ಪಕ್ಷಕ್ಕಾಗಿ ತೆರಿಗೆ ಹಣ ಬಳಕೆ, ಜನರಿಗೆ ಬೆಲೆ ಏರಿಕೆ ಹೊರೆ: ಸರ್ಕಾರದ ವಿರುದ್ಧ ಆರ್‌ ಅಶೋಕ್‌ ವಾಗ್ದಾಳಿ

Date:

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದು ಮಾಡಿದ್ದರೆ 150 ಕೋಟಿ ರೂ. ಹಣ ಉಳಿಸಬಹುದಿತ್ತು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ‌ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು” ಎಂದರು.

“ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ” ಟೀಕಿಸಿದರು.

“ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಹೋರಾಟ

“ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಯುಗಾದಿ ಹಬ್ಬದ ಕಳೆದ ನಂತರ ಇದರ ದಿನಾಂಕ ನಿಗದಿ ಮಾಡಲಾಗುವುದು. ಈವರೆಗೆ ಹೆಚ್ಚು ಮಾಡಿದ 9 ರೂ. ನಲ್ಲಿ ಲಾಭವನ್ನು ರೈತರಿಗೆ ನೀಡಿಲ್ಲ. ಪ್ರೋತ್ಸಾಹಧನವನ್ನು ಇನ್ನೂ ಬಾಕಿ ಉಳಿಸಿಕೊಳ್ಳಲಾಗಿದೆ. ಈಗ ಹೆಚ್ಚು ಮಾಡಿದ ದರದಲ್ಲಿ ಎಷ್ಟು ಸರ್ಕಾರಕ್ಕೆ ಹೋಗಲಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಪ್ರೋತ್ಸಾಹಧನ ಹೆಚ್ಚಳ ಕುರಿತು ಘೋಷಣೆ ಮಾಡಿತ್ತು. ಅದನ್ನು ಇನ್ನೂ ಜಾರಿ ಮಾಡಿಲ್ಲ” ಎಂದರು.

“ಬಿಜೆಪಿ ಅವಧಿಯಲ್ಲಿ ಮಾರ್ಗಸೂಚಿ ದರ ಇಳಿಸಲಾಗಿತ್ತು. ಬಸ್‌ ಟಿಕೆಟ್‌ ದರ, ನೀರಿನ ದರ ಏರಿಸಿರಲಿಲ್ಲ. ಹಿಂದಿನ ಯಾವುದೇ ಮುಖ್ಯಮಂತ್ರಿ ಮಾಡದಷ್ಟು ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ. ಅಂದರೆ 65% ನಷ್ಟು ಸಾಲವನ್ನು ಇವರೊಬ್ಬರೇ ಮಾಡಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...