ಪಂಜಾಬ್‌ ಎಎಪಿ ಸರ್ಕಾರ ಶೀಘ್ರ ಪತನ: ಬ್ರಿಜ್ ಭೂಷಣ್ ಸಿಂಗ್

Date:

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಸಂಕಷ್ಟದಲ್ಲಿದೆ. ಪಕ್ಷವು ಭವಿಷ್ಯ ಕಳೆದುಕೊಳ್ಳುತ್ತಿದೆ. ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಆವಾಗ ಬೇಕಿದ್ದರೂ ಪತನಗೊಳ್ಳಬಹುದು ಎಂದು ಬಿಜೆಪಿ ಮಾಜಿ ಸಂಸದ, ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದ ನಿಪಾನಿಯಾದಲ್ಲಿ ಮಾತನಾಡಿದ ಸಿಂಗ್, “ಅರವಿಂದ್ ಕೇಜ್ರಿವಾಲ್ ಇನ್ನು ಮುಂದೆ ಯಾವುದೇ ಚುನಾವಣೆಯನ್ನು ಗೆಲ್ಲುವುದಿಲ್ಲ” ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಸಿಂಗ್ ಹಿಂದಿನ ಕೇಂದ್ರ ಸರ್ಕಾರದ ಅವಧಿಯಲ್ಲಿ ಬಿಜೆಪಿ ಸಂಸದರಾಗಿದ್ದರು. ಕುಸ್ತಿ ಫೆಡರೇಷನ್‌ನ ಅಧ್ಯಕ್ಷರೂ ಆಗಿದ್ದರು. ಅವರು ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಪ್ರಕರಣ ದಾಖಲಿಸಿದ್ದಾರೆ. ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ 2023ರಲ್ಲಿ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಮುಂದಾಗಿದ್ದರು. ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ದಾಳಿಗಳು ನಡೆದಿದ್ದವು. ಆದಾಗ್ಯೂ, ಕುಸ್ತಿಪಟುಗಳು ಹೋರಾಟ ಮುಂದುವರೆಸಿದ್ದರು. ಅವರ ಹೋರಾಟಕ್ಕೆ ದೇಶಾದ್ಯಂತ ಬೆಂಬಲ ವ್ಯಕ್ತಪವಾಗಿತ್ತು. ಪರಿಣಾಮ, ಆರೋಪಿ ಬ್ರಿಜ್ ಭೂಷಣ್‌ ಸಿಂಗ್ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಕಳೆದ ವಾರ ದೆಹಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಒಟ್ಟು 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳನ್ನು ಗೆದ್ದು, ಸರ್ಕಾರ ರಚಿಸಲು ಮುಂದಾಗಿದೆ. ಎಎಪಿ 22 ಸ್ಥಾನಗಳನ್ನು ಮಾತ್ರ ಗೆದ್ದಿದ್ದು, ಅಧಿಕಾರ ಕಳೆದುಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...