ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ಸುಟ್ಟ ದುರುಳರು: ಕೋಮುದ್ವೇಷದ ವಿರುದ್ಧ ಆಕ್ರೋಶ

Date:

ಮುಸ್ಲಿಮರದ್ದು ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ದುರುಳರ ಗುಂಪೊಂದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯಾವತ್ ಗ್ರಾಮದಲ್ಲಿ ನಡೆದಿದೆ. ಸದ್ಯ ಬೇಕರಿ ಮಾಲೀಕ ಸ್ವಪ್ನಿಲ್ ಆದಿನಾಥ್ ಕದಮ್ ಮಾಧ್ಯಮಕ್ಕೆ ನೀಡಿರುವ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕೋಮುದ್ವೇಷ, ಇಸ್ಲಾಮೋಫೋಬಿಯಾದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮುಸ್ಲಿಂ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಮತ್ತು ಛತ್ರಪತಿ ಶಿವಾಜಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂಬ ಸುದ್ದಿಗಳು ಹರಡುತ್ತಿರುವಂತೆ ಈ ಘಟನೆ ನಡೆದಿದೆ. ಶಿವಾಜಿ ಪ್ರತಿಮೆ ಧ್ವಂಸ ವಿರುದ್ಧ ಹಿಂಸಾತ್ಮಕ ಮೆರವಣಿಗೆ ನಡೆದಿದ್ದು, ಈ ವೇಳೆ ಬೇಕರಿ ಮುಸ್ಲಿಮರ ಒಡೆತನದಲ್ಲಿದೆ ಎಂದು ಭಾವಿಸಿ ಹಿಂದೂ ವ್ಯಕ್ತಿಯ ಬೇಕರಿಯನ್ನು ಸುಟ್ಟುಹಾಕಲಾಗಿದೆ.

ಇದನ್ನು ಓದಿದ್ದೀರಾ? ಮುಸ್ಲಿಮರು ವಾಚ್ ಕದ್ದರೆಂದು ಕೋಮುದ್ವೇಷದ ಸುಳ್ಳು ಕಥೆ ಹೆಣೆದ ವೈದ್ಯ; ಸಿಐಎಸ್‌ಎಫ್‌ ತನಿಖೆಯಲ್ಲಿ ಬಟಾಬಯಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಬೇಕರಿ ಮಾಲೀಕ ಸ್ವಪ್ನಿಲ್, “ನನ್ನ ಕೆಲವು ಕೆಲಸಗಾರರು ಮುಸ್ಲಿಮರು. ಅವರು ಉತ್ತರ ಪ್ರದೇಶ ಮೂಲದವರು. ಯಾವುದೋ ಮುಸ್ಲಿಂ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಒಂದನ್ನು ಮಾಡಿದ್ದ ಎನ್ನಲಾಗಿದೆ. ಇಲ್ಲಿ 150-200 ದೂರದಲ್ಲಿ ಮಸೀದಿಯಿದೆ. ಗುಂಪು ಮಸೀದಿಯೆಡೆ ಹೋಗುತ್ತಿತ್ತು. ಈ ವೇಳೆ ಯಾರೋ ನನ್ನ ಬೇಕರಿಯನ್ನು ಮುಸ್ಲಿಮರದ್ದು ಎಂದು ಹೇಳಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ನಮ್ಮ ಬೇಕರಿಯನ್ನು ಮುಸ್ಲಿಮರದ್ದು ಎಂದು ತಪ್ಪಾಗಿ ಭಾವಿಸಿ ಗುಂಪು ಬೇಕರಿ ಮೇಲೆ ಕಲ್ಲು ತೂರಾಟ ನಡೆಸಿದೆ. ಬೇಕರಿಯನ್ನು ಸಂಪೂರ್ಣವಾಗಿ ಸುಟ್ಟು ಹಾಕಿದೆ. ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾಗಿದೆ ಎನ್ನಲಾದ ಪೋಸ್ಟ್‌ಗೂ ನಮ್ಮ ಕೆಲಸಗಾರರಿಗೂ ಯಾವುದೇ ಸಂಬಂಧವಿಲ್ಲ” ಎಂದೂ ಸ್ವಪ್ನಿಲ್ ತಿಳಿಸಿದ್ದಾರೆ.

ಸದ್ಯ ಈ ಘಟನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇಶದಲ್ಲಿ ಮುಸ್ಲಿಮರ ಮೇಲೆ ಹೆಚ್ಚುತ್ತಿರುವ ಹಗೆತನದ ಮತ್ತೊಂದು ಆತಂಕಕಾರಿ ಸಂಕೇತ. ಇಂತಹ ಕೃತ್ಯಗಳಿಂದಾಗಿ ಈಗಾಗಲೇ ಮುಸ್ಲಿಮರು ಮತ್ತು ಮುಸ್ಲಿಮೇತರರು ತಮ್ಮ ವ್ಯಾಪಾರವನ್ನೇ ಕಳೆದುಕೊಳ್ಳುವ ಆತಂಕದಲ್ಲೇ ಬದುಕುತ್ತಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, “ದೇಶವನ್ನು ಈ ಹಂತಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ತಂದು ನಿಲ್ಲಿಸಿದೆ” ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಕೇಸರಿ ಭಯೋತ್ಪಾದನೆ ಎಂದೂ ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...