ವಿಧಾನಸೌಧ ಮುಂದೆ ಆರ್‌ ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಪ್ರತಿಭಟನೆ

Date:

ರಾಜ್ಯ ಕಾಂಗ್ರೆಸ್ ಸರಕಾರವು ಸರಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆರೋಪಿಸಿ ವಿಪಕ್ಷ ನಾಯಕರು ಬುಧವಾರ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ‘ಸಿದ್ದು ಸರಕಾರದಲ್ಲಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ’ ಮತ್ತು ‘ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ಕೊಡಿ’ ಎಂಬ ಭಿತ್ತಿಪತ್ರ ಹಿಡಿದು ಪ್ರತಿಭಟಿಸಿದರು.

“ನಿಷ್ಠಾವಂತ ಅಧಿಕಾರಿಗಳು ಕೆಲಸ ಮಾಡಲು ಆಗದ ಪರಿಸ್ಥಿತಿ ಇದೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಬ್ ಇನ್‍ಸ್ಪೆಕ್ಟರ್ ಒಬ್ಬರು ಪ್ರಾಣ ಕಳಕೊಂಡಿದ್ದಾರೆ. ನಿರಂತರವಾಗಿ ಸರಣಿ ರೀತಿ ಆತ್ಮಹತ್ಯೆ ನಡೆಯುತ್ತಿದೆ. ಬೆದರಿಸುವ ಕೆಲಸ ಮುಂದುವರೆದಿದೆ ಎಂದು ಟೀಕಿಸಿದರು. ಗೃಹ ಸಚಿವರು ಮತ್ತು ಮುಖ್ಯಮಂತ್ರಿಗಳು ಇದರ ಕುರಿತು ಚಕಾರ ಎತ್ತಿಲ್ಲ” ಎಂದು ಆರ್‌ ಅಶೋಕ್ ದೂರಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿ.ಟಿ.ರವಿ ಅವರ ವಿಷಯದಲ್ಲಿ ಯಾಕೆ ಕಾನೂನು ರೀತಿ ಬಿಟ್ಟು ಕ್ರಮ ಕೈಗೊಂಡಿದ್ದೀರಿ? ಮೈಸೂರಿನ ಎರಡು ಪ್ರಮುಖ ಘಟನೆಗಳಲ್ಲಿ ಯಾರನ್ನು ಬಂಧಿಸಿದ್ದೀರಿ? 500- 600 ಜನ ಠಾಣೆ ಮೇಲೆ ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಹಿಂದೂಗಳಿಗೆ ಒಂದು ಕಾನೂನು, ಮುಸ್ಲಿಮರಿಗೆ ಇನ್ನೊಂದು ಕಾನೂನಾ? ಸರಕಾರ ಪೊಲೀಸರ ವಿರುದ್ಧ ಮಾತನಾಡಿದರೆ ಅವರ ಆತ್ಮಸ್ಥೈರ್ಯ ಉಳಿಯುವುದು ಹೇಗೆ” ಎಂದು ಪ್ರಶ್ನಿಸಿದರು.

ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, “ಸರಕಾರದ ಹಾಗೂ ರಾಜ್ಯದ ಗಮನ ಸೆಳೆಯಲು ಈ ಪ್ರದರ್ಶನ ಮಾಡಿದ್ದೇವೆ. ವಿಪಕ್ಷ ನಾಯಕರ ಜವಾಬ್ದಾರಿ ನಿರ್ವಹಿಸುತ್ತಿದ್ದೇವೆ. ಸರಕಾರ ಉತ್ತರ ಕೊಡುತ್ತಿಲ್ಲ, ನಾವೀಗ ಜನರಿಂದ ಉತ್ತರ ಬಯಸುವಂತಾಗಿದೆ ಎಂದು ಹೇಳಿದರು. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿಸುವಾಗ ‘ಸರಕಾರದ ಕೆಲಸ ದೇವರ ಕೆಲಸ’ ಎಂಬ ದೊಡ್ಡ ವಿಷಯವನ್ನಿಟ್ಟು ಇದನ್ನು ನಿರ್ಮಿಸಿದ್ದಾರೆ. ಹೆಣ್ಮಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು ದೇವರ ಕೆಲಸವೇ? ನಾವು ಹೇಳಿದಂತೆ ನಡೆದುಕೊಳ್ಳದಿದ್ದರೆ ಲಾರಿ ಹತ್ತಿಸುತ್ತೇವೆ ಎಂದು ಬೆದರಿಸುವುದು ದೇವರ ಕೆಲಸವೇ? ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಿದ್ದಾಗಿ ಹೇಳಿದಾಗ 87 ಕೋಟಿ ಮಾತ್ರ ನುಂಗಿದ್ದಾಗಿ ಹೇಳುವುದು ದೇವರ ಕೆಲಸವೇ? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಗಳು ಬರೆದಿಟ್ಟ ಹೆಸರುಗಳನ್ನು ಮರೆಮಾಚಿದ್ದು ದೇವರ ಕೆಲಸವೇ?” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...