ಶಿಷ್ಟಾಚಾರ ಉಲ್ಲಂಘಿಸಿ ಟ್ರಂಪ್ ಭೇಟಿ ಮಾಡಿದ ಸಂಸದ ಯಾರು?: ಕೇಂದ್ರಕ್ಕೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Date:

ಇತ್ತೀಚೆಗೆ ಭಾರತೀಯ ಸಂಸದರ ನೇತೃತ್ವದಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದ ನಿಯೋಗದಲ್ಲಿದ್ದ, ಯುವ ಬಿಜೆಪಿ ಸಂಸದರೊಬ್ಬರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ನಂತರ ತೀವ್ರ ಮುಜುಗರಕ್ಕೊಳಗಾಗಿದ್ದಾರೆ ಎಂಬ ಮಾಧ್ಯಮಗಳ ವರದಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಇದು ಹಲವು ಗಂಭೀರ ವಿಷಯಗಳನ್ನು ಹುಟ್ಟು ಹಾಕಿದೆ ಎಂದು ಕಳವಳ ವ್ಯಕ್ತಪಡಿಸಿರುವ ಸಚಿವರು, ಈ ಬಗ್ಗೆ ಕೇಂದ್ರ ವಿದೇಶಾಂಗ ಇಲಾಖೆ ಮೌನ ಮುರಿಯಬೇಕು ಎಂದು ಎಕ್ಸ್ ಪೋಸ್ಟ್ ನಲ್ಲಿ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯ ಸರ್ಕಾರವೊಂದರ ನೇತೃತ್ವದ ಹೂಡಿಕೆ ನಿಯೋಗಕ್ಕೆ ತೆರಳಲು ಯಾವುದೇ ವಿವರಣೆ ನೀಡದೆ ಅನುಮತಿ ನಿರಾಕರಿಸುತ್ತದೆ. ಆದರೆ, ಬಿಜೆಪಿ ಸಂಸದರ ಬೇಕಾಬಿಟ್ಟಿ ವರ್ತನೆಗೆ ಹೇಗೆ ಬೇಕಾದರೂ ಅವಕಾಶ ನೀಡಲಾಗುತ್ತದೆ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

ಒಬ್ಬ ಹಾಲಿ ಸಂಸದ ದೇಶದ ಎಲ್ಲ ರಾಜತಾಂತ್ರಿಕ ಶಿಷ್ಟಾಚಾರಗಳನ್ನು ಉಲ್ಲಂಘಿಸಿ ಮತ್ತೊಂದು ದೇಶದ ಮುಖ್ಯಸ್ಥರನ್ನು ಭೇಟಿ ಮಾಡಿದ್ದು ಹೇಗೆ? ಅಧಿಕೃತ ನಿಯೋಗದ ಜತೆ ತೆರಳಿದಾಗ ಬಾಲಿಶವಾಗಿ ವರ್ತಿಸಿದ್ದು ಸರಿಯೇ? ಈ ರೀತಿ ವರ್ತಿಸಿದ ಯುವ ಬಿಜೆಪಿ ಸಂಸದ ಯಾರು? ಶಿಷ್ಟಾಚಾರ ಉಲ್ಲಂಘಿಸಿದ್ದಕ್ಕೆ ಆತನ ವಿರುದ್ಧ ಕೇಂದ್ರ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಪಾಕಿಸ್ತಾನದ ಜೊತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗ ಸಖ್ಯ ಪ್ರದರ್ಶಿಸಿ, ಆಪರೇಷನ್ ಸಿಂಧೂರ್‌ನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಕ್ರೆಡಿಟ್ ತೆಗೆದುಕೊಳ್ಳುತ್ತಿರುವ ಸದ್ಯದ ಸೂಕ್ಷ್ಮ ಪರಿಸ್ಥಿತಿಯಲ್ಲಿ ಭಾರತೀಯ ಸಂಸದರೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನುವ ಸಂಗತಿಯನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಪ್ರಸ್ತುತ ವಿಷಯವನ್ನು ಕೇವಲ ರಾಜಕೀಯ ದೃಷ್ಟಿಯಿಂದ ನಡೆಸುತ್ತಿರುವ ಗಾಸಿಪ್ ಎಂದು ಭಾವಿಸದೆ, ಮೌನ ಮುರಿದು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...