ಪಂಜಾಬ್ | ಚುನಾವಣಾ ಸ್ಪರ್ಧೆಯಲ್ಲಿ ಪಕ್ಷಾಂತರಿಗಳ ದರ್ಬಾರ್

Date:

ಪಂಜಾಬ್‌ನಲ್ಲಿ ನಾಲ್ಕು ಪ್ರಮುಖ ರಾಜಕೀಯ ಪಕ್ಷಗಳು – ಎಎಪಿ, ಬಿಜೆಪಿ, ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎಲ್ಲ ಪಕ್ಷಗಳು ಘೋಷಿಸಿರುವ ಒಟ್ಟು 52 ಅಭ್ಯರ್ಥಿಗಳಲ್ಲಿ 15 ಮಂದಿ ಪಕ್ಷಾಂತರಿಗಳು ಎಂಬುದು ಗಮನಾರ್ಹ. ಇವರಲ್ಲಿ, 7 ಮಂದಿ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ಮತ್ತು ಎಎಪಿಯಿಂದ ತಲಾ ಮೂವರು ಮತ್ತು ಎಸ್‌ಎಡಿಯಿಂದ ಒಬ್ಬರು ಸ್ಪರ್ಧಿಸಿದ್ದಾರೆ. ಅದರಲ್ಲು, ಇವರಲ್ಲಿ ಬಹುತೇಕ ಅಭ್ಯರ್ಥಿಗಳು ಕಾಂಗ್ರೆಸ್‌ ತೊರೆದವರಾಗಿದ್ದಾರೆ.

“ಬಿಜೆಪಿ ಮತ್ತು ಎಎಪಿ – ಎರಡೂ ಪಕ್ಷಗಳು ಪ್ರಬಲ ಅಭ್ಯರ್ಥಿಗಳ ಕೊರತೆ ಎದುರಿಸಿದ್ದು, ಪಕ್ಷಾಂತರಿಗಳನ್ನು ಕಣಕ್ಕಿಳಿಸಿವೆ. ಜಲಂಧರ್‌ ಕ್ಷೇತ್ರದಲ್ಲಿ ಎಲ್ಲ ಪಕ್ಷಗಳು ಪಕ್ಷಾಂತರಿಗಳನ್ನೇ ಕಣಕ್ಕಿಳಿಸಿವೆ. ಅಲ್ಲದೆ, ಬಿಜೆಪಿಯು ಎಸ್‌ಎಡಿ ಜೊತೆ ಮೈತ್ರಿ ಮಾಡಿಕೊಂಡು ಮೂರು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿತ್ತು. ಆದರೆ, ಮೈತ್ರಿ ಮುರಿದಿರುವ ಪರಿಣಾಮ ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆಗಳಿದಿದೆ. ಅದಕ್ಕೆ ಅಭ್ಯರ್ಥಿಗಳ ಅವಶ್ಯಕತೆ ಇದೆ. ಹೀಗಾಗಿ, ಪಕ್ಷಾಂತರಿಗಳನ್ನು ಕಣಕ್ಕಿಳಿಸುತ್ತಿದೆ” ಎಂದು ರಾಜಕೀಯ ವಿಶ್ಲೇಷಕ ಪ್ರೊಫೆಸರ್ ಕಲದೀಪ್ ಸಿಂಗ್ ಹೇಳಿದ್ದಾರೆ.

ಬಿಜೆಪಿಯಿಂದ ಕಣಕ್ಕಿಳಿದಿರುವ ಪಕ್ಷಾಂತರಿಗಳಲ್ಲಿ ಪಟಿಯಾಲದ ಹಾಲಿ ಸಂಸದೆ ಪ್ರಣೀತ್ ಕೌರ್ ಮತ್ತು ಲೂಧಿಯಾನದ ಸಂಸದ ರವನೀತ್ ಸಿಂಗ್ ಬಿಟ್ಟು ಸೇರಿದ್ದಾರೆ. ಈ ಇಬ್ಬರೂ, ಕಳೆದ ಮಾರ್ಚ್‌ನಲ್ಲಿ ಕಾಂಗ್ರೆಸ್‌ ತೊರೆದು, ಬಿಜೆಪಿ ಸೇಇದ್ದರು. ಜಲಂಧರ್‌ನಲ್ಲಿ ಸುಶೀಲ್ ಕುಮಾರ್ ರಿಂಕು ಮತ್ತು ಫಿರೋಜ್‌ಪುರನಲ್ಲಿ ಮಾಜಿ ಸಚಿವ ರಾಣಾ ಗುರ್ಮಿತ್ ಸಿಂಗ್ ಸೋಧಿ ಎಎಪಿಯಿಂದ ಸ್ಪರ್ಧಿಸಿದ್ದಾರೆ. ಇವರೂ ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಣೀತ್ ಕೌರ್ ಅವರು ಬಿಜೆಪಿ ಸೇರುವ ಮುನ್ನ, ಅವರ ಅವರ ಪತಿ, ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಅನಧಿಕೃತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಕಳಗಿಳಿಸಿತ್ತು. ಬಳಿಕ, ಕಾಂಗ್ರೆಸ್‌ ತೊರೆದ ಅವರು 2022ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸೇರಿದ್ದರು. ಇದೀಗ, ಕೌರ್ ಕೂಡ ಬಿಜೆಪಿ ಸೇರಿದ್ದಾರೆ.

ಇನ್ನು, 2022ರ ಜನವರಿಯಲ್ಲಿ ಬಿಜೆಪಿಗೆ ಸೇರಿದ್ದ ಎಸ್‌ಎಡಿ ಮಾಜಿ ಶಾಸಕ ಮಂಜಿತ್ ಸಿಂಗ್ ಮನ್ನಾ ಮಿಯಾನ್‌ವಿಂಡ್ ಅವರನ್ನು ಖದೂರ್ ಸಾಹಿಬ್‌ನಿಂದ ಬಿಜೆಪಿ ಕಣಕ್ಕಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...