ಸಂಸತ್ತಿನಲ್ಲಿರುವ ಎಲ್ಲ ಅರ್ಹತೆ ಪ್ರಿಯಾಂಕಾಗೆ ಇದೆ: ರಾಬರ್ಟ್ ವಾದ್ರಾ

Date:

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಶನಿವಾರ ತಮ್ಮ ಪತ್ನಿ ಪ್ರಿಯಾಂಕಾ ಗಾಂಧಿಗೆ ಸಂಸತ್ತಿನಲ್ಲಿ ಇರಲು ಬೇಕಾದ ಎಲ್ಲ ಅರ್ಹತೆಗಳಿವೆ ಮತ್ತು ಆಕೆ ಸಂಸತ್ತಿನಲ್ಲಿಯೇ ಇರಬೇಕು ಎಂದು ಹೇಳಿದ್ದಾರೆ. ಅಲ್ಲದೆ, ಆಕೆಯ ಲೋಕಸಭೆ ಪ್ರವೇಶಕ್ಕೆ ಕಾಂಗ್ರೆಸ್ ಯೋಜನೆ ರೂಪಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, “ಅವರು ಲೋಕಸಭೆಯಲ್ಲಿ ಖಚಿತವಾಗಿ ಇರಬೇಕು. ಆಕೆಗೆ ಎಲ್ಲ ಅರ್ಹತೆಗಳಿವೆ. ಅವರು ಸಂಸತ್ತಿನಲ್ಲಿ ಉತ್ತಮ ಸಂಸದೆಯಾಗಿರುತ್ತಾರೆ. ಕಾಂಗ್ರೆಸ್ ಅವರನ್ನು ಸ್ವೀಕರಿಸುತ್ತದೆ ಮತ್ತು ಅದಕ್ಕಾಗಿ ಉತ್ತಮ ಯೋಜನೆ ರೂಪಿಸುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ತಿಳಿಸಿದರು.

ಸಂಸತ್ತಿನಲ್ಲಿ ಮಾತನಾಡುವಾಗ ಉದ್ಯಮಿ ಗೌತಮ್ ಅದಾನಿಯೊಂದಿಗೆ ತಮ್ಮ ಹೆಸರನ್ನು ಜೊತೆಗೂಡಿಸಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರ ವಿರುದ್ಧ ವಾದ್ರಾ ವಾಗ್ದಾಳಿ ನಡೆಸಿದರು. ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯ ವೇಳೆ, ಇರಾನಿ ಅವರು ಅದಾನಿ ಜೊತೆಗೆ ವಾದ್ರಾ ಇರುವ ಚಿತ್ರವನ್ನು ಪ್ರದರ್ಶಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ರಾಜಕೀಯದಿಂದ ದೂರ ಉಳಿದಿದ್ದೇನೆ. ಆದರೆ, ನನ್ನ ಹೆಸರಿಗಾಗಿ ಹೋರಾಡಲು ನಾನು ಮಾತನಾಡುತ್ತೇನೆ. ಏಕೆಂದರೆ, ಅವರು ನನ್ನ ವಿರುದ್ಧ ಏನಾದರೂ ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಬೇಕು ಎಂದು ಸ್ಮೃತಿ ಇರಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಮಿಷನ್‌ ಆರೋಪ: ಪ್ರಿಯಾಂಕಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಬಿಜೆಪಿ

‘ನಾನು ಅದಾನಿಯೊಂದಿಗೆ ಏನು ಸಂಬಂಧ ಹೊಂದಿದ್ದೇನೆ ಎಂಬುದನ್ನು ತೋರಿಸಿ ಎಂದು ನಾನು ಅವರಿಗೆ ಸವಾಲು ಹಾಕುತ್ತೇನೆ. ಯಾವುದೇ ತಪ್ಪಾಗಿದ್ದರೆ ನಾನು ಅದನ್ನು ನಿಭಾಯಿಸುತ್ತೇನೆ. ಇಲ್ಲದಿದ್ದರೆ, ಅವರು ಕ್ಷಮೆ ಯಾಚಿಸಬೇಕು ಮತ್ತು ಅವರ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ರಾಬರ್ಟ್ ವಾದ್ರಾ ಹೇಳಿದರು.

ಮಹಿಳಾ ಕುಸ್ತಿಪಟುಗಳು ತಮ್ಮ ಹಕ್ಕುಗಳಿಗಾಗಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಇರಾನಿ ಅವರು ಕುಸ್ತಿಪಟುಗಳನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಕೇಳಲು ಎಂದಿಗೂ ಹೋಗಲಿಲ್ಲ ಎಂದು ವಾದ್ರಾ ಹೇಳಿದರು.

‘ಪ್ರತಿಪಕ್ಷಗಳ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ವಾದ್ರಾ, ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟಕ್ಕೆ ಸೇರಿದೆ ಮತ್ತು ಇಂಡಿಯಾ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪೈಪೋಟಿ ನೀಡುತ್ತದೆ. ನಾವು ಭಾರತವನ್ನು ಮತ್ತೊಮ್ಮೆ ಶ್ರೇಷ್ಠಗೊಳಿಸಲಿದ್ದೇವೆ. ಬಿಜೆಪಿ ಸರ್ಕಾರವು ಭಾರತವನ್ನು ನಾಶಮಾಡಿದೆ’ ಎಂದು ವಾದ್ರಾ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...