ಎಕ್ಸಿಟ್ ಪೋಲ್| ಮಾನಸಿಕ ಆಟವಷ್ಟೆ, ಫಲಿತಾಂಶ ವಿಭಿನ್ನವಾಗಿರುತ್ತದೆ: ಕಾಂಗ್ರೆಸ್

Date:

ಎಕ್ಸಿಟ್ ಪೋಲ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಎಕ್ಸಿಟ್ ಪೋಲ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿಸಿರುವುದು ಎಂದು ಆರೋಪಿಸಿದೆ. ಇವೆಲ್ಲವೂ ಪ್ರಧಾನಿ ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳಾಗಿವೆ, ಆದರೆ ಫಲಿತಾಂಶ ವಿಭಿನ್ನವಾಗಿರುತ್ತದೆ ಎಂದು ಹೇಳಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆಯಲಿದೆ. ಪ್ರಧಾನಿ ಮೋದಿ ಅವರು ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುತ್ತಾರೆ ಎಂದು ಶನಿವಾರದ ಹಲವಾರು ಎಕ್ಸಿಟ್ ಪೋಲ್‌ಗಳು ಹೇಳಿದೆ.

ಆಡಳಿತಾರೂಢ ಮೈತ್ರಿಕೂಟವು ತಮಿಳುನಾಡು ಮತ್ತು ಕೇರಳದಲ್ಲಿ ತನ್ನ ಖಾತೆಯನ್ನು ತೆರೆಯುತ್ತದೆ ಮತ್ತು ಕರ್ನಾಟಕದಲ್ಲೂ ಅಧಿಕ ಸ್ಥಾನ ಗೆಲ್ಲುತ್ತದೆ. ಬಿಹಾರ, ರಾಜಸ್ಥಾನ ಮತ್ತು ಹರಿಯಾಣದಂತಹ ರಾಜ್ಯಗಳಲ್ಲಿ ಬಿಜೆಪಿ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ ಎಂದು ಎಕ್ಸಿಟ್‌ ಪೋಲ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ‘ಎಕ್ಸಿಟ್ ಪೋಲ್‌’ಗಳು ಎಷ್ಟು ನಿಖರ? ನಿರಂತರವಾಗಿ ದಾರಿ ತಪ್ಪಿವೆ ಮತಗಟ್ಟೆ ಸಮೀಕ್ಷೆಗಳು!

ಎಕ್ಸಿಟ್ ಪೋಲ್‌ಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಜೂನ್ 4ರಂದು ನಿರ್ಗಮನ ಖಚಿತವಾಗಿರುವ ವ್ಯಕ್ತಿ ಈ ಎಕ್ಸಿಟ್‌ ಪೋಲ್ ಸಮೀಕ್ಷೆಗಳನ್ನು ಆಯೋಜಿಸಿದ್ದಾರೆ. ಇಂಡಿಯಾ ಜನಬಂಧನ ಖಂಡಿತವಾಗಿಯೂ ಕನಿಷ್ಠ 295 ಸ್ಥಾನಗಳನ್ನು ಪಡೆಯುತ್ತದೆ, ಇದು ಸ್ಪಷ್ಟ ಮತ್ತು ನಿರ್ಣಾಯಕ ಬಹುಮತವಾಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಹೊರಹೋಗುವ ಪ್ರಧಾನ ಮಂತ್ರಿ ಈ ಮಧ್ಯೆ ಮೂರು ದಿನಗಳ ಕಾಲ ಆತ್ಮತೃಪ್ತಿಯಿಂದ ಉಳಿಯಬಹುದು. ಇವೆಲ್ಲವೂ ಅವರು ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳು. ಆದರೆ ನಿಜವಾದ ಫಲಿತಾಂಶಗಳು ತುಂಬಾ ವಿಭಿನ್ನವಾಗಿರುತ್ತದೆ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇನ್ನು ಇಂಡಿಯಾ ಮೈತ್ರಿಕೂಟ 295ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ಇಂಡಿಯಾ ಒಕ್ಕೂಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಎಕ್ಸಿಟ್ ಪೋಲ್‌ ಬಗ್ಗೆ ವಿಶ್ವಾಸವಿಲ್ಲ, ಕಾಂಗ್ರೆಸ್‌ ಡಬ್ಬಲ್ ಡಿಜಿಟ್ ದಾಟುತ್ತೆ: ಡಿ ಕೆ ಶಿವಕುಮಾರ್‌

ಎಕ್ಸಿಟ್ ಪೋಲ್ ನಂಬಬಹುದೇ?

2014ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಪ್ರಧಾನಿ ಮೋದಿ ಅವರು ಅಧಿಕಾರಕ್ಕೆರಿದಾಗಿನಿಂದ ಇಲ್ಲಿಯವರೆಗೂ ನಡೆದಿರುವ ಬಹುತೇಕ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗಳ ಚುನಾವಣೆ ಪೂರ್ವ ಸಮೀಕ್ಷೆ ಮತ್ತು ಮತಗಟ್ಟೆ ಸಮೀಕ್ಷೆ ನಡೆಸಿದ ಕೆಲವು ಗೋದಿ ಮೀಡಿಯಾಗಳು ಹಾಗೂ ಏಜೆನ್ಸಿಗಳು ಬಿಜೆಪಿಯೇ ಗೆಲುವು ಸಾಧಿಸುತ್ತೆ ಎಂದು ಹೇಳಿದ್ದವು.

ಇದನ್ನೇ ಇಟ್ಟುಕೊಂಡು ಗೋದಿ ಮೀಡಿಯಾಗಳು ಬೆಳಿಗ್ಗೆಯಿಂದ ರಾತ್ರಿಯವರೆಗೂ ವಿಜೃಂಭಿಸಿದ್ದವು. ಆದರೆ, ಫಲಿತಾಂಶದ ದಿನ ಗೋದಿ ಮೀಡಿಯಾಗಳು ನೀಡಿದ್ದ ಅಂಕಿಅಂಶಗಳು ಸಂಪೂರ್ಣವಾಗಿ ವಿಫಲವಾಗಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...