ಪಂಜಾಬ್‌ | ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರುವ ಬೆದರಿಕೆ ಹಾಕುತ್ತಿದ್ದಾರೆ: ಸಿಎಂ ಭಗವಂತ್ ಮಾನ್

Date:

ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದಾಗಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ ಆರೋಪಿಸಿದ್ದಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿರುವ ಮಣಿಪುರ ಮತ್ತು ಹರಿಯಾಣದಲ್ಲಿ ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಅಲ್ಲಿನ ರಾಜ್ಯಪಾಲರು ಮೌನ ವಹಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ ಮತ್ತು ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಎಂದು ರಾಜ್ಯಪಾಲ ಪುರೋಹಿತ್ ಶುಕ್ರವಾರ ಮಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಪುರೋಹಿತ್ ಅವರು ತಾವು ಕಳುಹಿಸಿದ ಪತ್ರಗಳಿಗೆ ಮಾನ್‌ ಅವರು ಪ್ರತಿಕ್ರಿಯಿಸಲಿಲ್ಲ ಎಂದು ಆರೋಪಿಸಿದ್ದಾರೆ. ಆದರೆ, ತಾವು ಸ್ವೀಕರಿಸಿದ ಪತ್ರಗಳಿಗೆ ಉತ್ತರಿಸಿದ್ದೇವೆ. ರಾಜ್ಯಪಾಲರು 16 ಪತ್ರಗಳನ್ನು ಬರೆದಿದ್ದರು. ಅವುಗಳಲ್ಲಿ ಏಳಕ್ಕೆ ಮಾತ್ರ ಉತ್ತರಿಸಿಲ್ಲ. ರಾಜ್ಯಪಾಲರು ಆತುರದಿಂದ ಪತ್ರ ಬರೆದು ತಕ್ಷಣ ಉತ್ತರ ನಿರೀಕ್ಷಿಸುವುದು ಬೇಡ ಎಂದು ಮಾನ್‌ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಪಾಲರು ಪಂಜಾಬ್‌ನ ಶಾಂತಿಪ್ರಿಯ ಜನರಿಗೆ ರಾಷ್ಟ್ರಪತಿ ಆಳ್ವಿಕೆ ಹೇರುವ ಬೆದರಿಕೆ ಹಾಕುತ್ತಿದ್ದಾರೆ. ಅವರು 356ನೇ ವಿಧಿಯಡಿ ರಾಷ್ಟ್ರಪತಿ ಮೂಲಕ ರಾಜ್ಯಪಾಲರ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ ಹೇಳುತ್ತಿದ್ದಾರೆ” ಎಂದು ಮಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ತಮ್ಮ ಸರ್ಕಾರವು ಡ್ರಗ್ಸ್ ಹಾವಳಿಯನ್ನು ನಿಭಾಯಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕಳ್ಳಸಾಗಾಣಿಕೆದಾರರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ದರೋಡೆಕೋರರ ವಿರುದ್ಧ ದಾಳಿ ಮಾಡುವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಿರುವಾಗ, ಅವರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

“ನಾನು ಗವರ್ನರ್ ಅವರನ್ನು ಕೇಳಲು ಬಯಸುತ್ತೇನೆ. ನುಹ್‌ನಲ್ಲಿನ ಕೋಮು ಘರ್ಷಣೆ ಮತ್ತು ಹಿಂಸಾಚಾರ ಸಂಬಂಧ ಕರ್ಫ್ಯೂ ವಿಧಿಸಬೇಕಾದ ಬಗ್ಗೆ ಹರಿಯಾಣ ರಾಜ್ಯಪಾಲರು ಹರಿಯಾಣ ಮುಖ್ಯಮಂತ್ರಿ ಖಟ್ಟರ್‌ಗೆ ಏನಾದರೂ ನೋಟಿಸ್ ನೀಡಿದ್ದಾರೆಯೇ? ಹರ್ಯಾಣ ರಾಜ್ಯಪಾಲರು ಖಟ್ಟರ್ ಅವರಿಗೆ ಪತ್ರ ಬರೆದಿದ್ದಾರೆಯೇ? ಇಲ್ಲ. ಏಕೆಂದರೆ ಕೇಂದ್ರದಲ್ಲೂ ಅವರ ಸರ್ಕಾರ ಆಡಳಿತ ನಡೆಸುತ್ತಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕಾವೇರಿ ನದಿ ವಿವಾದ : ವಾಸ್ತವ ಸ್ಥಿತಿ ಕುರಿತು ವರದಿಗೆ ಸೂಚಿಸಿ ಸೆ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

“ಪಂಜಾಬ್ ಗವರ್ನರ್ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಕಾಳಜಿ ವಹಿಸಿದ್ದಾರೆ. ಆದರೆ, ಜನಾಂಗೀಯ ಹಿಂಸಾಚಾರದಿಂದ ಕೂಡಿದ ಮಣಿಪುರದ ಬಗ್ಗೆ ಎಂದಿಗೂ ಅವರು ಮಾತನಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಮಣಿಪುರಕ್ಕೆ ಸಂವಿಧಾನ ಅನ್ವಯಿಸುವುದಿಲ್ಲವೇ? ಉತ್ತರ ಪ್ರದೇಶದಲ್ಲಿ ಪತ್ರಕರ್ತರ ಮುಂದೆಯೇ ಕೊಲೆ ನಡೆಯುತ್ತದೆ. ಆದರೆ, ಅಲ್ಲಿನ ರಾಜ್ಯಪಾಲರು ಯೋಗಿ ಆದಿತ್ಯನಾಥ್ ಅವರಿಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರಶ್ನಿಸುವ ಯಾವುದೇ ಪತ್ರ ಬರೆಯುವ ಧೈರ್ಯ ಮಾಡುತ್ತಾರೆಯೇ” ಎಂದು ಕಿಡಿಕಾರಿದ್ದಾರೆ.

“ಪಂಜಾಬ್, ದೆಹಲಿ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಹೊರತುಪಡಿಸಿ ಹೆಚ್ಚಿನ ರಾಜ್ಯಗಳ ಜನರಿಗೆ ಅವರ ರಾಜ್ಯಪಾಲರ ಹೆಸರುಗಳು ತಿಳಿದಿರುವುದಿಲ್ಲ. ಏಕೆಂದರೆ, ಈ ಆರು ರಾಜ್ಯಗಳಲ್ಲಿ ಮಾತ್ರವೇ ಬಿಜೆಪಿಯೇತರ ಸರ್ಕಾರಗಳಿವೆ” ಎಂದು ಮಾನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...