ರಾಜ್ಯ ಆರ್ಥಿಕ ಸ್ಥಿತಿ ಉತ್ತಮವಾದ ಬಳಿಕ ಶೀಘ್ರ ಹಣ ಬಿಡುಗಡೆ ಭರವಸೆ: ಸಿಎಂ ಭೇಟಿಯ ಬಳಿಕ ಕೆಂಪಣ್ಣ

Date:

ಗುತ್ತಿಗೆದಾರರ ಕಾಮಗಾರಿಗಳ ಬಾಕಿ ಬಿಲ್ 5-6 ತಿಂಗಳಿಂದ ಆಗಿರಲಿಲ್ಲ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ತಿಳಿಸಿದ್ದಾರೆ.

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಶೀಘ್ರ ಹಣ ಬಿಡುಗಡೆಗೊಳಿಸಲು 30 ದಿನಗಳ ಗಡುವು ನೀಡಿದ್ದ ಗುತ್ತಿಗೆದಾರರು, ಇಂದು(ಶನಿವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

33

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ. ಕೆಂಪಣ್ಣ, ಸದ್ಯ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ. ಆದಷ್ಟು ಬೇಗ ಬಾಕಿ ಇರುವ ಎಲ್ಲ ಬಿಲ್ ಪಾವತಿ ಮಾಡುತ್ತೇವೆ. ಒಂದು ತಿಂಗಳಿನಲ್ಲಿ ಎಲ್ಲ ಅಧಿಕಾರಿಗಳ ಜೊತೆ ಸಭೆ ನಡೆಸಿ, ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಮಾತು ಕೊಟ್ಟಿದ್ದಾರೆ. ಹಂತ ಹಂತವಾಗಿಯೂ ಕೆಲವು ಹಣ ಬಿಡುಗಡೆ ಮಾಡುತ್ತೇವೆ ಎಂದು ಕೂಡ ತಿಳಿಸಿದ್ದಾರೆ ಎಂದು ಹೇಳಿದರು.

‘ಬಿಬಿಎಂಪಿ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ’
‘ಗುತ್ತಿಗೆದಾರರೊಂದಿಗೆ ಕೆಲವು ಅಧಿಕಾರಿಗಳು ಸರಿಯಾಗಿ ವರ್ತನೆ ಮಾಡುತ್ತಿಲ್ಲ. ಈ ಬಗ್ಗೆಯೂ ಮುಕ್ತವಾಗಿ ತಿಳಿಸಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಬಿಬಿಎಂಪಿಯಲ್ಲಿ ಕಮಿಷನರ್ ಹಾಗೂ ಚೀಫ್ ಇಂಜಿನಿಯರ್‌ನಿಂದ ತುಂಬಾ ಹಿಂಸೆ ನೀಡುತ್ತಿದ್ದಾರೆ. ಹಣ ಕೇಳುತ್ತಿದ್ದಾರೆ. ಹಿಂಸೆ ಆಗುತ್ತಿದೆ’ ಎಂದು ಕೆಂಪಣ್ಣ ಬಹಿರಂಗವಾಗಿ ತಿಳಿಸಿದರು.

kempanna 2

ಈ ಉತ್ತರಕ್ಕೆ ಪತ್ರಕರ್ತರು, ಅಧಿಕಾರಿಗಳು ಎಷ್ಟು ಪರ್ಸೆಂಟ್ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೆಂಪಣ್ಣ, ಹಣ ಕೇಳುತ್ತಿದ್ದಾರೆ ಅಂತ ತಿಳಿಸಿದ್ದೇವೆ. ಇಷ್ಟು ಪರ್ಸೆಂಟೇಜ್ ಅಂತ ಅವರೂ ಹೇಳಿಲ್ಲ, ನಾನೂ ಕೇಳಿಲ್ಲ. ಹಾಗಾಗಿ, ಭ್ರಷ್ಟಾಚಾರ ನಡೀತಾ ಇದೆ ಅಂತ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ಕೊಟ್ಟಿದ್ದೇವೆ. ಅಧಿಕಾರಿಗಳನ್ನು ಕರೆಸಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಸಿಎಂ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...