ಪಂಜಾಬ್‌ | ಎಎಪಿ ನಾಯಕ ಅನೋಕ್ ಮಿತ್ತಲ್ ಮೇಲೆ ದಾಳಿ; ಕಣ್ಣೆದುರೇ ಪತ್ನಿಯ ಕೊಲೆ

Date:

ಆಮ್ ಆದ್ಮಿ ಪಕ್ಷದ ನಾಯಕ, ಉದ್ಯಮಿ ಅನೋಕ್ ಮಿತ್ತಲ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮಿತ್ತಲ್ ಅವರ ಪತ್ನಿ ಲಿಪ್ಸಿ ಮಿತ್ತಲ್ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಪಂಜಾಬ್‌ನ ಡೆಹ್ಲೋ ಬಳಿಯ ರುರ್ಕಾ ಗ್ರಾಮದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದೆ.

ಮಿತ್ತಲ್ ಮತ್ತು ಅವರ ಪತ್ನಿ ಲಿಪ್ಸಿ ಅವರು ಡೆಹ್ಲೋದಿಂದ ತಮ್ಮ ನಿವಾಸಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಐವರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅವರ ಕಾರನ್ನು ರುರ್ಕಾ ಗ್ರಾಮದ ಬಳಿ ತಡೆದಿದ್ದಾರೆ. ದಂಪತಿಗಳ ಮೇಲೆ ಕ್ರೂರವಾಗಿ ದಾಳಿ ನಡೆಸಿದ್ದಾರೆ.

ದರೋಡೆಕೋರರನ್ನು ತಡೆಯಲು ಅನೋಕ್ ಮಿತ್ತಲ್ ಪ್ರಯತ್ನಿಸಿದ್ದು, ದಂಪತಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದದ್ದ ಇಬ್ಬರನ್ನೂ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಲಿಪ್ಸಿ ಮಿತ್ತಲ್ ಘಟನಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರೋಡೆಕೋರರು ಮಿತ್ತಲ್ ಅವರ ಕಾರು ಮತ್ತು ಇತರ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀರು ತನಿಖೆ ನಡೆಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ಯಮಿ ಅನೋಕ್ ಮಿತ್ತಲ್ ಸುಮಾರು ನಾಲ್ಕು ತಿಂಗಳ ಹಿಂದೆ ಎಎಪಿ ಸೇರಿದ್ದರು. ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಕಾರಣಕ್ಕಾಗಿ ಮಿತ್ತಲ್ ಕುಟುಂಬವು ವ್ಯವಹಾರ ಮತ್ತು ರಾಜಕೀಯ ವಲಯಗಳಲ್ಲಿ ಗಮನ ಸೆಳೆದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...