ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

Date:

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ ‘ಎಕ್ಸ್‌’ ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು ಎಂಬ ಆರೋಪದ ಮೇಲೆ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಗಲಭೆಗೆ ಪ್ರಚೋದನೆ ನೀಡುವ ಉದ್ದೇಶದಿಂದ ಪೋಸ್ಟ್‌ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್‌ನ ವಿವಾದಾತ್ಮಕ ಟ್ವೀಟ್‌ಅನ್ನು ನೋಡಿದ ತಕ್ಷಣ ಆಡಳಿತಾರೂಢ ಬಿಜೆಪಿಯ ಸಾಮಾಜಿಕ ಮಾಧ್ಯಮ ಘಟಕದ ಸಂಚಾಲಕ ಪ್ರಕಾಶ್ ಗಡೇ ನೀಡಿದ ದೂರಿನ ಆಧಾರದ ಮೇಲೆ ಮರೀನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಬಿಜೆಪಿ ಜನರನ್ನು ದಮನಿಸಲು ಯತ್ನಿಸಬಾರದು. ಅಂತಹ ಯತ್ನಗಳು ನಡೆದರೆ, ಲೆಹ್‌ನಲ್ಲಿ ‘ಜನರಲ್ ಝಡ್’ ಪ್ರತಿಭಟನಾಕಾರರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ ಪರಿಸ್ಥಿತಿ ಇಡೀ ದೇಶಾದ್ಯಂತ ಘಟಿಸುತ್ತದೆ ಎಂಬುದಾಗಿ ಪೋಸ್ಟ್‌ನಲ್ಲಿ ಬೆದರಿಕೆ ಹಾಕಲಾಗಿದೆ” ಎಂದು ದೂರುದಾರ ಪ್ರಕಾಶ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೋಸ್ಟ್‌ನಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ಚಿತ್ರಿಸುವ ರೇಖಾಚಿತ್ರವೂ ಇತ್ತು. ವಿವಿಧ ವಿಷಯಗಳ ಕುರಿತಾದ ಫಲಕಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು ಜನರು ಪ್ರತಿಭಟನೆ ನಡೆಸುತ್ತಿರುವುದನ್ನು ಚಿತ್ರವು ಒಳಗೊಂಡಿತ್ತು” ಎಂದು ಪ್ರಕಾಶ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಜಾತಿ ಸಮೀಕ್ಷೆ: ಒಬಿಸಿಗಳಿಗೆ ವಂಚಿಸಲು ಬಿಜೆಪಿ ನಾಯಕರ ಯತ್ನ?

ಪ್ರಕಾಶ್ ಅವರ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತಾದ (ಬಿಎನ್‌ಎಸ್‌) ಸೆಕ್ಷನ್ 192 (ಗಲಭೆಗೆ ಪ್ರಚೋದನೆ), ಸೆಕ್ಷನ್ 353(1) (ಸುಳ್ಳು ಮಾಹಿತಿ, ವದಂತಿ ಪ್ರಸಾರ) ಹಾಗೂ ಸೆಕ್ಷನ್ 353(2) (ಸಾರ್ವಜನಿಕರಲ್ಲಿ ಭಯ ಅಥವಾ ಆತಂಕ ಸೃಷ್ಟಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದ ಅಂಶವು, ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯೂ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ಲೇಹ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದದ್ದಕ್ಕೆ ಸಂಬಂಧಿಸಿದೆ. ಆ ಪ್ರತಿಭಟನೆ ವೇಳೆ, ಪ್ರತಿಭಟನಾಕಾರರು ಬಿಜೆಪಿ ಕಚೇರಿ, ಪೊಲೀಸ್ ವಾಹನ ಸೇರಿದಂತೆ ಹಲವು ವಾಹನಗಳನ್ನು ಸುಟ್ಟುಹಾಕಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...