ಮಣಿಪುರ | ಭದ್ರತಾ ಸಿಬ್ಬಂದಿ, ಪ್ರತಿಭಟನಾಕಾರರ ನಡುವೆ ಘರ್ಷಣೆ; ಕಲ್ಲು ತೂರಾಟ

Date:

ಮಣಿಪುರದಲ್ಲಿ ಮತ್ತೆ ಸರ್ಕಾರ ರಚನೆಯಾಗಿದ್ದು, ನೂತನ ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಸರ್ಕಾರ ರಚನೆಗೆ ಕುಕಿ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ತಮ್ಮ ಸಮುದಾಯದ ಶಾಸಕರು ಸರ್ಕಾರ ರಚನೆಯಲ್ಲಿ ಭಾಗಿಯಾಗಬಾರದು ಎಂದು ಆಗ್ರಹಿಸಿದೆ. ಚುರಾಚಂದ್‌ಪುರ ಮತ್ತು ತುಯಿಬುವಾಂಗ್ ಪ್ರದೇಶಗಳಲ್ಲಿ ಪ್ರತಿಭಟನೆಯೂ ನಡೆದಿದ್ದು, ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆದಿದೆ.

ಇಬ್ಬರು ಉಪಮುಖ್ಯಮಂತ್ರಿಗಳಲ್ಲಿ ಬಿಜೆಪಿಯ ಕುಕಿ-ಝೋ ಶಾಸಕ ನೆಮ್ಚಾ ಕಿಪ್ಗೆನ್ ಕೂಡಾ ಒಬ್ಬರಾಗಿದ್ದಾರೆ. ಕುಕಿ ಸಮುದಾಯ ಮತ್ತಿಬ್ಬರೂ ಸರ್ಕಾರದ ಜತೆ ಕೈಜೋಡಿಸಿದ್ದಾರೆ. ಇದು ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಘರ್ಷಣೆ ಉಂಟಾಗಿದೆ. ವೈರಲ್ ಆದ ವೀಡಿಯೋಗಳಲ್ಲಿ ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದು ಕಂಡುಬಂದಿದೆ.

ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಕಲ್ಲು ತೂರಾಟ; ಹಲವರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಕಿ ಸಮುದಾಯವು ಮಣಿಪುರ ಸರ್ಕಾರದಿಂದ ಸಂಪೂರ್ಣವಾಗಿ ಬೇರ್ಪಟ್ಟು, ತಮಗಾಗಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ಅಥವಾ ಪ್ರತ್ಯೇಕ ರಾಜ್ಯ ನೀಡಬೇಕೆಂದು ದಶಕಗಳಿಂದ ಒತ್ತಾಯಿಸುತ್ತಿದೆ. ಪ್ರಸ್ತುತ ಸರ್ಕಾರವು ಈ ಬೇಡಿಕೆಯನ್ನು ಪರಿಗಣಿಸದಿರುವುದು ಕುಕಿ ಸಮುದಾಯದ ಅಸಮಾಧಾನಕ್ಕೆ ಮುಖ್ಯ ಕಾರಣವಾಗಿದೆ.

ತಮ್ಮ ಬೇಡಿಕೆ ಈಡೇರದೆ ಇರುವಾಗ ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕುಕಿ ಶಾಸಕಿ ನೆಮ್ಚಾ ಕಿಪ್ಗೆನ್ ಮತ್ತು ಇತರ ಕುಕಿ ಶಾಸಕರ ವಿರುದ್ಧ ಸಮುದಾಯವು ಅಸಮಾಧಾನ ವ್ಯಕ್ತಪಡಿಸಿದೆ. ಈ ಶಾಸಕರು ಸಮುದಾಯದ ಹೋರಾಟಕ್ಕೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿರುವ ಕುಕಿ-ಜೋ ಕೌನ್ಸಿಲ್ ಅವರ ವಿರುದ್ಧ ‘ಸಾಮಾಜಿಕ ಬಹಿಷ್ಕಾರ’ ಘೋಷಿಸಿದೆ. ಏತನ್ಮಧ್ಯೆ, ಕುಕಿ ವಿದ್ಯಾರ್ಥಿಗಳ ಸಂಘಟನೆ (ಕೆಎಸ್‌ಒ) ಶುಕ್ರವಾರ ಚುರಾಚಂದ್‌ಪುರ ಜಿಲ್ಲೆಯಾದ್ಯಂತ 24 ಗಂಟೆಗಳ ‘ಸಂಪೂರ್ಣ ಬಂದ್’ ಘೋಷಿಸಿದೆ.

2023ರ ಮೇ ತಿಂಗಳಿಂದ ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಎನ್ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಳೆದ ವರ್ಷ ಫೆಬ್ರವರಿ 13ರಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವಿತ್ತು. ಇದೀಗ ನೂತನ ಸರ್ಕಾರ ರಚನೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...