ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭ: ಸಚಿವ ಪರಮೇಶ್ವರ್‌

Date:

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸುವ ಕುರಿತು ನಾವು ಬರೆದ ಪತ್ರಕ್ಕೆ ಕೇಂದ್ರ ಸರ್ಕಾರದಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಪಾಸ್‌ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭಿಸಿದ್ದಾರೆ ಎಂಬ ಮಾಹಿತಿ ಬಂದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಸುಮ್ಮನೆ ಅವರು, ಇವರು ಬಾಯಿಗೆ ಬಂದಂತೆ ಮಾತನಾಡುವುದಲ್ಲ. ಫೋನ್ ಟ್ಯಾಪಿಂಗ್ ಯಾರು ಮಾಡುತ್ತಿದ್ದಾರೆ? ಯಾರದ್ದು ಮಾಡಿದ್ದಾರೆ ಎಂಬುದು ಗೊತ್ತಿದ್ದರೆ ಹೇಳಲಿ. ಬಾಯಿಗೆ ಬಂದಿದ್ದು ಹೇಳಿದರೆ ಯಾರು ಕೇಳುತ್ತಾರೆ? ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಇದೆ. ಕಾನೂನು ಹೊರತುಪಡಿಸಿ ನಾವ್ಯಾರು ಏನೂ ಮಾಡಲಾಗುವುದಿಲ್ಲ” ಎಂದರು.

“ಎಚ್ ಡಿ ದೇವೆಗೌಡರು ಪ್ರಜ್ವಲ್‌ಗೆ ಪತ್ರ ಬರೆದಿದ್ದಾರೆ ಎಂಬುದು ಗೊತ್ತಾಗಿದೆ. ಅದು ಅವರ ಕುಟುಂಬದ ಆಂತರಿಕ ವಿಚಾರ ಇರಬಹುದು.‌ ಪ್ರಜ್ವಲ್ ರೇವಣ್ಣ ಸಾರ್ವಜನಿಕ ದೃಷ್ಟಿಯಿಂದ ದೇವೇಗೌಡ ಅವರ ಪತ್ರಕ್ಕೆ ಗೌರವ ಕೊಟ್ಟು ದೇಶಕ್ಕೆ ವಾಪಸ್ ಆಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ‌ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿಗೆ ಅಪಕೀರ್ತಿ ತರುವಂತಹ ಮಾತುಗಳನ್ನಾಡುವುದು ಸರಿಯಲ್ಲ. ಮಾದಕದ್ರವ್ಯ ಮುಕ್ತ ರಾಜ್ಯ ನಿರ್ಮಾಣದ ನಿಟ್ಟಿನಲ್ಲಿ ನಾನು ಮತ್ತು ಮುಖ್ಯಮಂತ್ರಿಯವರು ಘೋಷಿಸಿದ್ದೇವೆ.‌ ರಾಜ್ಯದಲ್ಲಿ ಸಾವಿರಾರು ಕೆ.ಜಿ. ಗಾಂಜಾ, ಎಂಡಿಎಂಎ, ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ವಿದೇಶಿಗರನ್ನು ಗಡಿಪಾರು ಮಾಡಲಾಗಿದ್ದು, ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ” ಎಂದರು‌.

ಉಡ್ತಾ ಬೆಂಗಳೂರು ಸರಿಯಲ್ಲ

“ಉಡ್ತಾ ಬೆಂಗಳೂರು ಅಂತ ಮಾತನಾಡುವುದು ಸರಿಯಲ್ಲ. ಇನ್ನೂ ಹೆಚ್ಚು ನಿಯಂತ್ರಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲಿ. ಆದರೆ, ಬೆಂಗಳೂರಿಗೆ ಅಪಕೀರ್ತಿ ತರುವಂತಹ ಮಾತನ್ನು ಆಡಬಾರದು. ಕಾನೂನು ಸುವ್ಯವಸ್ಥೆ ಕಾಪಾಡಲು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ಒಂದು ವರ್ಷದಿಂದ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಯ ಸಮಸ್ಯೆಯಾಗದಂತೆ ನೋಡಿಕೊಂಡಿದ್ದೇವೆ” ಎಂದು ತಿಳಿಸಿದರು

“ಬಿಜೆಪಿಯವರ ಕಾಲದಲ್ಲಿ ಮರ್ಡರ್‌ಗಳಾಗಿರಲಿಲ್ಲವೇ? ಹಾಗಂತ ಮರ್ಡರ್‌ ಆಗಬೇಕು ಅಂತ ನಾವು ಆಪೇಕ್ಷೆ ಪಡುವುದಿಲ್ಲ. ಅರೋಪಿಗಳನ್ನು ಹಿಡಿದು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವಂತ‌ ಕೆಲಸವನ್ನು ತಕ್ಷಣವೇ ಮಾಡಿದ್ದೇವೆ. ಶೇ 95ರಷ್ಟು ಕೊಲೆ ಪ್ರಕರಣಗಳ ಆರೋಪಿಗಳನ್ನು 24 ಗಂಟೆಗಳಲ್ಲಿಯೇ ಹಿಡಿದಿದ್ದೇವೆ. ಸುಮ್ಮನೇ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬುದು ಸರಿಯಲ್ಲ” ಎಂದರು.

“ಸುತ್ತೋಲೆ ಹೊರಡಿಸುವ ಅಗತ್ಯ ಏನಿದೆ. ಪ್ರತಿನಿತ್ಯ ಯಾರೂ ಸುತ್ತೋಲೆ ಹೊರಡಿಸಲಾಗುವುದಿಲ್ಲ. ಯಾರೋ ಹೇಳಿದ್ದನ್ನು ನೀವು ಕೇಳಬೇಡಿ. ಕಳ್ಳತನಕ್ಕೊಂದು, ಕೊಲೆಗೊಂದು, ಯಾರೋ ಟ್ರಾಫಿಕ್‌ ಅಫೆನ್ಸ್‌ ಮಾಡಿದ್ರು ಅಂತ ಸುತ್ತೋಲೆ ಹೊರಡಿಸಲು ಆಗುತ್ತಾ? ಕಾನೂನಿನ ಪ್ರಕಾರ‌ ಕೆಲಸ ಮಾಡುವಂತೆ ಪೊಲೀಸರಿಗೆ ತಿಳಿಸಿದ್ದೇವೆ. ಅವರು ತರಬೇತಿ ಪಡೆದಿದ್ದಾರೆ. ಅದರಂತೆ‌ ಕೆಲಸ‌ ಮಾಡದಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...