ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ, ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲ್ಲ: ಆರ್ ಅಶೋಕ್

Date:

ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದೆ. ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕರು, “2013-14 ರ ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಬಜೆಟ್‌ ಗಾತ್ರ 16,65,297 ಕೋಟಿ ರೂ. ಆಗಿತ್ತು. 2025-26 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 50,65,345 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದೆ. ಲೂಟಿಯಾಗುತ್ತಿದ್ದ ಹಣವನ್ನು ಮರಳಿ ತಂದಿದ್ದರಿಂದ ಬಜೆಟ್‌ ಗಾತ್ರ ಹೆಚ್ಚಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ – 2025 | ರಾಜ್ಯದ ಸಚಿವರು ಹೇಳಿದ್ದೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದೆ 11,09,997 ಕೋಟಿ ರೂ. ಯೋಜನೇತರ ವೆಚ್ಚವಾಗಿದ್ದರೆ, ಈಗ ಅದು 39,44,255 ಕೋಟಿ ರೂ. ಗೆ ಏರಿದೆ. ಬಂಡವಾಳ ವೆಚ್ಚ ಆಗ 2,29,129 ಕೋಟಿ ರೂ. (13.7%) ಆಗಿದ್ದು, ಈಗ 11,21,090 ಕೋಟಿ ರೂ. ಆಗಿದೆ. ಅಂದರೆ ಬಂಡವಾಳ ವೆಚ್ಚ 9 ಲಕ್ಷ ಕೋಟಿ ರೂ. (22.13%) ಏರಿಕೆ ಕಂಡಿದೆ. ಅಂದರೆ ತೆರಿಗೆ ಸೋರಿಕೆ, ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗಿದೆ” ಎಂದರು.

“ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ ನೀಡಲಾಗಿದೆ. 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಜನರಿಗೆ ಅನುಕೂಲವಾಗಿದೆ. ಸಿಎಂ ಸಿದ್ದರಾಮಯ್ಯ ಗಾಳಿ ಒಂದನ್ನು ಬಿಟ್ಟು ಎಲ್ಲಕ್ಕೂ ತೆರಿಗೆ ವಿಧಿಸಿದ್ದಾರೆ. ಮೋದಿ ಸರ್ಕಾರ ಯಾವುದೇ ತೆರಿಗೆಯನ್ನು ಹೇರಿಲ್ಲ” ಎಂದರು.

“ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಸಿಗುವ ಸಾಲದ ಮಿತಿಯನ್ನು 3 ಲಕ್ಷ ರೂ. ನಿಂದ 5 ಲಕ್ಷ ರೂ. ಗೆ ಏರಿಸಲಾಗಿದೆ. ಸ್ಟಾರ್ಟ್‌ಅಪ್ ಕಂಪನಿಗಳಿಗೆ 10 ಕೋಟಿ ರೂ.ನಿಂದ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ವರ್ಗದ 5 ಲಕ್ಷ ಮಹಿಳೆಯರಿಗೆ ಹೊಸ ಯೋಜನೆಯಡಿ ಟರ್ಮ್‌ಲೋನ್‌ ನೀಡಲಾಗುತ್ತದೆ” ಎಂದು ಹೇಳಿದರು.

“ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಕೇಂದ್ರ ಸರ್ಕಾರದಿಂದ 1 ಕೋಟಿ ತಾಯಂದಿರಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆ ತರಲಾಗಿದೆ. ಇದು ಬಾಣಂತಿಯರ ಆರೋಗ್ಯ ರಕ್ಷಣೆಗೆ ಸಹಾಯವಾಗಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ 2025 | ಜನರಿಗೆ ಅನುಕೂಲವಾಗುವುದು ಏನೂ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

“ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್‌ ಕೇಂದ್ರ ಆರಂಭಿಸುವ ಮೂಲಕ ಬಡವರಿಗೆ ಅನುಕೂಲ ಕಲ್ಪಿಸಲಾಗಿದೆ. ಕ್ಯಾನ್ಸರ್‌ ಸೇರಿದಂತೆ 36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ. ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುತ್ತದೆ. ಟಿವಿ, ಸ್ವದೇಶಿ ಉಡುಪು, ಚರ್ಮ ಉತ್ಪನ್ನಗಳ ದರ ಇಳಿಕೆಯಾಗಲಿದೆ” ಎಂದರು.

“ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಕಾಂಗ್ರೆಸ್‌ ಇನ್ನೂ ಕೇಂದ್ರದಿಂದ ತಾರತಮ್ಯ ಎಂದು ಹೇಳುತ್ತಲೇ ಇದೆ. ಆದಾಯ ತೆರಿಗೆ ಮಿತಿ ಹೆಚ್ಚಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರು ಅಭಿನಂದನೆ ತಿಳಿಸಿಲ್ಲ. ಜಲಜೀವನ್‌ ಮಿಷನ್‌ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಎಲ್ಲ ಯೋಜನೆಗಳು ರಾಜ್ಯದ ಜನರಿಗೆ ಸಿಗಲಿದೆ. ಆದರೆ ಕರ್ನಾಟಕಕ್ಕೆ ಏನೂ ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕರು ಸುಳ್ಳು ಹೇಳುತ್ತಿದ್ದಾರೆ” ಎಂದು ದೂರಿದರು.

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿಯೂ ಬಿಜೆಪಿಯ ಮಿತ್ರ ಪಕ್ಷ ಅಧಿಕಾರದಲ್ಲಿರುವ ಬಿಹಾರಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಉಳಿದ ರಾಜ್ಯಗಳಿಗೆ ಹೆಚ್ಚು ಯೋಜನೆ, ಅನುದಾನ ಘೋಷಿಸಲಾಗಿಲ್ಲ. ಈ ಬಜೆಟ್ ವಿರುದ್ಧ ಹಲವು ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರು ಇದು ‘ಬಿಹಾರಿ ಬಜೆಟ್’ ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...