ಪ್ರಿಯಾಂಕಾ ಗಾಂಧಿ ನಕಲಿ ‘ಉಪನಾಮ’ ಬಳಸಿಕೊಳ್ಳುತ್ತಿದ್ದಾರೆ: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್

Date:

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮತ ಗಳಿಸಲು ಗಾಂಧಿ ಕುಟುಂಬದ ‘ನಕಲಿ’ ಗಾಂಧಿ ಉಪನಾಮವನ್ನು ಬಳಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.

ರಾಜಸ್ಥಾನದ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಮಹಿಳೆಯರ ಮಂಗಳಸೂತ್ರಗಳನ್ನು ಕಾಂಗ್ರೆಸ್‌ ಕಿತ್ತುಕೊಳ್ಳುತ್ತದೆ ಎಂದು ಹೇಳಿದ ಬಳಿಕ, ನಾನಾ ರೀತಿಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವುದನ್ನು ಬಿಜೆಪಿ ನಾಯಕರು ಮುಂದುವರೆಸಿದ್ದಾರೆ. ಮಧ್ಯಪ್ರದೇಶದ ಗುಣಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮೋಹನ್‌ ಯಾದವ್‌ ಅವರು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

“ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಮೊಮ್ಮಗಳು ವಿವಾಹವಾಗಿದ್ದರೂ ಮಂಗಳಸೂತ್ರ ಧರಿಸಿಲ್ಲ. ನಮ್ಮ ಸಂಪ್ರದಾಯದ ಪ್ರಕಾರ, ಮಗಳು ಮದುವೆಯಾದ ತಕ್ಷಣ, ಅವಳು ತನ್ನ ಅತ್ತೆ ಮನೆಯ ಉಪನಾಮವನ್ನು ತನ್ನ ಹೆಸರಿನೊಂದಿಗೆ ಸೇರಿಸಿಕೊಳ್ಳುತ್ತಾಳೆ. ಆದರೆ, ಈ ಮತದ ದಾಹವುಳ್ಳ ಜನರು ಇಂದಿಗೂ ತಮ್ಮ ಉಪನಾಮದಲ್ಲಿ ‘ಗಾಂಧಿ’ ಎಂದೇ ಬಳಸುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಹೇಗೆ? ನಿಜವಾದ ಗಾಂಧಿ ಕುಟುಂಬದ ಸದಸ್ಯರು ಎಲ್ಲಿದ್ದಾರೆಂದು ಯಾರಿಗೆ ಗೊತ್ತು? ಅವರೆಲ್ಲ ನಕಲಿ ಗಾಂಧಿಗಳು. ಅವರು ಕೇವಲ ಗಾಂಧಿ ಹೆಸರಿನಲ್ಲಿ ಮತಗಳನ್ನು ಪಡೆಯಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಮನಿಸಿ: ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಹೇಳಿಕೆಗಳು ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರತಿಪಾದಿಸುತ್ತವೆ. ಗಂಡಿನಂತೆಯೇ ಹೆಣ್ಣು ಕೂಡ ಸ್ವತಂತ್ರಳು, ಆಕೆ ವಿವಾಹಕ್ಕೂ ಮುನ್ನ ತಂದೆಯ ಹೆಸರು ಹಾಗೂ ವಿವಾಹ ನಂತರ ಗಂಡನ ಹೆಸರಿನೊಂದಿಗೆ ತನ್ನನ್ನು ಗುರುತಿಸಿಕೊಳ್ಳುವ ಅಗತ್ಯವಿಲ್ಲ. ಅಂತಹ ಯಾವುದೇ ಕಾನೂನು ಕೂಡ ಭಾರತದಲ್ಲಿ ಇಲ್ಲ. ಮಹಿಳೆಯರು ಕೂಡ ತನ್ನದೇ ಆತ ಗುರುತನ್ನ ಹೊಂದುವ ಹಕ್ಕು ಹೊಂದಿದ್ದಾರೆ. ಅವರ ಗುರತನ್ನು ಪುರುಷರೊಂದಿಗೆ ಗುರುತಿಸುವ ಅಗತ್ಯವಿಲ್ಲ. ಬಿಜೆಪಿ ನಾಯಕರ ಹೇಳಿಕೆಗಳು ಮನುಸ್ಮೃತಿ ಅಂಶಗಳನ್ನು ಹೊಂದಿವೆ. ಈ ಮನುಸ್ಮೃತಿ ಹೆಣ್ಣು ಗಂಡಿನ ಅಧೀನಳು ಎಂದು ಹೇಳುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...