ಪ್ರಿಯಾಂಕ್‌ ಖರ್ಗೆ ಮನೆಗೆ ಮುತ್ತಿಗೆ | ಬಿಜೆಪಿಗರಿಗೆ ಮಜ್ಜಿಗೆ, ಎಳನೀರು ಕೊಟ್ಟ ಕೈ ಕಾರ್ಯಕರ್ತರು

Date:

ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಖಂಡಿಸಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕರು ಶನಿವಾರ ಕಲಬುರಗಿ ನಗರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಖರ್ಗೆ ನಿವಾಸಕ್ಕೆ ಮುತ್ತಿಗೆ ಹೋರಾಟ ಹಮ್ಮಿಕೊಂಡರು.

ಪ್ರತಿಭಟನೆಯಲ್ಲಿ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ, ಸುನಿಲ್ ವಲ್ಯಾಪುರೆ, ಶಶೀಲ್ ಜಿ.ನಮೋಶಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಶಾಸಕರಾದ ಬಸವರಾಜ ಮತ್ತಿಮಡು, ಶರಣು ಸಲಗಾರ, ಮಾಜಿ ಸಂಸದ ಡಾ.ಉಮೇಶ ಜಾಧವ, ಮುಖಂಡರಾದ ಪಿ.ರಾಜೀವ್, ರಾಜಕುಮಾರ ಪಾಟೀಲ ತೇಲ್ಕೂರ, ದತ್ತಾತ್ರೇಯ ಪಾಟೀಲ ರೇವೂರ ಸೇರಿ ಹಲವರು ಪಾಲ್ಗೊಂಡಿದ್ದರು.

ಜಗತ್ ವೃತ್ತದಲ್ಲಿ ಬೃಹತ್ ವೇದಿಕೆಯಲ್ಲಿ ಮಾತನಾಡಿದ ಮುಖಂಡರು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪಾಂಚಾಳ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡೆತ್‌ನೋಟ್ ಓದಿ ಮಾತನಾಡಿದ ಎನ್ ಮಹೇಶ್, “ಡೆತ್‌ ನೋಟ್‌ನಲ್ಲಿ ಪ್ರಿಯಾಂಕ್ ಅವರ ಹೆಸರು ಬಂದಿದೆ. ನೈತಿಕತೆ ಇದ್ದರೆ ರಾಜೀನಾಮೆ ಕೊಡಲಿ’ ಎಂದು ಸವಾಲು ಹಾಕಿದರು. ‘ಪಾಂಚಾಳ್‌ ಕುಟುಂಬಸ್ಥರನ್ನು ನಿಮ್ಮ ಮನೆ ಮುಂದೆ ನಿಲ್ಲಿಸುತ್ತೇವೆ ಅವರಿಗೆ ಎಳನೀರು, ಚಹಾ ಕೊಡ್ತೀರಾ? ಬಿಜೆಪಿಗೆ ಸಂಸ್ಕಾರವಿದೆ, ನೈತಿಕವಾಗಿ ಜನ ಕೇಳುತ್ತಿದ್ದಾರೆ ಎಂದು ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದರು. ನಿಮ್ಮದೇ ಪಕ್ಷದ ನಾಗೇಂದ್ರ ಅವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಲಿಲ್ಲವಾ? ಅವರ ಹಿಂದೆ ರಾಜಕೀಯ ಒತ್ತಡ ಇಲ್ಲ ಎಂದು ರಾಜೀನಾಮೆ ಕೊಡಿಸಿದ್ದೀರಾ? ಖರ್ಗೆ ಮತ್ತು ಕುಟುಂಬಸ್ಥರ ನಿಜಾಮರಾಗಿ, ಇಲ್ಲಿನ ಪೊಲೀಸರು ರಜಾಕಾರರಾ” ಎಂದು ಪ್ರಶ್ನಿಸಿದರು.

ಕಲಬುರಗಿ 25

ಖರ್ಗೆಯಿಂದ ತಂಪು ಪಾನೀಯ ವ್ಯವಸ್ಥೆ

ಸಚಿನ್‌ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಪ್ರಿಯಾಂಕ್ ಖರ್ಗೆ ಅವರ ಮನಗೆ ಮುತ್ತಿಗೆ ಹಾಕಲು ಬರುವ ಬಿಜೆಪಿಯ ಮುಖಂಡರಿಗೆ ಎಳನೀರು, ಮಜ್ಜಿಗೆ, ನೀರು ವಿತರಣೆ ವ್ಯವಸ್ಥೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ.

ಕಾಂಗ್ರೆಸ್ ನಾಯಕರು ತಂಪು ಪಾನೀಯ ವ್ಯವಸ್ಥೆ ‌ಮಾಡುವ ಮೂಲಕ ಪ್ರತಿಭಟನೆ ಆಧಾರ ರಹಿತವಾಗಿದೆ ಎಂದು ತಿರುಗೇಟು ನೀಡಿದ್ದಾರೆ. ‘ಬಿಜೆಪಿ ಗುಂಡಾಗಿರಿಗೆ ನಮ್ಮ ಗಾಂಧಿಗಿರಿ’ ಹೆಸರಿನಲ್ಲಿ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರಿಗೆ ಕೈ ಮುಖಂಡರು, ಎಳನೀರು, ಶುಗರ್ ಲೆಸ್ ಕಾಫಿ ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

“ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹಸ್ತಕ್ಷೇಪ ಇಲ್ಲದಿದ್ದರೂ ಸಹ ಬಿಜೆಪಿ ನಾಯಕರು ರಾಜಕಾರಣ ಮಾಡುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನ ಟಾರ್ಗೆಟ್ ಮಾಡಿಕೊಂಡು ಹೋರಾಟ ಮಾಡುತ್ತಿದ್ದಾರೆ. ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ, ಹೋರಾಟ ಮಾಡುವುದಾದರೆ ಉಸ್ತುವಾರಿ ಸಚಿವರ ಕಚೇರಿಗೆ, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಬೇಕು, ಅದನ್ನು ಬಿಟ್ಟು ಮನೆಗೆ ಮುತ್ತಿಗೆ ಹಾಕಲು ಹೊರಟಿರುವುದು ಖಂಡನಾರ್ಹ. ಬಿಜೆಪಿ ಅವರದ್ದು ಗುಂಡಾಗಿರಿ, ನಮ್ಮದು ಗಾಂಧಿಗಿರಿ” ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...