ದ್ವೇಷ ರಾಜಕಾರಣ ಕೊನೆಗಾಣಿಸುವುದೇ ರಾಜೀವ್ ಗಾಂಧಿಗೆ ಸಲ್ಲಿಸುವ ಗೌರವ : ಸಿಎಂ ಸಿದ್ದರಾಮಯ್ಯ

Date:

  • ಕೆಪಿಸಿಸಿಯಲ್ಲಿ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮ
  • ಜಗತ್ತು ಮತ್ತು ದೇಶದಲ್ಲಿ ಶಾಂತಿ ನೆಲೆಸಿದ್ದರೆ ಮಾತ್ರ ಮನುಕುಲ ಉದ್ಧಾರವಾಗುತ್ತದೆ

ದ್ವೇಷದ ರಾಜಕಾರಣ ಕೊನೆಗಾಣಿಸುವುದೇ ನಾವು ರಾಜೀವ್ ಗಾಂಧಿ ಯವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿ ಇರುವವರೆಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಸಾಮರಸ್ಯ ಇರುವುದಿಲ್ಲ. ಬಡವರು, ದಲಿತರು, ಹಿಂದುಳಿದವರು ದೇಶದ ಅನೇಕ ಭಾಗಗಳಲ್ಲಿ ಆತಂಕದಲ್ಲಿ ಬದುಕುತ್ತಿದ್ದಾರೆ. ಜಗತ್ತು ಮತ್ತು ದೇಶದಲ್ಲಿ ಶಾಂತಿ ನೆಲೆಸಿದ್ದರೆ ಮಾತ್ರ ಮನುಕುಲ ಉದ್ಧಾರವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವನ್ನು ನಿರ್ಮಿಸಬೇಕಿದೆ. ಇದನ್ನು ಸ್ಥಾಪಿಸಲು ಮಾಜಿ ಪ್ರಧಾಣಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಮತ್ತಿತರರು ಪ್ರಯತ್ನಿಸಿದರು. ರಾಜೀವ್ ಗಾಂಧಿಯಂತಹ ಮಹಾನ್ ನಾಯಕನೊಬ್ಬನನ್ನು ಭಯೋತ್ಪಾದನೆ ಬಲಿತೆಗೆದುಕೊಂಡಿದೆ. ಅವರೊಬ್ಬ ಕ್ರಿಯಾಶೀಲ ನಾಯಕರು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಕೊಡುಗೆ

ಕಾಂಗ್ರೆಸ್ ನವರು ಭಯೋತ್ಪಾದನೆಯನ್ನು ಬೆಂಬಲಿಸುತ್ತಾರೆನ್ನುವ ಬಿಜೆಪಿಯಲ್ಲಿ ಯಾರೂ ಭಯೋತ್ಪಾದನೆಯಲ್ಲಿ ಪ್ರಾಣ ಕಳೆದುಕೊಂಡಿಲ್ಲ. ಕಾಂಗ್ರೆಸ್ಸಿನವರು ದೇಶದಲ್ಲಿ ಭಯೋತ್ಪಾದನೆ ತೊಲಗಿಸಲು ಹೋರಾಡಿದರು. ಭಯೋತ್ಪಾದನೆಯಿಂದ ದೇಶಕ್ಕೆ ಅಪಾಯ. ಜನರ ನೆಮ್ಮದಿ, ಶಾಂತಿಯನ್ನು ಹಾಳು ಮಾಡುವ ಭಯೋತ್ದಾದನೆಯನ್ನು ತೊಡೆದುಹಾಕಲು ಕಾಂಗ್ರೆಸ್ ಮೊದಲಿನಿಂದಲೂ ಹೋರಾಟ ಮಾಡುತ್ತಿದೆ.

ಭಯೋತ್ದಾದನೆಗೆ ರಾಜೀವ್ ಗಾಂಧಿ ಹಾಗೂ ಇಂದಿರಾ ಗಾಂಧಿ ಬಲಿಯಾಗಿದ್ದಾರೆ. ದೇಶದ ಐಕ್ಯತೆ, ಸಾರ್ವಭೌಮತ್ವವನ್ನು ಎತ್ತಿಹಿಡಿಯುವಲ್ಲಿ ಕಾಂಗ್ರೆಸ್ ಮುಂಚೂಣಿಯಲ್ಲಿದೆ.ದೇಶಕ್ಕೆ ಸ್ವಾತಂತ್ರ್ಯ ತರಲು ಹೋರಾಡಿ, ಭಾರತೀಯರಿಗೆ ಅವರದ್ದೇ ಸರ್ಕಾರ ರೂಪಿಸಲು ಅವಕಾಶ ಮಾಡಿಕೊಟ್ಟಿದ್ದು ಕಾಂಗ್ರಸ್ ಪಕ್ಷ. ಸ್ವಾತಂತ್ರ್ಯದ ಬೆಲೆ ಕಾಂಗ್ರೆಸ್ ಗೆ ತಿಳಿದಿದೆ.

ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ತಮ್ಮದೇ ಕೊಡುಗೆ ನೀಡಿದ್ದಾರೆ. ನೆಹರೂ ಅವರು ಪ್ರಜಾಪ್ರಭುತ್ವದ ಬುನಾದಿ ಹಾಕಿದವರು.ಭಾರತದಂತಹ ದೊಡ್ಡ ದೇಶದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಲು ಜವಾಹರ್ ಲಾಲ್ ನೆಹರು ಅವರು ಹಾಕಿದ ಬುನಾದಿಯೇ ಕಾರಣ.

ವಿರೋಧ ಪಕ್ಷಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಬೆಂಬಲ ಸಹಕಾರ ನೀಡಿದರು. ಈಗಿನ ಪ್ರಧಾನಿಗಳಿಗೂ ನೆಹರೂ ಅವರಿಗೂ ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ರಾಜೀವ್ ಗಾಂಧಿಯವರು ಪ್ರಜಾಪ್ರಭುತ್ವದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಬಯಸಿದ್ದರು. ರಾಹುಲ್ ಗಾಂಧಿಯವರು ಅದನ್ನು ಮುಂದುವರೆಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ ನೀಡಲಿ

ಕಾಂಗ್ರೆಸ್ ಪಕ್ಷ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ದಲಿತರಿಗೆ, ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಿದೆ. ಜನತಂತ್ರದ ವಿಕೇಂದ್ರೀಕರಣ ಜಾರಿಗೆ ತಂದಿದ್ದು ರಾಜೀವ್ ಗಾಂಧಿಯವರು.

ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಮಸೂದೆ ಇದೆ. ಶೇ 50ಕ್ಕೆ ಏರಿಸಿದರೆ ನಮ್ಮ ತಕರಾರು ಇಲ್ಲ ಎಂದರು. ನಿಜವಾದ ಅರ್ಥದಲ್ಲಿ ಸಮಪಾಲು. ಸಮಬಾಳು ದೊರೆಯಬೇಕು ಎಂದು ಸಿಎಂ ಹೇಳಿದರು.

ಈ ಸುದ್ದಿ ಓದಿದ್ದೀರಾ?: ಜುಲೈನಲ್ಲಿ ನೂತನ ಸರ್ಕಾರದ ಬಜೆಟ್ ಮಂಡನೆ; ಸಿಎಂ ಸಿದ್ದರಾಮಯ್ಯ ಘೋಷಣೆ

ಏಳು ಕೋಟಿ ಕನ್ನಡಿಗರ ಗೆಲುವು

ಈ ಚುನಾವಣೆಯ ಗೆಲುವು ಕಾಂಗ್ರೆಸ್ ಪಕ್ಷದ್ದಲ್ಲ, ಇದು ಏಳು ಕೋಟಿ ಕನ್ನಡಿಗರ ಗೆಲುವು ಎಂದ ಮುಖ್ಯಮಂತ್ರಿಗಳು, ಜನ ಸುಭದ್ರ ಸರ್ಕಾರವನ್ನು ಬಯಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವುದೇ ನಮ್ಮ ಮುಂದಿರುವ ಸವಾಲು ಎಂದರು.

ಐದು ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿರುವ ವ್ಯಾಖ್ಯಾನಕ್ಕೆ ಉತ್ತರ ನೀಡಿ ಮುಂದಿನ ಅಧಿವೇಶನದಲ್ಲಿ ಈ ಐದೂ ಗ್ಯಾರಂಟಿಗಳನ್ನು ಮತ್ತೊಮ್ಮೆ ಸ್ಥಿರೀಕರಿಸಿ ಆದೇಶ ಹೊರಡಿಸಿ ಅಂದಿನಿಂದಲೇ ಜಾರಿಗೆ ತರುತ್ತೇವೆ ಎಂದರು.

ಮಾಹಿತಿ ಸಂಗ್ರಹಣೆ ಮುಗಿದ ಕೂಡಲೇ ಅನುಮೋದನೆ ನೀಡಿ, ಆದೇಶ ಹೊರಡಿಸಲಾಗುವುದು ಎಂದರು. ನಮ್ಮ ಪ್ರಣಾಳಿಕೆಯಲ್ಲಿ ಹೇಳಿರವ ಅನೇಕ ವಿಚಾರಗಳನ್ನೂ ಜಾರಿಗೆ ತರಲಾಗುವುದು. ಭರವಸೆಗಳನ್ನು ಚಾಚೂ ತಪ್ಪದೆ ಈಡೇರಿಸಿ, ನುಡಿದಂತೆ ನಡೆಯುವುದಾಗಿ ಭರವಸೆಯಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...