ಪೆಟ್ರೋಲ್ ಪಂಪ್‌ಗಳಲ್ಲಿ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್ ಹಾಕಲು ಸೂಚನೆ!

Date:

ಕೆಲವೇ ವಾರಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಪ್ರಚಾರಕ್ಕೆ ತಯಾರಿ ನಡೆಸುತ್ತಿವೆ. ಈ ನಡುವೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಅಡಿಯಲ್ಲಿರುವ ಪೆಟ್ರೋಲ್ ಪಂಪ್‌ಗಳಲ್ಲಿ ‘ಮೋದಿ ಕಿ ಗ್ಯಾರಂಟಿ’ ಎಂಬ ಹೋರ್ಡಿಂಗ್ ಅನ್ನು ಹಾಕಲು ಕೇಂದ್ರ ಸರ್ಕಾರ ಸೂಚನೆ ನೀಡಿರುವುದಾಗಿ ವರದಿಯಾಗಿದೆ.

ಇತ್ತೀಚೆಗೆ, ಮೋದಿ ಫೋಟೋ ಇರುವ ಅಕ್ಕಿ ಬ್ಯಾಗ್‌ ಖರೀದಿಗಾಗಿಯೇ ಕೇಂದ್ರ ಸರ್ಕಾರ ಕೋಟ್ಯಾಂತರ ರೂಪಾಯಿಯನ್ನು ಖರ್ಚು ಮಾಡಿದೆ. ಈಗ, ಕೇಂದ್ರ ಬಿಜೆಪಿ ಸರ್ಕಾರ ಹೋರ್ಡಿಂಗ್‌ಗಾಗಿ ಕೋಟ್ಯಾಂತರ ರೂಪಾಯಿ ಹೊರೆಯನ್ನು ಸರ್ಕಾರದ ತೈಲ ಕಂಪನಿಗಳ ಮೇಲೆ ಹೊರೆಸಿದೆ.

ಈ ಹೋರ್ಡಿಂಗ್‌ನಲ್ಲಿ ಪ್ರಧಾನಿ ಮೋದಿಯ ಚಿತ್ರವಿದ್ದು, ಪಿಎಂ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ನೀಡುವ ಚಿತ್ರವಿದೆ. ಬುಧವಾರ ಸಂಜೆಯ ಒಳಗಾಗಿ ಎಲ್ಲ ಕಡೆ ಹೊಸ ಹೋರ್ಡಿಂಗ್ ಹಾಕಲು ಪೆಟ್ರೋಲ್ ಬಂಕ್‌ಗಳು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಕೂಡಾ ಕೇಂದ್ರ ಮನವಿ ಮಾಡಿದೆ. ಈಗಾಗಲೇ, ಹಲವೆಡೆ ಪೆಟ್ರೋಲ್ ಪಂಪ್‌ಗಳಲ್ಲಿ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್ ಹಾಕಲಾಗುತ್ತಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರ್ಡಿಂಗ್ ಅಳವಡಿಸುವವರು ಬರದಿದ್ದರೆ ಆಯಾ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಲು ಪೆಟ್ರೋಲ್ ಪಂಪ್‌ನ ಮ್ಯಾನೇಜರ್‌ಗಳಿಗೆ ಸೂಚಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಒಟ್ಟಿನಲ್ಲಿ ಎರಡೇ ದಿನದೊಳಗೆ ಹೋರ್ಡಿಂಗ್ ಹಾಕಲು ತಿಳಿಸಲಾಗಿದೆ. ಇನ್ನು ಕೇಂದ್ರ ತೈಲ ಸಚಿವಾಲಯದ ಸೂಚನೆ ಇದಾಗಿದೆ ಎಂದು ಕೂಡಾ ವರದಿಯಾಗಿದೆ.

ಕೇಂದ್ರ ಸರ್ಕಾರದ ಈ ಸೂಚನೆಯಿಂದಾಗಿ ಸರ್ಕಾರಿ ಸ್ವಾಮ್ಯದ ಕಂಪನಿಗಳ ಬೊಕ್ಕಸಕ್ಕೆ ಹೊರೆ ಅಧಿಕವಾಗಲಿದೆ. ಇಂಡಿಯನ್ ಆಯಿಲ್, ಹಿಂದುಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಏಕೆಂದರೆ ದೇಶದಲ್ಲಿರುವ ಸುಮಾರು 88 ಸಾವಿರ ಪೆಟ್ರೋಲ್ ಬಂಕ್‌ಗಳ ಪೈಕಿ ಶೇಕಡ 90ರಷ್ಟು ಬಂಕ್‌ಗಳು ಈ ಮೂರು ಸಂಸ್ಥೆಗಳ ಒಡೆತನದಲ್ಲಿರುವುದು ಆಗಿದೆ.

ಆದರೆ ಲೋಕ ಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾದಾಗ ಈ ಎಲ್ಲ ಹೋರ್ಡಿಂಗ್‌ಗಳನ್ನು ತೆಗೆದುಹಾಕಬೇಕಾಗುತ್ತದೆ. ಒಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಪ್ರಚಾರಕ್ಕಾಗಿ ಸರ್ಕಾರಿ ಹಣ ವೆಚ್ಚ ಮಾಡಲಾಗುತ್ತಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಇದರ ಹೊರೆ ಜನ ಸಾಮಾನ್ಯರ ಮೇಲೆಯೂ ಬೀಳಲಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...