ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?: ಆರ್‌ ಅಶೋಕ್‌ ಆರೋಪ

Date:

ನಾಗಮಂಗಲ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ. ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದಾರೆ” ಎಂದಿದ್ದಾರೆ.

“ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‌ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ” ಎಂದು ಆರೋಪಿಸಿದ್ದಾರೆ.

“ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಪರಮೇಶ್ವರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...