ಲೋಕಸಭೆಯಲ್ಲಿ ಅಣ್ಣ-ತಂಗಿ ಅಬ್ಬರ; ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

Date:

ಕೇರಳದ ವಯನಾಡ್‌ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ ಗುರುವಾರ ಸಂಸದೆಯಾಗಿ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶಾದ್ಯಂತ ಪಕ್ಷ ಸಂಘಟನೆ ಮತ್ತು ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದ ಪ್ರಿಯಾಂಕಾ ಈಗ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ, ತಮ್ಮ ಸಹೋದರ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಸಾಥ್‌ ನೀಡಲಿದ್ದಾರೆ.

ಉಪಚುನಾವಣೆ ನಡೆದ ಬಳಿಕ ಬುಧವಾರದಿಂದ ಸಂಸತ್ ಅಧಿವೇಶನ ಆರಂಭವಾಗಿದೆ. ಗುರುವಾರ ಪ್ರಿಯಾಂಕಾ ಗಾಂಧಿ ಅವರು ಸಂವಿಧಾನದ ಪ್ರತಿ ಹಿಡಿದುಕೊಂಡು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಿಯಾಂಕಾ ಗಾಂಧಿ 2019ರಿಂದ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಅವರು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಸಂಘಟನೆಯ ಜವಾಬ್ದಾರಿ ಹೊತ್ತಿದ್ದರು. ಬಳಿಕ, ದೇಶಾದ್ಯಂತ ಪಕ್ಷ ಕಟ್ಟುವಲ್ಲಿಯೂ ತೊಡಗಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಿಯಾಂಕಾ ಅವರನ್ನು ವಯನಾಡ್‌ ಮತದಾರರು ಕೈಹಿಡಿದಿದ್ದು, 6.20 ಲಕ್ಷ ಮತಗಳನ್ನು ಪಡೆದು, ಬರೋಬ್ಬರಿ 4.10 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ.

ಮಹಾರಾಷ್ಟ್ರದ ನಾಂದೇಡ್‌ ಉಪಚುನಾವಣೆಯಲ್ಲಿ ಗೆದ್ದಿದ್ದ ಕಾಂಗ್ರೆಸ್‌ನ ರವೀಂದ್ರ ಚವಾಣ್‌ ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...