ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ | ಅಕ್ರಮ ಬಗ್ಗೆ ಪರಿಶೀಲನೆ; ಅಭ್ಯರ್ಥಿಗಳಿಗೆ ಆತಂಕ ಬೇಡ: ಗೃಹ ಸಚಿವ ಪರಮೇಶ್ವರ್

Date:

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಗುಪ್ತದಳದ (ಇಂಟಲಿಜೆನ್ಸ್) ಪರಿಶೀಲನೆ ವೇಳೆ ಅಕ್ರಮದ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಸಿಸಿಬಿ ಪೊಲೀಸರು ಕೂಲಂಕುಷವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕೆಲ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಯವರು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲು ನಕಲಿ ಕರೆ ಮಾಡಿರುವುದಾಗಿ ಆರೋಪಿತ ಹೇಳಿಕೆ ನೀಡಿದ್ದಾನೆ. ಸತ್ಯಾಸತ್ಯತೆಯ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆತಂಕಪಡುವುದು ಬೇಡ” ಎಂದರು.

“ಹರಿಪ್ರಸಾದ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಪ್ರತಿಕ್ರಿಯಿಸಲು ಹೋಗುವುದಿಲ್ಲ. ಅವರ ಹೇಳಿಕೆಗೆ ಸಂಬಂಧಿಸಿದ ಸುದ್ದಿ ರಾಜ್ಯಪಾಲರ ಗಮನಕ್ಕೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದರು. ಅದರನ್ವಯ ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕು ಅದನ್ನು ಪೊಲೀಸರು ಮಾಡಿದ್ದಾರೆ. ಹರಿಪ್ರಸಾದ್ ಅವರ ವಿರುದ್ಧ ಯಾರು ಒಳ ಸಂಚಾಗಲಿ, ಪಿತೂರಿ ನಡೆಸುತ್ತಿಲ್ಲ. ಅವರಿಗೆ ತೊಂದರೆ ಮಾಡಬೇಕು ಎಂಬ ಉದ್ದೇಶ ಯಾರಿಗೂ ಇಲ್ಲ” ಎಂದು ಪರಮೇಶ್ವರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

“ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಪ್ರಕರಣದ ತನಿಖೆ ಮುಂದುವರಿದಿದೆ. ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಲಾಗುತ್ತಿದೆ” ಎಂದರು.

ಒಳಮೀಸಲಾತಿ ವಿಚಾರದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಒಳ ಮೀಸಲಾತಿಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ರಾಜ್ಯಸಭೆಯ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 341 (3) ಸಂವಿಧಾನಿಕ ತಿದ್ದುಪಡಿ ತಂದು ಒಳ ಮೀಸಲಾತಿಗೆ ಅವಕಾಶ ಮಾಡಿಕೊಡುವಂತೆ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದರೆ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...