿಂದ ನಿಮ್ಮ ಪಾಪಗಳನ್ನು ತೊಳೆದುಹೋಗುವುದಿಲ್ಲ. ನಮ್ಮ ಬದುಕು ಕಟ್ಟುವ ರಾಜಕೀಯ, ಬಿಜೆಪಿಯದ್ದು ಭಾವನೆ ಪ್ರಚೋದಿಸುವ ರಾಜಕೀಯ” ಎಂದು ಕುಟುಕಿದ್ದಾರೆ.

“ವಿಷಯಾಂತರ ಮಾಡುವುದರಲ್ಲಿ ಬಿಜೆಪಿಯವರೇ ನಿಸ್ಸಿಮರು ಎನ್ನುವುದು ಜಗತ್ತಿಗೆ ತಿಳಿದ ಸಂಗತಿ. ನಮ್ಮದು ಮನೆಗಳಲ್ಲಿ ದೀಪ ಹಚ್ಚುವ ಯೋಜನೆಗಳು, ಬಿಜೆಪಿಯವರದ್ದು ಸಮಾಜದಲ್ಲಿ ಬೆಂಕಿ ಹಚ್ಚುವ ಸಂಚುಗಳು” ಎಂದು ಹರಿಹಾಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್‌ ಅಶೋಕ್ ಸರ್,‌ ತಾವು ಕಾಂಗ್ರೆಸ್ ಪಕ್ಷ ಮತ್ತು ಖರ್ಗೆ ಕುಟುಂಬದ ಬಗ್ಗೆ ಚಿಂತಿಸುವ ಬದಲು ನಿಮ್ಮ ಪಕ್ಷದ ಸಮಸ್ಯೆಗಳನ್ನು ಗಮನಿಸಿದರೆ ಕ್ಷೇಮ. ಒಕ್ಕಲಿಗರು, ದಲಿತರ ಬಗ್ಗೆ ಅವಹೇಳನ ಮಾಡಿದ ಹಾಗೂ ನಿಮಗೇ HIV ಇಂಜೆಕ್ಷನ್ ಚುಚ್ಚಲು ಸಂಚು ರೂಪಿಸಿದ ಮುನಿರತ್ನರಿಗೆ ಕನಿಷ್ಠ ಒಂದು ಶೋಕಾಸ್ ನೋಟಿಸ್ ನೀಡುವುದಕ್ಕೂ ಸಾಮ್ರಾಟರಿಂದ ಸಾಧ್ಯವಾಗಿಲ್ಲ ಎಂದು ಜನಸಾಮಾನ್ಯರು ಮಾತಾಡಿಕೊಂಡು ನಗುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ನಿಮ್ಮನ್ನು ನೀವೇ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲದ ನಿಮ್ಮಿಂದ ಕುದಿಯುತ್ತಿರುವ ತಮ್ಮ ಪಕ್ಷದ ಜ್ವಾಲಾಮುಖಿಯನ್ನು ತಣಿಸಲು ಸಾಧ್ಯವೇ? ಮುಳುಗುತ್ತಿರುವ ಕರ್ನಾಟಕದ ಬಿಜೆಪಿಯನ್ನು ಪ್ರಭು ಶ್ರೀರಾಮ ಬಂದರೂ ಉಳಿಸಲು ಸಾಧ್ಯವಿಲ್ಲ!” ಎಂದು ಲೇವಡಿ ಮಾಡಿದ್ದಾರೆ.

“ವಿರೋಧ ಪಕ್ಷದ ನಾಯಕರೇ, ಚನ್ನಗಿರಿಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂದು ನಿಮ್ಮದೇ ಪಕ್ಷದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರನ್ನು ಕೇಳುವುದು ಸೂಕ್ತ. ಅವರ ಅವಧಿಯಲ್ಲಿನ ಬೆಳವಣಿಗೆಗಳ ಬಗ್ಗೆ ಅವರಿಗೇ ಹೆಚ್ಚು ತಿಳಿದಿರುತ್ತದೆ. ನಿಮ್ಮ ಹಿತಕ್ಕಾಗಿ ನನ್ನದೊಂದು ಸಲಹೆ, ಕಳಪೆ ಮತ್ತು ವಿಷಯ ರಹಿತ ಪೋಸ್ಟ್ ಗಳಿಂದ ನಿಮ್ಮ ಸಾಮಾಜಿಕ ಜಾಲತಾಣದ ನಿರ್ವಾಹಕರು ನಿಮ್ಮ ಇಮೇಜ್ ಡ್ಯಾಮೇಜ್ ಮಾಡುತ್ತಿದ್ದಾರೆ. ಬಹುಶಃ ವೇತನ ಕಡಿಮೆಯಾಗಿದ್ದಕ್ಕೆ ಅವರು ನಿಮ್ಮ ಮೇಲೆ ಕೋಪಗೊಂಡಿರಬಹುದು, ಅವರ ವೇತನ ಏರಿಕೆ ಮಾಡಿ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...