ರಾಜ್ಯಪಾಲರ ಪರ, ಸರ್ಕಾರದ ವಿರುದ್ಧ ಬಿಜೆಪಿ – ಜೆಡಿಎಸ್‌ ಶಾಸಕರ ಪ್ರತಿಭಟನೆ

Date:

ಬಜೆಟ್‌ ಅಧಿವೇಶನ ಆರಂಭಕ್ಕೂ ಮುನ್ನ ಶಾಸಕರ ಭವನದಿಂದ ವಿಧಾನಸೌಧಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ಸೋಮವಾರ ರಾಜ್ಯಪಾಲರ ಪರವಾಗಿ ಮತ್ತು ಸರ್ಕಾರದ ವಿರುದ್ಧ ಪ್ರತಿಭಟನಾ ಪಾದಯಾತ್ರೆ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಎಲ್ಲಾ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಶಾಸಕರ ಭವನದಿಂದ ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಿದರು.

ರಾಜ್ಯಪಾಲರು ಹಾಗೂ ರಾಜಭವನಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಪ್ರತಿಭಟನಾನಿರತ ನಾಯಕರು ಆರೋಪಿಸಿದರು. ರಾಜ್ಯಪಾಲರ ಅಧಿಕಾರ ಹೈಕೋರ್ಟ್ ಎತ್ತಿಹಿಡಿದರೂ ಸಹಿಸದ ಕಾಂಗ್ರೆಸ್ಸಿಗೆ ಧಿಕ್ಕಾರವಿರಲಿ, ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ರಾಜ್ಯಪಾಲರ ಸಾಂವಿಧಾನಿಕ ಹುದ್ದೆಗೆ ಕಳಂಕ ತಂದ ಮುಖ್ಯಮಂತ್ರಿಗಳಿಗೆ ಧಿಕ್ಕಾರವಿರಲಿ, ರಾಷ್ಟ್ರಪತಿ ಮತ್ತು ರಾಜ್ಯಪಾಲರು, ನ್ಯಾಯಾಲಯ, ಇಡಿ, ಸಿಬಿಐ ವಿರೋಧಿ ಕಾಂಗ್ರೆಸ್ಸಿಗೆ ಧಿಕ್ಕಾರ, ರಾಜ್ಯಪಾಲರ ಹೆಸರಲ್ಲಿ ನೀಚ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ.. ಹೀಗೆ ಮೊದಲಾದ ಭಿತ್ತಿಪತ್ರಗಳೊಂದಿಗೆ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...