ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್, ಕುಮಾರಸ್ವಾಮಿ ಕುಮ್ಮಕ್ಕು: ಕೃಷ್ಣ ಬೈರೇಗೌಡ ಆರೋಪ

Date:

ಶಾಸಕ ಮುನಿರತ್ನ ಅವರ ದುಷ್ಕೃತ್ಯವನ್ನು ಖಂಡಿಸದೆ ಆರ್. ಅಶೋಕ್, ಎಚ್‌ ಡಿ ಕುಮಾರಸ್ವಾಮಿ ಸುಮ್ಮನೆ ಇದ್ದಾರೆ. ಇವರ ಕುಮ್ಮಕ್ಕು ಇಲ್ಲದೆ ಇಷ್ಟೆಲ್ಲ ನಡೆಯುತ್ತದೆಯೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುನಿರತ್ನ ಮಾಡಿದ್ದು ತಪ್ಪು ಎಂದು ಇವರು ಎಲ್ಲಿಯೂ ಮಾತನಾಡಿಲ್ಲ. ಮುನಿರತ್ನ ಭ್ರಷ್ಟಾಚಾರಿ, ಮನೆಯಲ್ಲಿಯೇ ಬಿಬಿಎಂಪಿ ಬಿಲ್ ಬರೆಯುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಆದರೆ ಈಗ ಹನಿಟ್ರ್ಯಾಪ್ ನಡೆಸುತ್ತಾರೆ ಎನ್ನುವ ಆಘಾತಕಾರಿ ಅಂಶ ತಿಳಿದು ಬಂದಿದೆ” ಎಂದು ಹೇಳಿದರು.

“ಅಧಿಕಾರಿಗಳು, ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಇದಕ್ಕೆ ಏಡ್ಸ್ ಇರುವವರನ್ನೇ ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತೆಯೇ ದೂರು ನೀಡಿದ್ದಾರೆ. ಇಷ್ಟೆಲ್ಲ ಕಂಡು ಬಂದರೂ ಬಿಜೆಪಿಯವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್‌ನಲ್ಲಿ ಇದ್ದಾಗ ತಪ್ಪು ಮಾಡಿದ್ದರೆ ಕೇಳಬೇಕಾಗಿತ್ತು. ಬಿಜೆಪಿಯಲ್ಲಿ ಇದ್ದಾಗ ಕೇಳಬಾರದು ಎನ್ನುವ ಮನಸ್ಥಿತಿ ಆರ್.ಅಶೋಕ್ ಅವರದ್ದು. ಅಶೋಕ್ ಮತ್ತು ಕುಮಾರಸ್ವಾಮಿಗೆ ಮನುಷ್ಯತ್ವ ಇದೆಯಾ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶೇ.100ರಷ್ಟು ಸಾಚ ಯಾರೂ ಇಲ್ಲ. ಎಲ್ಲರೂ ತಪ್ಪು ಮಾಡುತ್ತಾರೆ. ಆದರೆ ಮುನಿರತ್ನ ಮಾಡಿರುವುದು ಸರಿಯೇ ಎಂದು ಯೋಚಿಸಲಿ. ಇಷ್ಟೆಲ್ಲಾ ಹೊರ ಬಂದಿದ್ದರೂ ಬೆಂಬಲವಾಗಿ ನಿಂತವರೂ ಸಹ ಅಪರಾಧದ ಭಾಗವಾಗಿದ್ದಾರೆ” ಎಂದು ಕಿಡಿಕಾರಿದರು.

“ಮುನಿರತ್ನ ಒಕ್ಕಲಿಗ ಸಮಾಜದ ಅವಹೇಳನ ಮಾಡಿದ್ದಾರೆ. ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇವೆ. ಒಕ್ಕಲಿಗ ಸಮಾಜದ ಮೇಲೆ ದಾಳಿ ನಡೆದಾಗ ಸಮುದಾಯದ ಎಚ್ಚೆತ್ತುಕೊಂಡು ಒಂದು ಧ್ವನಿಯಲ್ಲಿ ಖಂಡಿಸಬೇಕು. ಸಮಾಜವು ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಗೌರವ ಕೊಡುತ್ತದೆ. ಅವರ ನೇತೃತ್ವದಲ್ಲಿ ಖಂಡನಾ ನಿರ್ಣಯ ಸಭೆ ಆಗಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಸ್ವಾಮೀಜಿ ಅವರ ತೀರ್ಮಾನವೇ ಅಂತಿಮ.
ರಾಜ್ಯದಲ್ಲಿ ಒಕ್ಕಲಿಗ ಸಮಾಜ ಗೌರವಯುತವಾಗಿ ನಡೆದುಕೊಂಡು ಬಂದಿದೆ. ವಿನಾಕಾರಣ ಅವಹೇಳನ ಮಾಡಬಹುದು ಎಂದರೆ ಸಮಾಜದ ಗೌರವಕ್ಕೆ ಚ್ಯುತಿ ಬರುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...