ರೌಡಿಗಳನ್ನ ನಿಯಂತ್ರಿಸಿರೋದು ಬಿಜೆಪಿಗರಿಗೆ ಕಷ್ಟವಾಗಿದೆ: ಪ್ರಿಯಾಂಕ್ ಖರ್ಗೆ ಟಾಂಗ್

Date:

“ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ. ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ” ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಟಾಂಗ್ ನೀಡಿದರು.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, “ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಸಂಸದ ಉಮೇಶ ಜಾಧವ್ ಅವರಿಗೆ ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 28 ಕೊಲೆಗಳಾಗಿದ್ದವು” ಎಂದು ಅಂಕಿ ಅಂಶಗಳ ನೀಡುವ ಮೂಲಕ ತಿರುಗೇಟು ನೀಡಿದರು.

‘ಪ್ರಿಯಾಂಕ್ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ’ ಎಂದು ಜಾಧವ್ ಹೇಳಿದ್ದಾರೆ, ಬಹುತೇಕ ಕೊಲೆಗಳಲ್ಲಿ ಅವರ ಚಿರಪರಿಚಿತರೇ ಆರೋಪಿಗಳಾಗಿದ್ದಾರೆ. ಅಫಜಲ್ ಪುರ ತಾಲೂಕಿನಲ್ಲಿ ನಮ್ಮ ಸರ್ಕಾರದ ಅಧಿಕಾರಿಯ ಮೇಲೆ ಟ್ರಾಕ್ಟರ್ ಹತ್ತಿಸಿದ್ದು ಯಾರು? ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು” ಎಂದು ಪುನರುಚ್ಚರಿಸಿದ ಸಚಿವರು, “ಗುಜರಾತ್‌ನಲ್ಲಿ ಕಳೆದ ವರ್ಷದ ಅವಧಿಯಲ್ಲಿ 2209 ಅತ್ಯಾಚಾರ ನಡೆದಿದ್ದು 36 ಗ್ಯಾಂಗ್ ರೇಪ್‌ಗಳಾಗಿವೆ, ಇದಕ್ಕೆ ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರವಿದ್ದಾಗಲೇ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಕಾರಿಗೆ ಅಡ್ಡಹಾಕಿದ್ದರು, ಅದನ್ನು ಕಾನೂನು ಸುವ್ಯವಸ್ಥೆ‌ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರದಲ್ಲಿ ಆಳಂದದ ಲಾಡ್ಲೆ ಮಷಾಖ್ ದರ್ಗಾದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಗಲಾಟೆಗಳಾಗಿದ್ದವು, ಆಗ ಕಾನೂನು ಸುವ್ಯವಸ್ಥೆ ಕುಸಿದಿತ್ತು. ಈ ಸಲ ಅಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಂಡಿದ್ದೇವೆ” ಎಂದು ಮಾರುತ್ತರ ನೀಡಿದರು.

ಚಿತ್ತಾಪುರದ ಅಪರಂಜಿ ಎಲ್ಲಿ?

“ಚಿತ್ತಾಪುರದ ಅಪರಂಜಿ ಈಗ ಎಲ್ಲಿ?” ಎಂದು ಜಾಧವ್‌ರನ್ನು ಪ್ರಶ್ನಿಸಿದ ಸಚಿವರು, “ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್‌ರ ಅಪರಂಜಿ ನಾಪತ್ತೆಯಾಗಿದ್ದಾನೆ” ಎಂದು ಕುಟುಕಿದರು.

“ಸಂಸದರಾಗಿ ಜಾಧವ್ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೇಲ್ವೆ ವಲಯ, ನಿಮ್ಝ್, ಟೆಕ್ಸಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ. ಈ ಸಲದ ರೇಲ್ವೆ ಬಜೆಟ್‌ನಲ್ಲಿ ಕಲಬುರಗಿಗೆ ಕೇವಲ ಒಂದು ಸಾವಿರ ರೂಪಾಯಿ ಮೀಸಲಿಟ್ಟಿದ್ದಾರೆ. ಇವತ್ತು ವಂದೇ ಭಾರತ ಡಕೋಟಾ ರೇಲ್ವೆಗೆ ಉದ್ಘಾಟನೆ ಮಾಡಿದ್ದಾರೆ. ಜಾಧವ್ ವಾಸ್ತವದ ಮೇಲೆ ಮಾತನಾಡಲಿ” ಎಂದು ವಾಗ್ದಾಳಿ ನಡೆಸಿದರು.

ಪ್ರೊಟೋಕಾಲ್ ಮರೆತವರಿವರು

“ಪ್ರೊಟೋಕಾಲ್ ಬಗ್ಗೆ ಯಾವಾಗಲೂ ಮಾತನಾಡುವ ಜಾಧವ್, ಇತ್ತೀಚಿಗೆ ರಿಂಗ್ ರಸ್ತೆಯ ಸರ್ವಿಸ್ ರಸ್ತೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಪಾಲನೆ ಮಾಡಿದ್ದಾರೆಯೇ? ಯಾವೊಬ್ಬ ಅಧಿಕಾರಿ ಇರಲಿಲ್ಲ, ಕೇವಲ ಬಿಜೆಪಿಯ ಕೆಲವರು ಮಾತ್ರ ಇದ್ದರು. ಒಂದು ವಿಚಾರ ಗೊತ್ತಿರಲಿ ಯೋಜನೆಗೆ ಅನುಮತಿಯೇ ನೀಡಲಾಗಿಲ್ಲ” ಎಂದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡುವುದು ಅನುಮಾನ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ “ಬಿಜೆಪಿಯಲ್ಲಿ ಯಾರಿಗೆ ಟಿಕೆಟ್ ನೀಡುತ್ತಾರೆ, ನಿರಾಕರಿಸುತ್ತಾರೆ ನನಗೆ ಸಂಬಂಧಿಸಿದ್ದಲ್ಲ” ಎಂದರು. ‘ಈ ಸಲ ಗೆಲುವು ನನ್ನದೇ ಎಂದು ಜಾಧವ್ ಹೇಳಿದ್ದಾರೆ’ ಎಂದು ಕೇಳಿದಾಗ, “ಚುನಾವಣೆಯಲ್ಲಿ ಗೊತ್ತಾಗುತ್ತದೆ ಬಿಡಿ. ಪ್ರತಿಯೊಬ್ಬರು ಗೆಲ್ಲಬೇಕೆಂದೇ ಸ್ಪರ್ಧಿಸುತ್ತಾರೆ” ಎಂದರು.

ಬಾಡಿಗೆ ಬಾಷಣಕಾರ

ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆಯ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಮಪಂಚಾಯತ್ ಚುನಾವಣೆ ಗೆದ್ದಿಲ್ಲ” ಎಂದು ತೀಕ್ಷವಾಗಿ ಪ್ರತಿಕ್ರಿಯಿಸಿದರು.

ನಾನೇ ಮನೆ ದೇವರು

“ಆರ್ ಅಶೋಕ್‌ರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದಹಾಗೆ. ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ” ಎಂದು ಖರ್ಗೆ ವ್ಯಂಗ್ಯವಾಡಿದರು.

ಇನ್ನು ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿದ ಸಂಸದ ಅನಂತಕುಮಾರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು “ಅವರಿಗೆ ತಲೆ ಕೆಟ್ಟಿದೆ, ಮಾನಸಿಕ‌ ಸಮತೋಲನ ಕಳೆದುಕೊಂಡಿದ್ದಾರೆ” ಎಂದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...